ಸುದ್ದಿ

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ

ಎರ್ನಾಕುಲಂ: ಮೆಣಸಿನಕಾಳನ್ನು ಕೀಳುವಾಗ ಆಯ ತಪ್ಪಿ ತಮ್ಮ ಮನೆಯ ಬಾವಿಗೆ ಬಿದ್ದ ತನ್ನ ಪತಿಯನ್ನು 56 ವರ್ಷದ ಮಹಿಳೆಯೊಬ್ಬರು ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ.64 ವರ್ಷದ ರಮೇಶನ್ ಎಂಬವರು ಮೆಣಿಸಿನ ಬಳ್ಳಿಯಿಂದ ಮೆಣಸಿನ ಕಾಳನ್ನು ಕೀಳುವಾಗ ಏಣಿ ಜಾರಿದ್ದು, ಮರವು ಬಾವಿಯ ಸನಿಹದಲ್ಲೇ ಇದ್ದುದರಿಂದ ರಮೇಶನ್ ಬಾವಿಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.ತನ್ನ ಪತಿಯು ಕಿರುಚಿಕೊಳ್ಳುತ್ತಿರುವ ಸದ್ದನ್ನು ಕೇಳಿದ ಮನೆಯೊಳಗಿದ್ದ ಪದ್ಮಾ ಹೊರಗೆ ಓಡಿ ಬಂದಿದ್ದಾರೆ. ತನ್ನ ಪತಿಯು 40 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಕಂಡು ಕ್ಷಣಕಾಲ […]

ಕೇರಳ: 40 ಅಡಿ ಆಳದ ಬಾವಿಗೆ ಬಿದ್ದ ಪತಿಯನ್ನು ರಕ್ಷಿಸಿದ 56 ವರ್ಷದ ಮಹಿಳೆ Read More »

ಬೆಳ್ಳಿಪ್ಪಾಡಿ ಗುತ್ತು ತರವಾಡು ಮನೆಯಲ್ಲಿ  ದೈವಗಳ ವರ್ಷಾವಾದಿ ನೇಮೋತ್ಸವ

ಕಾಸರಗೋಡು ತಾಲೂಕು ಬೆಳ್ಳಿಪ್ಪಾಡಿ ಗುತ್ತು ತರವಾಡು ಮನೆಯಲ್ಲಿ ಧರ್ಮದೈವ ಹಾಗೂ ಸಪರಿವಾರ ದೈವಗಳ ವರ್ಷಾವಾದಿ ನೇಮೋತ್ಸವವು ಫೆ. ೬ರಿಂದ ಫೆ. ೭ರತನಕ ನಡೆಯಲಿದೆ. ಫೆ.೬ರಂದು ಬೆಳಿಗ್ಗೆ ಗಂಟೆ ೮ರಿಂದ ಪುಣ್ಯಾಹವಾಚನ, ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ತಿರುಪತಿ ವೆಂಕಟ್ರಮಣ ದೇವರ ಮುಡಿಪು ಪೂಜೆ ನಣತರ ದೈವಗಳಿಗೆ ತಂಬಿಲ ಸೇವೆ ನಡೆದು ಮದ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ, ರಾತ್ರಿ ೭ ಗಂಟೆಗೆ ದೈವಗಳ ಭಂಡಾರ ತೆಗೆಯುವುದು, ನಂತರ ಮೈಸಂದಾಯ ದೈವದ ನೇಮೋತ್ಸವ ನಡೆಯದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮರುದಿವಸ

ಬೆಳ್ಳಿಪ್ಪಾಡಿ ಗುತ್ತು ತರವಾಡು ಮನೆಯಲ್ಲಿ  ದೈವಗಳ ವರ್ಷಾವಾದಿ ನೇಮೋತ್ಸವ Read More »

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ

ವಿಟ್ಲ :  ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು, ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮ ಚಂದಳಿಕೆ ಭಾರತ್ ಆಡಿಟೋರಿಯಂ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ  ದಿನಕರ ಕುಲಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಜೀವ ವಿಮೆಯ ಮಾಹಿತಿಯನ್ನು ಪುತ್ತೂರು ಅಂಚೆ ಕಚೇರಿಯ ಮಾರ್ಕೆಟಿಂಗ್ ಮ್ಯಾನೇಜರ್ ಗುರುಪ್ರಸಾದ್ ನೀಡಿದರು. ಬಳಿಕ ವಿಟ್ಲ ವಲಯದ ಸದಸ್ಯರ ವಿಮಾ ನೊಂದಾವಣೆ ಮಾಡಲಾಯಿತು. ವಿಟ್ಲ ವಲಯದ ಅಧ್ಯಕ್ಷ ಲೀಯೋ ಡಿ ಲಸ್ರಾದೊ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ 

ದ. ಕ. ಗ್ಯಾರೇಜ್ ಮಾಲಕರ ಸಂಘ ಮಂಗಳೂರು , ವಿಟ್ಲ ವಲಯಕ್ಕೆ ಜಿಲ್ಲಾಧ್ಯಕ್ಷರ ಅಧಿಕೃತ ಬೇಟಿ Read More »

ಬ್ಯಾಂಕಿಗೆ ಕೋಟಿಗಟ್ಟಲೆ ರೂ. ವಂಚನೆ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು

ನೌಕರರ ಹೆಸರಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಪಡೆದು ವಂಚಿಸಿದ ಪ್ರಕರಣ ಬೆಂಗಳೂರು: ಬ್ಯಾಂಕಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಿದೆ. ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ಕೂ ಜನರು ತಪ್ಪಿತಸ್ಥರು ಎಂದು ಕೋರ್ಟ್ ಹೇಳಿದೆ. ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚನೆ ಮಾಡಿದ್ದ ಆರೋಪ

ಬ್ಯಾಂಕಿಗೆ ಕೋಟಿಗಟ್ಟಲೆ ರೂ. ವಂಚನೆ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು Read More »

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ

ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್  ಕಿರುಕುಳಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮಸ್ಥರು ಊರುಗಳನ್ನೇ ತೊರೆಯುತ್ತಿದ್ದಾರೆ. ಫೈನಾನ್ಸ್ ಹಾವಳಿಗೆ ಅಂಕುಶ ಹಾಕಲು ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಪ್ರಯೋಗಿಸಿದೆ. ಇತ್ತೀಚೆಗೆ ಸುಗ್ರೀವಾಜ್ಞೆ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ಇದೀಗ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ Read More »

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ

ಅಂತ್ಯ ಕಾಣದ ಕಚ್ಚಾಟದಿಂದ ಕಾರ್ಯಕರ್ತರಿಗೆ ಹತಾಶೆ ಬೆಂಗಳೂರು: ಬಿಜೆಪಿಯ ಒಳಜಗಳ ಪರಾಕಾಷ್ಠೆಗೆ ತಲುಪಿದ್ದು, ಸದ್ಯ ಪಕ್ಷ ಗಟ್ಟಿ ನಾಯಕತ್ವವಿಲ್ಲದೆ ಸೂತ್ರ ಕಡಿದ ಗಾಳಿಪಟದಂತೆ ಸಿಕ್ಕದಲ್ಲೆಡೆಗೆ ಹಾರಾಡುತ್ತಿದೆ. ಕಳೆದ ಕೆಲವು ತಿಂಗಳಿಂದೀಚೆಗೆ ನಡೆಯುತ್ತಿರುವ ಬಣ ಜಗಳಕ್ಕೆ ಮದ್ದರೆಯಲು ಬಿಜೆಪಿ ಹೈಕಮಾಂಡ್‌ಗೆ ಸಾಧ್ಯವಾಗದಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಚಿಂತೆಗೀಡು ಮಾಡಿದೆ.ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಡಲು ಸಾಕಷ್ಟು ವಿಷಯಗಳಿದ್ದರೂ ಪ್ರಮುಖ ವಿಪಕ್ಷವಾಗಿರುವ ಬಿಜೆಪಿ ನಾಯಕರು ತಮ್ಮಲ್ಲೇ ಕಚ್ಚಾಡುತ್ತಾ ಕಾಲಹರಣ ಮಾಡುತ್ತಿರುವುದನ್ನು ಕಂಡು ಕಂಗಾಲಾಗಿರುವ ಸಾಮಾನ್ಯ ಕಾರ್ಯಕರ್ತರು ಮುಂದೇನು ಎಂದು ಭವಿಷ್ಯದ ಬಗ್ಗೆ

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ Read More »

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು…

ಫೆ.10ರಂದು ಏಳು ಸಾಧಕರ ಜೊತೆ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲಿರುವ ಮೋದಿ ಹೊಸದಿಲ್ಲಿ : ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನಡೆಸುವ ಆತ್ಮೀಯ ಸಂವಾದ ಪರೀಕ್ಷಾ ಪೆ ಚರ್ಚೆಗೆ ಈ ವರ್ಷ ಹೊಸ ಆಯಾಮ ದೊರಕಲಿದೆ. ಪ್ರಧಾನಿ ಜೊತೆಗೆ ವಿವಿಧ ಕ್ಷೇತ್ರಗಳ ಏಳು ಸಾಧಕರು ಕೂಡ ಪ್ರಧಾನಿ ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಕುರಿತು ಮಕ್ಕಳಿಗೆ ಸಲಹೆ ಸೋಚನೆಗಳನ್ನು ಕೊಡಲಿದ್ದಾರೆ. ಈ ವರ್ಷದ ʼಪರೀಕ್ಷಾ ಪೆ ಚರ್ಚಾʼ ಫೆ.10ರಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆಯಲಿದೆ.

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು… Read More »

ಹೈಸ್ಕೂಲ್‌ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ

ಚೆನ್ನೈ : ಹೈಸ್ಕೂಲ್‌ ವಿದ್ಯಾರ್ಥಿನಿಯ ಮೇಲೆ ಆಕೆಯ ಶಾಲೆಯ ಮೂವರು ಶಿಕ್ಷಕರೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ಈ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಶಿಕ್ಷಕರನ್ನು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಶಿಕ್ಷಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ ಮಗಳ ಮೇಲೆ ಶಾಲೆಯಲ್ಲಿ

ಹೈಸ್ಕೂಲ್‌ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ Read More »

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ

ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫೆ.5 ಬುಧವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ ಹಾಗೂ ವಸಂತ

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ Read More »

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ

ಮಾಜಿ ಪ್ರಧಾನಿ ಶೇಖ್‌ ಹಸೀನಾ ಭಾಷಣದಿಂದ ಕೆರಳಿದ ವಿರೋಧಿಗಳ ಕೃತ್ಯ ಢಾಕಾ: ದಂಗೆಯಿಂದ ಕಂಗಾಲಾಗಿರುವ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಮಾಡಿದ ಭಾಷಣದಿಂದ ಕೆರಳಿದ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿ ಅಪಾರ ನಾಶನಷ್ಟ ಉಂಟುಮಾಡಿದೆ. ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ Read More »

error: Content is protected !!
Scroll to Top