ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯ ಫೋಟೋ ತೆಗೆದ ದುಷ್ಕರ್ಮಿ| ಆರೋಪಿ ವಿರುದ್ದ ದೂರು ದಾಖಲು
ಸುಳ್ಯ : ಇಲ್ಲಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಹಿಂಬದಿಯಲ್ಲಿದ್ದ ಮಹಿಳಾ ಶೌಚಾಲಯದಲ್ಲಿ ಮಹಿಳೆಯೊಬ್ಬರ ಅಪರಿಚಿತ ವ್ಯಕ್ತಿ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಶೌಚಾಲಯದ ಕಿಟಕಿಯ ಗ್ಲಾಸ್ ಸರಿದಿದ್ದು, ಸರಿದ ಭಾಗದಿಂದ ಫೋಟೋವನ್ನು ಕ್ಲಿಕ್ಕಿಸಿದ್ದಾನೆ. ಈ ವೇಳೆ ಮಹಿಳೆ ಗಾಭಾರಿಗೊಂಡು ಜೋರಾಗಿ ಕಿರುಚಿಕೊಂಡಾಗ ಆತ ಪರಾರಿಯಾಗಿದ್ದಾನೆ ಎಂದು ಮಹಿಳೆ ಸುಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ದೂರಿನನ್ವಯ ತನಿಖೆ ಪ್ರಾರಂಭಿಸಿದ್ದಾರೆ. […]
ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆಯ ಫೋಟೋ ತೆಗೆದ ದುಷ್ಕರ್ಮಿ| ಆರೋಪಿ ವಿರುದ್ದ ದೂರು ದಾಖಲು Read More »