ಸುದ್ದಿ

ಬಕ್ರೀದ್ ಹಿನ್ನೆಲೆ ಗೋವುಗಳ ಅಕ್ರಮ ಸಾಗಾಟ, ವಧೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ ವಿಎಚ್‌ಪಿ, ಬಜರಂಗದಳ

ಪುತ್ತೂರು: ಇನ್ನೇನು ಕೆಲವೇ ದಿನಗಳಲ್ಲಿ ಬಕ್ರೀದ್ ಹಬ್ಬ ಬರಲಿದ್ದು, ಈ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಗೋವುಗಳ ಸಾಗಾಟ, ಸಾರ್ವಜನಿಕ ಸ್ಥಳಗಳಲ್ಲಿ ಗೋವುಗಳನ್ನು ಬಲಿ‌ ಕೊಡುವುದು ಮೊದಲಾದ ಕೃತ್ಯಗಳು ನಡೆಯುವ ಸಾಧ್ಯತೆ ಇದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪುತ್ತೂರು ನಗರ ಪೊಲೀಸರಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಮನವಿ ಸಲ್ಲಿಸಲಾಯಿತು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ […]

ಬಕ್ರೀದ್ ಹಿನ್ನೆಲೆ ಗೋವುಗಳ ಅಕ್ರಮ ಸಾಗಾಟ, ವಧೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ ವಿಎಚ್‌ಪಿ, ಬಜರಂಗದಳ Read More »

ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ‌ಜೀವಂತ ಸಮಾಧಿಯಾದ ‌ಘಟನೆ ನಿಡಗುಂದಿಯಲ್ಲಿ ನಡೆದಿದೆ. ಮಹಾದೇವಿ ವಾರದ (55) ಎಂಬವರೇ ಮೃತ ದುರ್ದೈವಿ. ಪಟ್ಟಣದ ಗೌರೀಶ್ವರ ದೇಗುಲದ ಸಮೀಪ ಈ ದುರ್ಘಟನೆ ನಡೆದಿರುವುದಾಗಿದೆ. ಮೊನ್ನೆ ಸುರಿದ ಮಳೆಗೆ ಹಳೆಯ ಮನೆಯ ಮೇಲ್ಛಾವಣಿ ಕುಸಿದಿದೆ. ನಸುಕಿನ ಜಾವ ಈ ಘಟನೆ ನಡೆದಿದ್ದು, ಮಹಾದೇವಿ ಅವರ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಪತಿ ಶಿವಾನಂದ ಅವರು ಮನೆಯ ಹೊರ ಭಾಗದಲ್ಲಿ ಮಲ ಆಗಿದ್ದು, ಇದರಿಂದಾಗಿ

ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು Read More »

ಹೋರಿ ಹಾಯ್ದು ಗಾಯಗೊಂಡಿದ್ದ ಯುವಕ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ನಿವಾಸಿ ಯುವಕಹೋರಿ ಹಾಯ್ದು ಗಾಯಗೊಂಡು ಉಪ್ಪಿನಂಗಡಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ಉಪ್ಪಿನಂಗಡಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವಿದೆ ಎಂದು ಆರೋಪಿಸಿ ಮೃತನ ಮನೆಯವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಗೇರುಕಟ್ಟೆಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ಶರೀಫ್ (35) ಮೃತ ವ್ಯಕ್ತಿ. ಮೇ 14ರಂದು ಮನೆಯಲ್ಲಿ ಹೋರಿ

ಹೋರಿ ಹಾಯ್ದು ಗಾಯಗೊಂಡಿದ್ದ ಯುವಕ ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ Read More »

ಜೂ.1ರಿಂದ ಎರಡು ತಿಂಗಳು ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಮಂಗಳೂರು: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ 1986ರನ್ವಯ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕರ್ನಾಟಕ ಕರಾವಳಿಯಲ್ಲಿ ಎರಡು ತಿಂಗಳು ಮಳೆಗಾಲದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಜಾರಿಗೆ ಬರಲಿದೆ. ಯಾಂತ್ರೀಕೃತ ದೋಣಿಗಳು ಮತ್ತು 10 ಅಶ್ವಶಕ್ತಿ (ಎಚ್‌ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕಾ ಚಟುವಟಿಕೆಗಳನ್ನು 2026ರ ಜೂನ್ 1ರಿಂದ ಜುಲೈ 31ರವರೆಗೆ (ಉಭಯ ದಿನಗಳು ಸೇರಿದಂತೆ) ಅಂದರೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ

ಜೂ.1ರಿಂದ ಎರಡು ತಿಂಗಳು ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ದಿಡುಪೆ ಜಲಪಾತದಲ್ಲಿ ಯುವತಿಯರಿಗೆ ಕಿರುಕುಳ : ಮೂವರು ಸೆರೆ, ಕಾರು ವಶ

ತಾವು ಕರೆತಂದಿದ್ದ ಕಾಲೇಜು ಯುವತಿಯರಿಗೆ ಕಿರುಕುಳ ನೀಡಿದ ಕಾಮುಕರು ಬೆಳ್ತಂಗಡಿ : ದಿಡುಪೆ ಜಲಪಾತದಲ್ಲಿ ಮೂವರು ಯುವತಿಯರಿಗೆ ಅವರೊಂದಿಗೆ ಬಂದಿದ್ದ ಯುವಕರೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರ ಸಂಬವಿಸಿದ್ದು, ಸಾರ್ವಜನಿಕರು ಈ ಯುವಕರನ್ನು ಹಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಹಾಗೂ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ 20ರಂದು ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ

ದಿಡುಪೆ ಜಲಪಾತದಲ್ಲಿ ಯುವತಿಯರಿಗೆ ಕಿರುಕುಳ : ಮೂವರು ಸೆರೆ, ಕಾರು ವಶ Read More »

ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ

ತೈಲ ಬೆಲೆ ಏರಿಕೆ, ಹಣದುಬ್ಬರದ ಕುರಿತು ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದೆಹಲಿಯಲ್ಲಿ ಇಂದು ಪಿಎಂ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ; ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆ ಸಾಧ್ಯತೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಸಂಜೆ 4 ಗಂಟೆಗೆ ದೆಹಲಿಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆಸಲಿದ್ದಾರೆ. ಸರ್ಕಾರದೊಳಗೆ ರಾಜಕೀಯ ಮತ್ತು ಆರ್ಥಿಕ ವಿಷಯಗಳ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ

ಇಂದು ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ Read More »

ಮೀನುಗಾರಿಕೆ ದೋಣಿ ಮುಳುಗಡೆ : 6 ಮೀನುಗಾರರ ರಕ್ಷಣೆ

ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಿಂದ ತೆರಳಿದ ಆಳಸಮುದ್ರ ಬೋಟೊಂದು ಮಂಗಳವಾರ ರಾತ್ರಿ ಕೋಡಿಬೆಂಗ್ರೆ ಸಮೀಪದ ಮುಳುಗಡೆಗೊಂಡಿದ್ದು ಅದರಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬೋಟಿನ ತಾಂಡೇಲ ಉತ್ತರ ಕನ್ನಡ ಜಿಲ್ಲೆಯ ರಾಘವೇಂದ್ರ, ಕಾರ್ಮಿಕರಾದ ರೋಹಿದಾಸ್ ಮೊಗೇರ, ಶಾಮ ಸುಂದರ್‌ ಮಲೀಕ್, ಉಜ್ವಲ್ ಮಲೀಕ್, ಸತ್ಯಜಿತ್ ಮಲೀಕ್, ತ್ರಿಲೇಶ್ ಭಾಸ್ಕರ್ ರಕ್ಷಿಸಲ್ಪಟ್ಟ ಮೀನುಗಾರರು ಎಂದು ಗುರುತಿಸಲಾಗಿದೆ. ಕಿದಿಯೂರು ಪಡುಕರೆಯ ಸಂದೀಪ್ ಕುಮಾರ್ ಎಂಬವರಿಗೆ ಸೇರಿದ ಸಾಯಿದತ್ತ ಆಳಸಮುದ್ರ ಬೋಟು ಮೇ 17ರಂದು ರಾತ್ರಿ 10.30ಕ್ಕೆ ಮಲ್ಪೆ

ಮೀನುಗಾರಿಕೆ ದೋಣಿ ಮುಳುಗಡೆ : 6 ಮೀನುಗಾರರ ರಕ್ಷಣೆ Read More »

1.66 ಕೋಟಿ ರೂ. ಒಡವೆ ಕದ್ದು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಯುವತಿ ಬಂಧನ

ಬಾತ್‌ರೂಂಗೆ ಹೋದಾಗ ಒಡವೆ ಸಮೇತ ಪರಾರಿಯಾಗಿದ್ದ ಪ್ರಿಯಕರನೂ ಅರೆಸ್ಟ್‌ ಅಹಮದಾಬಾದ್: ಪ್ರಿಯಕರನ ಜೊತೆ ಓಡಿಹೋಗಲು ತಾನು ಕೆಲಸ ಮಾಡುತ್ತಿದ್ದ ಚಿನ್ನದ ಶೋರೂಂನಲ್ಲೇ ಯುವತಿಯೊಬ್ಬಳು ಬರೋಬ್ಬರಿ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾದ ಘಟನೆ ಅಹಮದಾಬಾದ್‌ನ ನಿಕೋಲ್ ಪ್ರದೇಶದಲ್ಲಿ ನಡೆದಿದೆ. ಮೇ 11ರಂದು ನಡೆದಿದ್ದ ಈ ಹೈಡ್ರಾಮಾ ಕಳ್ಳತನ ಪ್ರಕರಣದ ಆರೋಪಿ ಕರಾವಳಿ ಮೂಲದ ಹರ್ಷಿದಾ ಶೆಟ್ಟಿ ಹಾಗೂ ಆಕೆಯ ಪ್ರಿಯಕರನನ್ನು ಅಹಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಯ್ತು ಯುವತಿಯ ಕರಾಮತ್ತು ನಿಕೋಲ್

1.66 ಕೋಟಿ ರೂ. ಒಡವೆ ಕದ್ದು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಯುವತಿ ಬಂಧನ Read More »

ಯುವತಿ ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ : ಆರೋಪಿ ಮಹಿಳೆ ಸೆರೆ

ಹಣಕ್ಕಾಗಿ ಪಕ್ಕದ ರೂಮ್‌ನ ಸ್ನೇಹಿತೆಯಿಂದಲೇ ಮಾರಕ ಕೃತ್ಯ ಉಡುಪಿ : ಹಣಕಾಸಿನ ತೊಂದರೆಯಿಂದ ಪಾರಾಗಲು ಪಕ್ಕದ ರೂಮಿನಲ್ಲಿದ್ದ ಯುವತಿಯ ತಲೆಗೆ ಕಾಂಕ್ರೀಟ್‌ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನಿಸಿ ಚಿನ್ನಾಭರಣ ದೋಚಿದ್ದ ಆರೋಪಿ ಮಹಿಳೆಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೇರಿ ಗ್ರಾಮದ ಕೇಣಿ ಪೋಸ್ಟ್ ನಿವಾಸಿ ಸುಷ್ಮಾ ಅಣ್ಣಪ್ಪ ನಾಯಕ್ (31) ಎಂದು ಗುರುತಿಸಲಾಗಿದೆ. ದೂರುದಾರೆ ಮೇಘಾ ಗೌಡ ತನ್ನ ಸ್ನೇಹಿತರಾದ ನಾಗರತ್ನ, ಗಗನ ಮತ್ತು ಯೋಗಿತಾ ಅವರೊಂದಿಗೆ ಶಾಂತಿನಗರದ

ಯುವತಿ ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ : ಆರೋಪಿ ಮಹಿಳೆ ಸೆರೆ Read More »

35 ಕೋ.ರೂ. ಡ್ರಗ್ಸ್‌ ವಶ : ಎಂಟು ಆರೋಪಿಗಳು ಸೆರೆ

ದೆಹಲಿಯಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದ ದುಷ್ಕರ್ಮಿಗಳು ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ ಎಂಟು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದೆ. ಪೊಲೀಸರು ಒಟ್ಟು ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ

35 ಕೋ.ರೂ. ಡ್ರಗ್ಸ್‌ ವಶ : ಎಂಟು ಆರೋಪಿಗಳು ಸೆರೆ Read More »

error: Content is protected !!
Scroll to Top