ಸುದ್ದಿ

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ

ತಿರುಪತಿ : ತಿರುಮಲ ತಿರುಪತಿ ದೇವಸ್ಥಾನ (TTD) ಇಂದು ಬೆಳಿಗ್ಗೆ 10:00 ಗಂಟೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಟಿಟಿಡಿಯು ವೆಬ್​​ಸೈಟ್​​ನಲ್ಲಿ ತಿಳಿಸಿರುವ ತಿಂಗಳಿನಲ್ಲಿ ತಿರುಮಲದಲ್ಲಿ ವಿಶೇಷ ಮತ್ತು ಹೆಚ್ಚುವರಿ ವಸತಿ ಕೊಠಡಿಗಳನ್ನು ಬಿಡುಗಡೆ ಮಾಡಲಿದೆ. ಮೇ ಮತ್ತು ಜೂನ್‌ನಲ್ಲಿ ತಿರುಮಲಗೆ ಭೇಟಿ ನೀಡಬೇಕಾದರೆ ಟೋಕನ್ ಪಡೆಯಲು ಭಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಕಲ್ಯಾಣೋತ್ಸವ, ಉಂಜಲ್ ಸೇವೆ, ಆರ್ಜಿತ ಬ್ರಹ್ಮೋತ್ಸವಂ […]

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ Read More »

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್‌ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್‌ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್‌ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆರಿಯಾ ಗ್ರಾಮದ ಸಿಯೊನ್ ಆಶ್ರಮದಲ್ಲಿ ಏ.23 ರಂದು ಸಂಭವಿಸಿದೆ.ಕಿಶೋರ್ ಕುಮಾರ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮಾನಸಿಕ ಅಸ್ವಸ್ಥೆಯಿಂದ ಬಳಲುತ್ತಿದ್ದು, ಮಧ್ಯಾಹ್ನದ ಊಟಕ್ಕೆ ಬಾರದೇ ಇರುವುದನ್ನು ಗಮನಿಸಿ ಆಶ್ರಮದ ಸಿಬ್ಬಂಧಿ ಜಿಬಿನ್ ಎಂಬವರು ಹೋಗಿ ನೋಡಿದಾಗ, ಹಾಲ್‌ನ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು

ಸುಳ್ಯ : ಬೆಂಗಳೂರಿನಲ್ಲಿ ನಡೆದ ಕಾರು ಬೈಕ್‌ ಡಿಕ್ಕಿ ಅಪಘಾತದಲ್ಲಿ ಕೊಲ್ಲಮೊಗ್ರ ನಿವಾಸಿಯೋರ್ವರು ಸಾವನಪ್ಪಿರುವ ಘಟನೆ ಏ.25 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು(30) ಮೃತಪಟ್ಟವರು. ಸೋಮವಾರ ಬೆಳಗ್ಗೆ ಯತೀಶ್ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು Read More »

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಭೇಟಿ

ಪುತ್ತೂರು : ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ‌. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಭೇಟಿ Read More »

ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ವಿಚಾರಣೆ ಮೇ 9 ಕ್ಕೆ ಮುಂದೂಡಿದೆ

ದೆಹಲಿ : ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರದ್ದುಪಡಿಸಿರುವ ಕರ್ನಾಟಕ ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರವನ್ನು ಸುಪ್ರೀಂಕೋರ್ಟ್ ಮೇ 9 ಕ್ಕೆ ಮುಂದೂಡಿದೆ. ಇದರಿಂದ ಬಸವರಾಜ ಬೊಮ್ಮಾಯಿ ಅವರ ಸಂಪುಟದ ನಿರ್ಧಾರ ಜಾರಿಗೆ ಬಿದ್ದಿರುವ ಅಂಕುಶ ಮುಂದುವರೆದಿದೆ. ಮುಸ್ಲಿಮರಿಗೆ ಒಬಿಸಿ ವರ್ಗದಲ್ಲಿ ನೀಡಲಾಗುತ್ತಿದ್ದ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ಮುಂದುವರೆಸಿತು. ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ದ್ವಿಸದಸ್ಯ ಪೀಠಕ್ಕೆ

ಮುಸ್ಲಿಂ ಸಮುದಾಯದ ಮೀಸಲಾತಿ ರದ್ದು ವಿಚಾರಣೆ ಮೇ 9 ಕ್ಕೆ ಮುಂದೂಡಿದೆ Read More »

ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಪೋಟ

ತೃಶೂರ್ : ಎಂಟು ವರ್ಷದ ಬಾಲಕಿ ಮೊಬೈಲ್ ಫೋನ್ ಸ್ಫೋಟಗೊಂಡು ಮೃತಪಟ್ಟಿರುವ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ. ಮೂರನೇ ತರಗತಿ ಬಾಲಕಿ ಆದಿತ್ಯಶ್ರೀ ರಾತ್ರಿ ತಾಯಿಯ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಮುಖ ಮತ್ತು ಕೈಗೆ ಗಂಭೀರ ಸ್ವರೂಪದ ಸುಟ್ಟ ಗಾಯವಾಗಿದ್ದ ಬಾಲಕಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯಿದರೂ ಪ್ರಯೋಜನವಾಗಲಿಲ್ಲ. ತಶೂರು ಸಮೀಪದ ತಿರುವಿಲಾಮಲದ ಪಟ್ಟಿಪರಂಬು ಎಂಬಲ್ಲಿ ಈ ಘಟನೆ ಸಂಭವಿಸಿದೆ. ವಿಧಿವಿಜ್ಞಾನ ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಪೋಟ Read More »

ಉ. ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ

ಬೆದರಿಕೆಯೊಡ್ಡಿದವನನ್ನು ಗುರುತಿಸಿದ ಪೊಲೀಸರು ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. 112 ಟೋಲ್‌ಫ್ರೀ ನಂಬರ್‌ನಿಂದ ಕರೆ ಮಾಡಿ ಬೆದರಿಕೆವೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ಪಡೆ ರಂಗಕ್ಕಿಳಿದಿದ್ದು, ಕರೆ ಮಾಡಿದ ವ್ಯಕ್ತಿಯನ್ನು ರಿಹಾನ್‌ ಎಂದು ಗುರುತಿಸಿದೆ. ಅವನಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈತ ಕರೆ ಮಾಡಿದ್ದಲ್ಲದೆ ಸೋಷಿಯಲ್‌ ಮೀಡಿಯಾದಲ್ಲಿ ಮೆಸೇಜ್‌ ಕೂಡ ಹಾಕಿದ್ದ. ಆತನ ಡಿಪಿಯಲ್ಲಿ ಅಲ್ಲಾವು ಎಂದು ಬರೆದಿರುವ ಫೊಟೊ ಇದೆ.

ಉ. ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಮತ್ತೆ ಜೀವ ಬೆದರಿಕೆ ಕರೆ Read More »

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ವಿರುದ್ಧ ಮುಂದುವರಿದ ಕಾರ್ಯಾಚರಣೆ

ಮುಖಂಡರ ಮನೆ, ಕಚೇರಿ ಮತ್ತಿತರ ಸಂಸ್ಥಾಪನೆ ಶೋಧ ದೆಹಲಿ : ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ನಾಯಕರಿಗೆ ಸೇರಿದ ಮನೆ ಮತ್ತಿತರ ಸಂಸ್ಥಾಪನೆಗಳ ಮೇಲಿನ ದಾಳಿ ಕಾರ್ಯಾಚರಣೆ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಾಲ್ಕು ರಾಜ್ಯಗಳಲ್ಲಿ ಬೃಹತ್‌ ಮಟ್ಟದ ಕಾರ್ಯಾಚರಣೆ ಪ್ರಾರಂಭಿಸಿದೆ.ಬಿಹಾರ, ಉತ್ತರ ಪ್ರದೇಶ, ಪಂಜಾಬ್‌ ಮತ್ತು ಗೋವಾ ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ನೂರಾರು ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಸಲಾಗುತ್ತಿದೆ.

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ವಿರುದ್ಧ ಮುಂದುವರಿದ ಕಾರ್ಯಾಚರಣೆ Read More »

ಚುನಾವಣಾ ಕಣದಲ್ಲಿ ದಿನದಿನಕ್ಕೂ ಬದಲಾಗುತ್ತಿದೆ ಟ್ರೆಂಡ್‌

ರಾಜಕೀಯ ಪಂಡಿತರ ಅಂದಾಜಿಗೂ ನಿಲುಕುತ್ತಿಲ್ಲ ಚುನಾವಣಾ ಕಣ ಬೆಂಗಳೂರು : ಮತದಾನಕ್ಕೆ ಇನ್ನು ಕೆಲವೇ ದಿನಗಳು ಉಳಿದಿದ್ದರೂ ಚುನಾವಣಾ ಕಣದಲ್ಲಿ ದಿನದಿನಕ್ಕೂ ಟ್ರೆಂಡ್‌ ಬದಲಾಗುತ್ತಿದೆ. ಈ ಸಲದ ಚುನಾವಣೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಅಂದಾಜಿಸಲು ರಾಜಕೀಯ ವಿಶ್ಲೇಷಕರು ಕೂಡ ತಿಣುಕಾಡುತ್ತಿದ್ದಾರೆ. ಮೊದಲೆಲ್ಲ ಚುನಾವಣೆ ಘೋಷಣೆಯಾದ ಬಳಿಕ ಟ್ರೆಂಡ್‌ ಯಾವ ರೀತಿ ಇದೆ ಎಂಬ ಒಂದು ಅಂದಾಜು ಸಿಗುತ್ತಿತ್ತು. ಕೆಲವೊಂದಿಷ್ಟು ಸಮೀಕ್ಷೆಗಳು ಕೂಡ ಈ ಸಲ ಯಾವ ಪಕ್ಷ ಬಹುಮತ ಪಡೆಯಬಹುದು ಎಂದು ಅಂದಾಜಿಸಲು ನೆರವಾಗುತ್ತಿದ್ದವು. ಆದರೆ

ಚುನಾವಣಾ ಕಣದಲ್ಲಿ ದಿನದಿನಕ್ಕೂ ಬದಲಾಗುತ್ತಿದೆ ಟ್ರೆಂಡ್‌ Read More »

error: Content is protected !!
Scroll to Top