ಸುದ್ದಿ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ […]

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಏ. 16 ರಂದು ಕೌಳಿಗೆ ಮನೆ ಸಜಿಪ ಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಪರಮೇಶ್ವರ ಎನ್ ಕೆ(75) ಎಂಬವರೇ ಮೃತ ವ್ಯಕ್ತಿ. ಏ. 14 ರಂದು ರಾತ್ರಿ 10.00 ಗಂಟೆಗೆ ಟಾರ್ಚ ಹಿಡಿದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ಇದ್ದಾಗ ಮನೆಯ ಸುತ್ತ ಮುತ್ತ ಪರಿಸರದಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಯಾವುದೇ ಮಾಹಿತಿ ಸಿಗದ ಕಾರಣ ಮಗನಾದ ಶಿವಾನಂದ ರ ಹೇಳಿಕೆಯಂತೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ

ದೆಹಲಿ : ಸಗಟು ಬೆಲೆ ಸೂಚ್ಯಂಕ (WPI) ಆಧಾರಿತ ಹಣದುಬ್ಬರವು ಕಳೆದ ತಿಂಗಳು ಮಾರ್ಚ್ ನಲ್ಲಿ 29 ತಿಂಗಳ ಕನಿಷ್ಠ ಮಟ್ಟಕ್ಕೆ ಶೇಕಡಾ 1.34ಕ್ಕೆ ಇಳಿದಿದೆ.ಮೂಲ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳಲ್ಲಿನ ಮಿತವ್ಯಯದಿಂದಾಗಿ ಹಣದುಬ್ಬರ ಇಳಿಕೆಯಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತವೆ. ಇದು ಡಬ್ಲ್ಯುಪಿಐ ಆಧಾರಿತ ಹಣದುಬ್ಬರ ಇಳಿಕೆಯಾದ ಸತತ ಹತ್ತನೇ ತಿಂಗಳು. ಉತ್ಪನ್ನ ವಸ್ತುಗಳು ಮತ್ತು ಇಂಧನ ಮತ್ತು ವಿದ್ಯುತ್ ಬೆಲೆಗಳನ್ನು ಸರಾಗಗೊಳಿಸುವ ಮೂಲಕ ಫೆಬ್ರವರಿ ತಿಂಗಳಲ್ಲಿ ಇದು ಶೇಕಡಾ 3.85ರಷ್ಟಿತ್ತು. ಮಾರ್ಚ್ ತಿಂಗಳಲ್ಲಿ

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ Read More »

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ವಿಧಾನಸಭಾ ಕೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರನಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ನೀಡಿದರು. ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಿಕ್ಕಿರಿದ ಜನಸ್ತೋಮ

ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ

ಮಂಗಳೂರು : 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ Read More »

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದೆ ಹತಾಶರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದಶಕಗಳ ಬಿಜೆಪಿ ನಂಟನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ.ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರವಾನಿಸಿದ್ದ ಶೆಟ್ಟರ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ.

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ Read More »

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ

ಬೆಂಗಳೂರು : ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮಗಳಿಗೆ ಸಹಕರಿಸದಂತೆ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುಂಪು ಗುಂಪಾಗಿ ಹೋಟೆಲ್‌ಗಳಿಗೆ ಭೇಟಿ ನೀಡಿದಾಗ ಮತ್ತು ಅಭ್ಯರ್ಥಿಗಳ ಪರವಾಗಿ ಯಾರೇ ಚೀಟಿ ಅಥವಾ ಟೋಕನ್ ನೀಡಿ ಊಟ, ಉಪಹಾರ ನೀಡುವಂತೆ ಕೋರಿದಲ್ಲಿ ಅಂತಹವರ ಮಾಹಿತಿಯನ್ನು ಹೋಟೆಲ್‌ ಮಾಲೀಕರು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರಕ್ಕೆ ತಗಲುವ ಎಲ್ಲ ವೆಚ್ಚಗಳನ್ನು ಚುನಾವಣಾ ವೆಚ್ಚ ವೀಕ್ಷಕರು

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ Read More »

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ

ಟಿಕೆಟ್‌ ಸಿಗದೆ ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಬೆಂಗಳೂರು : ಟಿಕೆಟ್ ಸಿಗದ ನಿರಾಶೆಯಲ್ಲಿ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಹೊಣೆಯನ್ನು ಲಿಂಗಾಯಿತ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲಾಗಿದೆ. ಭಾನುವಾರ ತಡ ರಾತ್ರಿಯವರೆಗೂ ಶಾಮನೂರ ಶಿವಶಂಕರಪ್ಪ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್

ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಸೇರುವ ಸಾಧ್ಯತೆ Read More »

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು

ಮುಂಬಯಿ : ಮಹಾರಾಷ್ಟ್ರ ಭೂಷಣ-2022 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 8 ಮಂದಿ ಬಿಸಿಲಿನ ಝಳದಿಂದ ಮೃತಪಟ್ಟಿದ್ದಾರೆ. ಅಲ್ಲದೆ 35ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾಜ ಸುಧಾರಕ ಅಪ್ಪಾ ಸಾಹೇಬ್‌ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ದುರಂತದ ಸುದ್ದಿ ತಿಳಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನವಿ ಮುಂಬಯಿಯ ಎಂಜಿಎಂ ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದರು. ಬಿಸಿಲಿನ ಝಳದಿಂದ

ಅಮಿತ್‌ ಶಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ದುರಂತ : ಬಿಸಿಲಿನ ಝಳದಿಂದ 8 ಮಂದಿ ಸಾವು Read More »

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ

ಪ್ರಯಾಗರಾಜ್ : ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಗಮವಾಗಿಡಲು ಯೋಗಿ ಸಂಪೂರ್ಣ ಗಮನ ಹರಿಸುತ್ತಿದ್ದಾರೆ. ಯುಪಿ ಡಿಜಿಪಿ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳಿಗೆ ಪ್ರಯಾಗ್‌ರಾಜ್‌ಗೆ ಹೋಗುವಂತೆ ಸೂಚಿಸಿದ್ದಾರೆ. ಅಲ್ಲದೆ ಪ್ರತಿ 2

ಅತೀಕ್, ಅಶ್ರಫ್ ಹತ್ಯೆ ಪ್ರಕರಣ : ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಯೋಗಿ Read More »

error: Content is protected !!
Scroll to Top