ಸುದ್ದಿ

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ

ಬೆಂಗಳೂರು : ವಿಧಾನಸಭೆಯ 224 ಕ್ಷೇತ್ರಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ(ಏಪ್ರಿಲ್ 13) ಆರಂಭವಾಗಲಿದೆ. ಏ.20ರ ವರೆಗೆ ನಾಮಪತ್ರ ಸಲ್ಲಿಸಸಲು ಅವಕಾಶವಿದೆ. ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ. ಇದೇ ಮೊದಲ ಬಾರಿಗೆ ಆನ್‌ಲೈನ್​ ಮೂಲಕ […]

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭ Read More »

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್

ತಪ್ಪಿದ ಟಿಕೆಟ್‌ – ಆರ್ ಶಂಕರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ Read More »

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ

ವಿಟ್ಲ : ಗೋಣಿ ಚೀಲ ಬದಲಿಸಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು‌ ಜೀತೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಕ್ಕುಡ ಸಮೀಪ ವಿಟ್ಲ ಪೋಲಿಸರು ಬಂಧಿಸಿದ್ದು, ವಾಹನ ಸಹಿತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಾಗಿರುವ ವಾಹನದ ಚಾಲಕ ಕುದ್ದುಪದವು ಸುರುಳಿಮೂಲೆ ನಿವಾಸಿ ಅಲಿ ಎಂಬಾತನ ವಿಚಾರಣೆ ವೇಳೆ ಪಡಿತರ ಅಕ್ಕಿಯ ಮಾಫಿಯಾ ದಂಧೆ ಬಯಲಾಗಿದೆ.ಆರೋಪಿಯನ್ನು ವಿಚಾರಣೆ ನಡೆಸಿ ಆ ಬಳಿಕ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಅಡ್ಯನಡ್ಕ ಸಮೀಪದ ಮರಕ್ಕಿಣಿ ನಿವಾಸಿ JSW

ರೇಶನ್ ಮಾಫಿಯಾ : ಗೋಣಿ ಚೀಲ ಬದಲಿಸಿ ಅಕ್ರಮ ಪಡಿತರ ಅಕ್ಕಿ ಸಾಗಾಟ Read More »

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡದ ವಿವಿಧ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಕುಟುಂಬಸಮೇತರಾಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ವಿಷೇಶ ಪೂಜೆ‌ ಸಲ್ಲಿಸಿದ ಬಳಿಕ ಧರ್ಮಸ್ಥಳದಿಂದ‌ ಕುಕ್ಕೆ‌ ಸುಬ್ರಹ್ಮಣ್ಯಕ್ಕೂ ಭೇಟಿ‌ ನೀಡಲಿದ್ದಾರೆ. ಇಂದು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.ಗುರುವಾರ ಮುಂಜಾನೆ‌ ಕೊಲ್ಲೂರಿಗೂ ತೆರಳಲಿರುವ ಅವರು ನಂತರ ಕಟೀಲು ದೇಗುಲ ಮತ್ತು ಉಳ್ಳಾಲದ ಪುರಾಣ ಪ್ರಸಿದ್ದ ಸೋಮನಾಥ ದೇಗುಲಕ್ಕೆ

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಭೇಟಿ Read More »

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಂಡಾಯದ ಬಿಸಿ ಹೆಚ್ಚಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷ ತೊರೆಯುವವರ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ನಾಯಕರು ಅಸಮಾಧಾನದ ನಡುವೆ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಏ. 11 ರಂದು ಪಕ್ಷ ತೊರೆಯಲು ಮುಂದಾಗಿದ್ದು, ನಗರದ ಮಲ್ಲೇಶ್ವರದ ಬಿಜೆಪಿಯ ರಾಜ್ಯ ಕಚೇರಿಯಲ್ಲಿ

ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿ ಎ. 11 ರಂದು ಸಂಭವಿಸಿದೆ. ಹರೀಶ್ ಜಿ ಎಂಬವರೇ ಮೃತಪಟ್ಟ ವ್ಯಕ್ತಿ. ಇವರು ನೆಮ್ಮೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಕಂದೂರು ಎಂಬಲ್ಲಿಗೆ ತೆಂಗಿನಕಾಯಿ ಕೊಯ್ಯುವ ಕೆಲಸಕ್ಕೆ ಹೋಗಿದ್ದು, ತೆಂಗಿನಕಾಯಿ ಕೊಯ್ದು ಮರದಿಂದ ಇಳಿಯುತ್ತಿದ್ದಂತೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದು ಸ್ಮೃತಿ ಕಳೆದುಕೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಹರೀಶ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು Read More »

ಶಾಲಾ ರಜಾ ಅವಧಿಯಲ್ಲಿ ಬಾವಿ ಜಾವಿ ತೋಡಿ ಮೆಚ್ಚುಗೆ ಗಳಿಸಿದ ಬಾಲಕ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ರಜಾ ಅವಧಿಯಲ್ಲಿ ಬಾವಿಯೊಂದನ್ನು ತೋಡಿ ಸುದ್ದಿಯಾಗಿದ್ದಾನೆ. ಬಾಲಕನ‌ ಕಾರ್ಯಕ್ಕೆ ಇದೀಗ ವ್ಯಾಪಕ‌ ಮೆಚ್ಚುಗೆ ವ್ಯಕ್ತವಾಗಿದೆ.ನರಿಕೊಂಬು ನಾಯಿಲದ ಲೋಕನಾಥ್ ಅವರ ಪುತ್ರ, ಪಿಯುಸಿ ವಿದ್ಯಾರ್ಥಿ ಸೃಜನ್ ಬಾವಿ ಕೊರೆದ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿಯಲಾಗಿದೆ.ಸೃಜನ್ ಮನೆಗೆ ನಳ್ಳಿಯಲ್ಲಿ ನೀರು ಬರುತ್ತಿತ್ತು. ಆದರೆ ಮನೆಗೆ ಆಶ್ರಯವಾಗಿದ್ದ ನಳ್ಳಿ ನೀರು ಕೆಲವೊಮ್ಮೆ ಕೈ ಕೊಡುತ್ತಿತ್ತು. ಇದರಿಂದ ಮನೆಯಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಸೃಜನ್ ತಾನು ಬಾವಿ ಕೊರೆಯುವುದಾಗಿ ಹೇಳುತ್ತಿದ್ದ‌

ಶಾಲಾ ರಜಾ ಅವಧಿಯಲ್ಲಿ ಬಾವಿ ಜಾವಿ ತೋಡಿ ಮೆಚ್ಚುಗೆ ಗಳಿಸಿದ ಬಾಲಕ Read More »

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ

ಪುತ್ತೂರು : ಬಿಜೆಪಿ ನಿನ್ನೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಪುತ್ತೂರಿನ ಬಿಜೆಪಿ ಟಿಕೆಟ್ ನೀಡಿದೆ. ಇದರ ಬೆನ್ನಲ್ಲೇ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ. ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರಿಗೆ

ಬಿಜೆಪಿ ಟಿಕೆಟ್‌ ಘೋಷಣೆ ಹಿನ್ನೆಲೆ ಪುತ್ತೂರಿನಲ್ಲಿ ಹೆಚ್ಚಿದ ಅಸಮಾಧಾನ Read More »

ಬಿಜೆಪಿ ಚುನಾವಣಾ ಪ್ರಚಾರದ ನಾಟು…. ನಾಟು…. ಹಾಡು ವೈರಲ್

ಬೆಂಗಳೂರು : ಇನ್ನೊಂದು ತಿಂಗಳು ಬಾಕಿ ಇರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು ರಣತಂತ್ರಗಳನ್ನು ರೂಪಿಸುತ್ತಿದ್ದು, ಮತದಾರರ ಒಲೈಕೆಗಾಗಿ ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ.ಆಡಳಿತಾರೂಢ ಬಿಜೆಪಿ ಇವತ್ತು ತಮ್ಮ ಚುನಾವಣಾ ಪ್ರಚಾರದ ಹಾಡನ್ನು ಬಿಡುಗಡೆ ಮಾಡಿದೆ. ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಜಮೌಲಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿನ ಆಸ್ಕರ್ ವಿಜೇತ ಹಾಡು ನಾಟು ನಾಟು ಹಾಡನ್ನು ರಿಮಿಕ್ಸ್ ಮಾಡಿ ಇವತ್ತು (ಏ.11) ಬಿಡುಗಡೆ ಮಾಡಿದೆ. ಈ ಹಾಡಿನಲ್ಲಿ ನಾಟು

ಬಿಜೆಪಿ ಚುನಾವಣಾ ಪ್ರಚಾರದ ನಾಟು…. ನಾಟು…. ಹಾಡು ವೈರಲ್ Read More »

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : 126.14 ಕೋಟಿ ರೂ. ಜಪ್ತಿ

ಬೆಂಗಳೂರು : ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕದಲ್ಲಿ ಮಾ.29 ರಿಂದ ಜಾರಿಯಲ್ಲಿರುವ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದಲ್ಲಿ 1,000 ಎಫ್ಐಆರ್ ದಾಖಲಾಗಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹಗಳು ಹಾಗೂ ಉಚಿತ ಕೊಡುಗೆಗಳನ್ನು ನೀಡುವ ಪ್ರಕರಣಗಳಿಗೆ ಸಂಬಂಧಿಸಿದ ಎಫ್ಐಆರ್ ಗಳು ಇದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಈ ವರೆಗೂ ಒಟ್ತು 126.14 ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ 47 ಕೋಟಿ ರೂಪಾಯಿಗಳ ನಗದು, 29 ಕೋಟಿ ರೂಪಾಯಿ ಮೌಲ್ಯದ

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ : 126.14 ಕೋಟಿ ರೂ. ಜಪ್ತಿ Read More »

error: Content is protected !!
Scroll to Top