ಸುದ್ದಿ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 77ನೆಯ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಕೆ. ಧ್ವಜಾರೋಹಣಗೈದರು. ಬಳಿಕ ಮಾತನಾಡಿದ ಅವರು, ಗಣರಾಜ್ಯೋತ್ಸವ ದಿನದ ಮಹತ್ವವನ್ನು ಮುಂದಿನ ಪರಂಪರೆಗೂ ಮಕ್ಕಳು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಮಕ್ಕಳು ತಮ್ಮ ಹೆತ್ತವರು ಮತ್ತು ಸಹಪಾಠಿಗಳನ್ನು ಪ್ರೀತಿಸುವಂತೆ ನಮ್ಮ ದೇಶದ ಸಂವಿಧಾನ ಮತ್ತು ಕಾನೂನನ್ನು ಪ್ರೀತಿಸಿ ಗೌರವಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. […]

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ Read More »

ಗಣರಾಜ್ಯೋತ್ಸವದಲ್ಲಿ ರಾಜಕೀಯ ಭಾಷಣ: ಎಚ್.ಕೆ. ಪಾಟೀಲ – ಎಸ್. ವಿ. ಸಂಕನೂರು ‌ನಡುವೆ ವಾಗ್ವಾದ

ಗದಗ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಭಾಷಣದ ವಿಚಾರವಾಗಿ ಸಚಿವ ಎಚ್. ಕೆ. ಪಾಟೀಲ ಮತ್ತು ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು ಅವರ ನಡುವೆ ವಾಗ್ವಾದ ನಡೆದಿದ್ದು, ಗೊಂದಲ ಸೃಷ್ಟಿಯಾಯಿತು. ಎಚ್. ಕೆ. ಪಾಟೀಲ ಅವರು ತಮ್ಮ ಭಾಷಣದಲ್ಲಿ, ರಾಜ್ಯಪಾಲರಿಂದ ಹಕ್ಕು ಕಸಿತವಾಗಿದೆ. ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಕಾನೂನನ್ನು ನಿರಸನಗೊಳಿಸಿದೆ ಎಂದಿದ್ದಾರೆ. ಪಾಟೀಲರ ಹೇಳಿಕೆಯನ್ನು ಆಕ್ಷೇಪಿಸಿದ ಸಂಕನೂರು ಅವರು ನೇರವಾಗಿ ಡಯಾಸ್ ಬಳಿ ತೆರಳಿ, ಇದು ರಾಜಕೀಯ ವೇದಿಕೆ ಅಲ್ಲ

ಗಣರಾಜ್ಯೋತ್ಸವದಲ್ಲಿ ರಾಜಕೀಯ ಭಾಷಣ: ಎಚ್.ಕೆ. ಪಾಟೀಲ – ಎಸ್. ವಿ. ಸಂಕನೂರು ‌ನಡುವೆ ವಾಗ್ವಾದ Read More »

ಕಾರು – ರಿಕ್ಷಾ ನಡುವೆ ಅಪಘಾತ

ಪುತ್ತೂರು: ಕಾರು ಮತ್ತು ರಿಕ್ಷಾ‌ ನಡುವೆ ಅಪಘಾತ ಸಂಭವಿಸಿದ ಘಟನೆ ಬಪ್ಪಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾರು – ರಿಕ್ಷಾ ನಡುವೆ ಅಪಘಾತ Read More »

ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ

ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್‌ಗೆ ಪ್ರಚೋದನೆ ನೀಡುತ್ತಿದ್ದ ಆರೋಪಿಗಳು ಉಡುಪಿ: ಆನ್‌ಲೈನ್ ಬೆಟ್ಟಿಂಗ್‌ಗೆ ಪ್ರಚೋದಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಉಡುಪಿ ನಿಲ್ಲೆಯ ಕೋಟ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ ನಿವಾಸಿಗಳಾದ ರೂಪೇಶ್ (23), ಮನೋಜ್ (25), ಕೊಳ್ಕೆಬೈಲು ನಿವಾಸಿ ಸೃಜನ್ ಶೆಟ್ಟಿ (28), ಪಡುಮುಂಡು ನಿವಾಸಿ ರಾಘವೇಂದ್ರ (37), ಶಿರಿಯಾರ ಪೋಸ್ಟ್ ಆಫೀಸ್ ಹತ್ತಿರದ ನಿವಾಸಿ ಕುಶಲ (38) ಬಂಧಿತ ಆರೋಪಿಗಳು. ದೂರುದಾರ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸುಮಾರು

ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ

ಆಲುಂಬುಡ, ಪುತ್ತೂರು: ಎವಿಜಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್’ನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಪೂರ್ವ ಶಾಸಕರಾದ ಸಂಜೀವ ಮಟಂದೂರು ಅವರು ಧ್ವಜಾರೋಹಣಗೈದು, ದೀಪ ಪ್ರಜ್ವಲಿಸಿ ಮಾತನಾಡಿ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾ ಯಾವುದು ಸರಿ ಯಾವುದು ತಪ್ಪು ಎಂದು ತಿಳಿಸಿಕೊಡುವುದೇ ಸಂವಿಧಾನ. ರಾಜ ಪರಂಪರೆಯಿಂದ ಬೆಳೆದ ಭಾರತ ಇಂದು ಸ್ವಯಂ ಆಡಳಿತದ ಸರ್ವತಂತ್ರ ಗಣತಂತ್ರ ಪರಂಪರೆಗೆ ಬಂದು ನಿಂತಿದೆ ಎಂದು ವಿಶ್ಲೇಷಿಸಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನದ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ 77ನೇ ಗಣರಾಜ್ಯೋತ್ಸವ Read More »

ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು

ಅಧಿವೇಶನ ವಿವಾದದ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಡೆ ಅನುಸರಿಸಿದ ರಾಜ್ಯ ಸರ್ಕಾರ ಬೆಂಗಳೂರು : ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ ಯಾವುದೇ ವಿವಾದವಿಲ್ಲದೆ ಪೂರ್ಣಗೊಂಡಿದೆ.ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನೇ ಓದಿದರೂ ಅದರಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ವಾಕ್ಯಗಳು ಇರಲಿಲ್ಲ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ

ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು Read More »

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌

ಪುತ್ತೂರು: ಮಾಣಿ ಸಮೀಪ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆದ್ದಾರಿಯ ಡಿವೈಡರ್‌ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ ಎನ್ನಲಾಗಿದೆ. ಅಪಘಾತದಲ್ಲಿ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌ Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಉಡುಪಿಗೆ ಪ್ರವಾಸ ಬಂದು ವಾಪಸು ಹೋಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಬೆಂಗಳೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿ ಇಂದು

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ

ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜೈಪುರ: ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ ಶುರುವಾಗಿರುವಂತೆಯೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸುಮಾರು 10,000 ಕೆಜಿ ಸ್ಫೋಟಕ ಮತ್ತು ಡಿಟೋನೇಟರ್‌ಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ತೋಟದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಬಂಧಿತ

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ Read More »

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ

ಗಣರಾಜ್ಯೋತ್ಸವಕ್ಕೆ ವಂದೇ ಮಾತರಂಗೆ 150 ವರ್ಷ, ಆಪರೇಷನ್‌ ಸಿಂದೂರ ಸ್ಪರ್ಶ ನವದೆಹಲಿ : 77ನೇ ಗಣರಾಜ್ಯೋತ್ಸವ ಆಚರಿಸಲು ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. ಈ ಬಾರಿ ಗಣರಾಜ್ಯೋತ್ಸವ ಆಚರಣೆ ‘ವಂದೇ ಮಾತರಂಗೆ 150 ವರ್ಷಗಳು’ ಎಂಬ ವಿಷಯದ ಮೇಲೆ ನಡೆಯಲಿದೆ. 1875ರಲ್ಲಿ ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ವಿರಚಿತ ವಂದೇ ಮಾತರಂಗೆ ಇದೀಗ 150 ವರ್ಷಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವಂದೇ ಮಾತರಂನಿಂದ ಪ್ರೇರಿತವಾದ ಸಾಂಸ್ಕೃತಿಕ ಹಾಗೂ ಪ್ರದರ್ಶನಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ. ಇದೇ ಮೊದಲ

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ Read More »

error: Content is protected !!
Scroll to Top