ಸುದ್ದಿ

ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ

ಬೆಳ್ತಂಗಡಿ/ಮಂಗಳೂರು : ಮನೆಯ ಮೇಲೆ ತೆಂಗಿನಮರ ಬಿದ್ದು ಸಂಪೂರ್ಣ ಹಾನಿಗೀಡಾಗಿರುವ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಕಳೆಂಜಿರೋಡಿ ಎಂಬಲ್ಲಿ ಎ.8 ರಂದು ಸಂಭವಿಸಿದೆ. ಪಡಂಗಡಿಯ ಜೊಬೆಲ್ಲಾ ಫೆಲಿಕ್ಸ್‌ ಅವರ ಮನೆಗೆ ಶುಕ್ರವಾರ ರಾತ್ರಿ ತೆಂಗಿನ ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾಗಿದ್ದು, ಆ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದ ಕಾರಣ ಜೀವಹಾನಿ ತಪ್ಪಿದೆ.ಫೆಲಿಕ್ಸ್‌ ಅವರ ಪುತ್ರ ನವೀನ ಹಾಗೂ ಆತನ ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿ ವಾಸವಾಗಿದ್ದರು. ಆದರೆ ಪೂಜೆ ನಿಮಿತ್ತ ಅವರೆಲ್ಲರೂ ಚರ್ಚ್‌ಗೆ […]

ಬೆಳ್ತಂಗಡಿಯ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ – ಕರಾವಳಿಯಲ್ಲಿ ಮಳೆ ಸಾಧ್ಯತೆ Read More »

ಎ. 9 ರಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌

ದಿಲ್ಲಿಯಲ್ಲಿ ನಡೆಯಲಿದೆ ಮಹತ್ವದ ಸಂಸದೀಯ ಮಂಡಳಿ ಸಭೆ ಬೆಂಗಳೂರು : ದಿಲ್ಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ 140ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡಿರುವ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿದ್ದು, ಪಟ್ಟಿ ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು

ಎ. 9 ರಂದು ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ Read More »

ಬಿ.ಎನ್. ಚಂದ್ರಪ್ಪ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ

ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ), ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್. ಚಂದ್ರಪ್ಪ ಅವರನ್ನು ನೇಮಕ ಮಾಡಿದೆ. ಈ ಸ್ಥಾನದಲ್ಲಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು. ಕಾಂಗ್ರೆಸ್‌ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಚಂದ್ರಪ್ಪ ಅವರನ್ನು ನೇಮಕ ಮಾಡಿದ್ದು, ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿ.ಎನ್. ಚಂದ್ರಪ್ಪ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ Read More »

ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಬಿಜೆಪಿ ತಿರುಗೇಟು

ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ್ದಕ್ಕಾಗಿ ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ನಾಲಿಗೆಯನ್ನು ಕತ್ತರಿಸುವುದಾಗಿ ದಿಂಡುಗಲ್‌ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುವುದಾಗಿ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷದವರು

ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಬಿಜೆಪಿ ತಿರುಗೇಟು Read More »

ಭಾರತ ವಿಶ್ವದಲ್ಲಿ 2 ನೇ ಅತಿ ದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರ

85 ಸಾವಿರ ಕೋಟಿ ರೂ. ಮೌಲ್ಯದ ಜಂಗಮವಾಣಿ ರಫ್ತು ದೆಹಲಿ : ಮಾ. 31 ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಭಾರತವು 85,000 ಕೋಟಿ ರೂ.ಗಿಂತ ಹೆಚ್ಚಿನ ಮೊಬೈಲ್ ರಫ್ತು ಮಾಡಿದೆ ಎಂಬುದು ಅಂಕಿ ಅಂಶಗಳಿಂದ ದೃಢಪಟ್ಟಿದೆ. ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ​​( ಐಸಿಇಎ) ಐಎಎನ್‌ಎಸ್‌ಗೆ ಈ ಬಗ್ಗೆ ಮಾಹಿತಿ ಒದಗಿಸಿದ್ದು, ಸ್ಥಳೀಯ ಉತ್ಪಾದನೆಯತ್ತ ಸರ್ಕಾರದ ಪ್ರೋತ್ಸಾಹದಿಂದ ಉತ್ತೇಜನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಅಂಕಿ ಅಂಶಗಳು ವಿವರಿಸಿವೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಭಾರತದಿಂದ

ಭಾರತ ವಿಶ್ವದಲ್ಲಿ 2 ನೇ ಅತಿ ದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರ Read More »

ಪ್ರಚೋದನಕಾರಿ ಭಾಷಣದ ಆರೋಪ ಜೆಡಿಎಸ್ ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು : ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶ್ರುತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್​ ಆರೋಪ ಮಾಡಿದೆ. ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್​​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್​ಗೆ ಮತ

ಪ್ರಚೋದನಕಾರಿ ಭಾಷಣದ ಆರೋಪ ಜೆಡಿಎಸ್ ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಎ. 7 ರಂದು ಸಂಭವಿಸಿದೆ. ಯಶವಂತ ಜಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಇವರು ಎ. 5 ರ ರಾತ್ರಿ ತನ್ನ ಅಣ್ಣನ ಮೊಬೈಲ್ ಗೆ ಕರೆ ಮಾಡಿ ಮಾತನಾಡಿದ್ದು, ಆ ಬಳಿಕ ಕರೆ ಮಾಡಿದರೂ ಸ್ವೀಕರಿಸದೇ, ತನ್ನ ಮನೆಗೂ ಬಾರದೇ, ಎ. 7 ರ ಸಂಜೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಮ್ಯಾಂಜಿಯಮ್ ಮರಕ್ಕೆ ನೈಲಾನ್

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ Read More »

ಪ್ರಧಾನಿ ಮೋದಿಯಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ

ಹೈದರಾಬಾದ್ : ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು.ಹೈದರಾಬಾದ್’ಗೆ ಬೇಟಿ ನೀಡಿರುವ ಮೋದಿಯವರು, ಸಿಕಂದರಾಬಾದ್ ರೈಲು ನಿಲ್ದಾಣದಿಂದ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿ, ಬಳಿಕ ಸ್ಟೇಷನರಿ ರೈಲು ಹತ್ತಿದ ಮೋದಿಯವರು ಶಾಲಾ ಮಕ್ಕಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತೆಲಂಗಾಣದ ಸಿಕಂದರಾಬಾದ್ ಮತ್ತು ನೆರೆಯ ಆಂಧ್ರಪ್ರದೇಶದ ತಿರುಪತಿ ನಡುವಿನ ಪ್ರಯಾಣದ ಸಮಯವನ್ನು ಸುಮಾರು ಮೂರೂವರೆ ಗಂಟೆಗಳಷ್ಟು ಕಡಿಮೆ ಮಾಡುತ್ತದೆ.

ಪ್ರಧಾನಿ ಮೋದಿಯಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ Read More »

ಸೋಷಿಯಲ್ ಮೀಡಿಯಾ, ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವ ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ

ಬೆಂಗಳೂರು : ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿದ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ, ಮಾಧ್ಯಮಗಳಲ್ಲಿ ನಂದಿನಿ ಉಳಿಸಿ ಅಭಿಯಾನ ಜೋರು ಸದ್ದು ಮಾಡುತ್ತಿದೆ. ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ಅಮುಲ್ ತರುತ್ತಿದೆ. ಆನ್ ಲೈನ್

ಸೋಷಿಯಲ್ ಮೀಡಿಯಾ, ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವ ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ Read More »

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ

​​ಗೋ ಗರ್ಭ ಅಣೆಕಟ್ಟು ದಾಟಿದ ತಿಮ್ಮಪ್ಪನ ದರ್ಶನದ ಸಾಲು ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಲ್ಲಿ ಸಾಲುಗಟ್ಟಿ ನಿಂತ ಭಕ್ತಸಮೂಹ ಪುತ್ತೂರು : ರಜೆಯ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭಕ್ತಜನಸಾಗರವೇ ಹರಿದು ಬರುತ್ತಿದೆ. ಈ ವಾರಾಂತ್ಯದಲ್ಲಿ ಬರೋಬ್ಬರಿ ನಾಲ್ಕು ದಿನಗಳ ರಜೆ ಇರುವುದರಿಂದ ಅಧಿಕ ಸಂಖ್ಯೆಯಲ್ಲಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ತಿರುಮಲದಲ್ಲಿ ದೇವರ ದರ್ಶನಕ್ಕೆ ಎರಡು ದಿನ ಬೇಕಾಗುವುದರಿಂದ ಟ್ರಾಫಿಕ್ ಅನ್ನು ಗಮನದಲ್ಲಿಟ್ಟುಕೊಂಡು ಭಕ್ತರು ತಮ್ಮ ಪ್ರವಾಸವನ್ನು ಯೋಜಿಸಬೇಕೆಂದು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಕೋರಿದೆ. ತಿರುಮಲ

ಸತತ ನಾಲ್ಕು ದಿನಗಳ ರಜೆಯ ಹಿನ್ನೆಲೆ ದೇವಸ್ಥಾನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಜನಸಾಗರ Read More »

error: Content is protected !!
Scroll to Top