ಸುದ್ದಿ

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ

ಸಿದ್ದರಾಮಯ್ಯ ಹೇಳಿಕೆಗೆ ಲಿಂಗಾಯತ ಮಠಾಧೀಶರ ತೀವ್ರ ಆಕ್ಷೇಪ ಬೆಂಗಳೂರು : ಒಂದೆಡೆ ಕಾಂಗ್ರೆಸ್‌ ಲಿಂಗಾಯತ ಸಮುದಾಯವನ್ನು ಓಲೈಸಲು ಯತ್ನಸುತ್ತಿದ್ದರೆ ಇನ್ನೊಂದೆಡೆ ಪಕ್ಷದ ನಾಯಕ ಸಿದ್ದರಾಮಯ್ಯ ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂಬ ದಾಟಿಯಲ್ಲಿ ಮಾತನಾಡಿ ಈ ಪ್ರಯತ್ನಕ್ಕೆ ತಣ್ಣೀರು ಎರಚಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ಇದೀಗ ಲಿಂಗಾಯತ ಮಠಾಧೀಶರು ಪ್ರವೇಶಿಸಿದ್ದಾರೆ. ಮಾದ್ಯಮ ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸುವಾಗ ಲಿಂಗಾಯತರೇ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು […]

ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸಿಗೆ ಸಂಕಷ್ಟ Read More »

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ

ಪೈಲಟ್ ಹಾಗೂ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ಮಂಗಳೂರು : ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರು ಕರಾವಳಿ ಭಾಗದಲ್ಲಿ ಟೆಂಪಲ್ ರನ್ ಆರಂಭಿಸಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಡಿಕೆಶಿ ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್​ ತಪಾಸಣೆಗೆ ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ. ಈ ವೇಳೆ ಪೈಲಟ್, ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಮಾತಿಗೆ ಇಳಿದಿದ್ದಾರೆ. ಪೈಲಟ್ ರಾಮದಾಸ್ ಹಾಗೂ

ಡಿಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ Read More »

ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ

ಬೆಂಗಳೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಶೇ.74.64 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಮೂಲಕ ಪರೀಕ್ಷೆ ಬರೆದು ಉತ್ತೀರ್ಣವಾಗಲು ಅವಕಾಶವಿದೆ. ಅದರಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರಕ ಪರೀಕ್ಷೆಯ ಕುರಿತು ಪ್ರಕಟಣೆಯೊಂದನ್ನು ಹೊರಡಿಸಿದೆ. 2023ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಅರ್ಜಿ ಕೊನೆಯ ದಿನ, ಶುಲ್ಕದ ಬಗ್ಗೆ ಸಂಪೂರ್ಣ ಮಾಹಿತಿಯಿರುವ ಸುತ್ತೋಲೆಯೊಂದನ್ನ ಹೊರಡಿಸಿದೆ.

ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಸೂಚನೆ Read More »

ಪ್ರಧಾನಿ ಮೋದಿ ಕೊಚ್ಚಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ

ತಿರುವನಂತಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇರಳ ಭೇಟಿ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಸಂದೇಶವುಳ್ಳ ಪತ್ರವೊಂದು ದೊರೆತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೋದಿ ಅವರು ಏಪ್ರಿಲ್ 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿಯ ರಾಜ್ಯ ಕಚೇರಿಗೆ ಈ ಪತ್ರ ಬಂದಿದ್ದು, ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್​ ಈ ಕುರಿತು ಪೊಲೀಸರಿಗೆ

ಪ್ರಧಾನಿ ಮೋದಿ ಕೊಚ್ಚಿ ಭೇಟಿ ವೇಳೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ Read More »

ಮೋದಿಯ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ

ಟ್ವಿಟರ್‌ನಲ್ಲಿ ವೀಡಿಯೋ ಹಂಚಿಕೊಂಡ ಅಮಿತ್‌ ಶಾ ಬೆಂಗಳೂರು : ರೈತನೊಬ್ಬ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಿಂದ ವೀಡಿಯೊವನ್ನು ಹಂಚಿಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದನ್ನು ‘ಸುಂದರ’ ವೀಡಿಯೊ ಎಂದು ಬಣ್ಣಿಸಿದ್ದಾರೆ. ಶುಕ್ರವಾರ ಸಂಜೆ ಕರ್ನಾಟಕದ ದೇವನಹಳ್ಳಿಯಲ್ಲಿ ಶಾ ಅವರ ರೋಡ್‌ಶೋಗೆ ಮುಂಚಿತವಾಗಿ ವೀಡಿಯೊವನ್ನು ಸೆರೆಹಿಡಿಯಲಾಗಿದೆ. ಮಳೆಯಿಂದಾಗಿ ರೋಡ್‌ಶೋ ರದ್ದಾಗಿದೆ. ಆದರೆ, ಮಳೆ ನಿಂತ ಮೇಲೆ ಸ್ಥಳದಲ್ಲಿ ಹಾಕಲಾಗಿದ್ದ

ಮೋದಿಯ ಭಾವಚಿತ್ರವುಳ್ಳ ಕಟೌಟನ್ನು ಟವೆಲ್‌ನಿಂದ ಒರೆಸಿದ ರೈತ Read More »

ನಾಳೆ ಅಯೋಧ್ಯೆಯ ಶ್ರೀ ರಾಮನಿಗೆ ಜಲಾಭಿಷೇಕ

ಅಯೋಧ್ಯೆಯಲ್ಲಿ 155 ರಾಷ್ಟ್ರಗಳ ನೀರಿನ ಸಂಗಮ ಅಯೋಧ್ಯೆ : ಉಜೈಕಿಸ್ತಾನ್, ಪಾಕಿಸ್ತಾನ, ಚೀನಾ ಸೇರಿದಂತೆ ವಿವಿಧ ದೇಶಗಳ 155 ನದಿಗಳ ನೀರು ಗುರುವಾರ ಬೆಳಗ್ಗೆ ಅಯೋಧ್ಯೆಗೆ ತಲುಪಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 23 ರಂದು ಈ ನದಿಗಳ ನೀರಿನಿಂದ ಅಯೋಧ್ಯೆಯ ಶ್ರೀ ರಾಮನಿಗೆ ‘ಜಲಾಭಿಷೇಕ’ ಮಾಡಲಿದ್ದಾರೆ. ದೆಹಲಿಯ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ, ನೀರು ಸಂಗ್ರಹದ ಹಿಂದಿರುವ ವ್ಯಕ್ತಿ ವಿಜಯ್ ಜಾಲಿ, ಅಂಟಾರ್ಕ್ಷಿಕಾದಿಂದ ಕೂಡ ನೀರನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.ತಾಂಜಾನಿಯಾ,

ನಾಳೆ ಅಯೋಧ್ಯೆಯ ಶ್ರೀ ರಾಮನಿಗೆ ಜಲಾಭಿಷೇಕ Read More »

ನಾನು ಮುಖ್ಯಮಂತ್ರಿ ಹುದ್ದೆ ಸ್ಪರ್ಧಿಯಲ್ಲ : ಬಿ. ಎಲ್‌. ಸಂತೋಷ್‌ ಸ್ಪಷ್ಟನೆ

ಬಿಜೆಪಿಯಲ್ಲಿ ಸಮರ್ಥ ನಾಯಕರಿಗೆ ಪ್ರತಿಸ್ಪರ್ಧಿಯಾಗುವುದಿಲ್ಲ ಎಂದ ಸಂತೋಷ್‌ ಬೆಂಗಳೂರು : ನಾನು ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರ ಜತೆ ಮಾತನಾಡುವ ವೇಳೆ ಈ ವಿಚರ ಪ್ರಸ್ತಾವಿಸಿದ ಅವರು ಬಿಜೆಪಿಯಲ್ಲಿ ಹಲವು ಶಕ್ತ ನಾಯಕರಿದ್ದಾರೆ ಮತ್ತು ನಾನು ಅವರಿಗೆ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ ಎಂದು ತಿಳಿಸಿದರು.ಟಿಕೆಟ್‌ ಹಂಚಿಕೆಯಲ್ಲಿ ಸಂತೋಷ್‌ ವ್ಯಾಪಕವಾಗಿ ಪ್ರಭಾವ ಬೀರಿದ್ದಾರೆ ಮತ್ತು ಬಿಜೆಪಿಗೆ ಬಹುಮತ ಬಂದರೆ ಮುಖ್ಯಮಂತ್ರಿಯಾಗಲು ಅವರು ರಾಜ್ಯ ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾಗುತ್ತಿದ್ದಾರೆ

ನಾನು ಮುಖ್ಯಮಂತ್ರಿ ಹುದ್ದೆ ಸ್ಪರ್ಧಿಯಲ್ಲ : ಬಿ. ಎಲ್‌. ಸಂತೋಷ್‌ ಸ್ಪಷ್ಟನೆ Read More »

ಚುನಾವಣಾ ಅಕ್ರಮ : 278 ಕೋ. ರೂ. ಜಪ್ತಿ

ಆಮಿಷಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 80.23 ಕೋಟಿ ರೂ. ನಗದು, 19.31 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳು, 73.80 ಕೋಟಿ ರೂ. ಮೌಲ್ಯದ 145.55 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 245.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.ಚುನಾವಣಾ ಅಕ್ರಮಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿರುವ ಚುನಾವಣಾ

ಚುನಾವಣಾ ಅಕ್ರಮ : 278 ಕೋ. ರೂ. ಜಪ್ತಿ Read More »

4989 ನಾಮಪತ್ರಗಳು ಕ್ರಮಬದ್ಧ : 500 ನಾಮಪತ್ರಗಳು ತಿರಸ್ಕೃತ

ಸದ್ಯ 3,044 ಅಭ್ಯರ್ಥಿಗಳು – ಏ.24 ನಾಮಪತ್ರ ಹಿಂಪಡೆಯಲು ಕೊನೇ ದಿನ ಬೆಂಗಳೂರು : ವಿಧಾನಸಭಾ ಚುನಾವಣೆಗೆ ರಾಜ್ಯಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು, ಶುಕ್ರವಾರ ಪರಿಶೀಲನೆಯ ಬಳಿಕ 4989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಒಟ್ಟು 3632 ಅಭ್ಯರ್ಥಿಗಳು 5 ಸಾವಿರಕ್ಕೂ ಹೆಚ್ಚು ನಾಮಪತ್ರಗಳನ್ನು ಸಲ್ಲಿಸಿದ್ದು, ಈ ಪೈಕಿ 500ಕ್ಕೂ ಹೆಚ್ಚು ನಾಮಪತ್ರಗಳು ತಿರಸ್ಕೃತಗೊಂಡಿವೆ. 3,044 ಅಭ್ಯರ್ಥಿಗಳ 4,989 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಆಯೋಗ ಹೇಳಿದೆ.ಐದು ವಿಧಾನಸಭಾ ಕ್ಷೇತ್ರಗಳಾದ ಸವದತ್ತಿ,‌ ಔರಾದ್,

4989 ನಾಮಪತ್ರಗಳು ಕ್ರಮಬದ್ಧ : 500 ನಾಮಪತ್ರಗಳು ತಿರಸ್ಕೃತ Read More »

ಟಿಕೆಟ್‌ಗಾಗಿ ಹಣ ಸಂಗ್ರಹ : ಕಾಂಗ್ರೆಸ್‌ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ಹಣ ಪಡೆದು ಬಿ ಫಾರ್ಮ್‌ ಹಂಚುವುದು ಲಂಚಕ್ಕೆ ಸಮ ಎಂದು ಆರೋಪ ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಂದ ಹಣ ಸಂಗ್ರಹಿಸಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ಚುನಾವಣಾ ಕಾನೂನುಗಳು ಮತ್ತು ಮಾದರಿ ನೀತಿ

ಟಿಕೆಟ್‌ಗಾಗಿ ಹಣ ಸಂಗ್ರಹ : ಕಾಂಗ್ರೆಸ್‌ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು Read More »

error: Content is protected !!
Scroll to Top