ಸುದ್ದಿ

ಟಿಕೆಟ್‌ ಸಿಗದ ನಿರಾಶೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ವಿದಾಯ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಶನಿವಾರ ರಾತ್ರಿ ಘೋಷಿಸಿದ್ದಾರೆ. ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಧರ್ಮೇಂದ್ರ ಪ್ರಧಾನ್ ಅವರು ಜಗದೀಶ್ ಶೆಟ್ಟರ್ ಅವರ ಮನೆಗೆ ಆಗಮಿಸಿ ಮನವೊಲಿಕೆಗೆ ಯತ್ನಿಸಿದರು. ಆದರೆ ಬಿಜೆಪಿ ನಾಯಕರ ಸಂಧಾನ ಸಭೆ ವಿಫಲವಾಗಿದೆ.ಸಂಧಾನ ಸಭೆ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಗದೀಶ್ ಶೆಟ್ಟರ್, ಪಕ್ಷ ನನಗೆ ಎಲ್ಲ ಸ್ಥಾನಮಾನ ನೀಡಿದೆ. ಮೂವತ್ತು ವರ್ಷದ ರಾಜಕಾರಣದಲ್ಲಿ […]

ಟಿಕೆಟ್‌ ಸಿಗದ ನಿರಾಶೆಯಲ್ಲಿ ಬಿಜೆಪಿಗೆ ಜಗದೀಶ್‌ ಶೆಟ್ಟರ್‌ ವಿದಾಯ Read More »

ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್‌ಪಿ ನಾಯಕ ಅತೀಕ್‌ ಅಹ್ಮದ್‌ ಹತ್ಯೆ

ಮಗ ಎನ್‌ಕೌಂಟರ್‌ಗೆ ಬಲಿಯಾದ ಎರಡೇ ದಿನದಲ್ಲಿ ತಂದೆಯ ಹತ್ಯೆ ಲಖನೌ : ನೂರಕ್ಕೂ ಅಧಿಕ ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿರುವ ಉತ್ತರ ಪ್ರದೇಶದ ದರೋಡೆಕೋರ ಅತೀಕ್ ಅಹ್ಮದ್ ಮತ್ತು ಅವನ ಸಹೋದರ ಅಶ್ರಫ್ ಅಹ್ಮದ್‌ನನ್ನು, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯುತ್ತಿದ್ದಾಗ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಪತ್ರಕರ್ತರ ಸೋಗಿನಲ್ಲಿ ಬಂದ ಹಂತಕರು ಅಹ್ಮದ್‌ ಸಹೋದರರನ್ನು ಪೊಲೀಸರು ಮತ್ತು ಪತ್ರಕರ್ತರ ಎದುರೇ ಅತಿ ಸಮೀಪದಿಂದ ತಲೆಗೆ ಗುರಿಯಿಟ್ಟು ಗುಂಡು ಹಾರಿಸಿ ಕೊಂದಿದ್ದಾರೆ. ಇಡೀ ಹತ್ಯೆ ಕೃತ್ಯ

ಪೊಲೀಸ್, ಪತ್ರಕರ್ತರ ಎದುರೇ ಕುಖ್ಯಾತ ಪಾತಕಿ, ಬಿಎಸ್‌ಪಿ ನಾಯಕ ಅತೀಕ್‌ ಅಹ್ಮದ್‌ ಹತ್ಯೆ Read More »

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು

ಸುಳ್ಯ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿ ಏ.13 ರಂದು ಸಂಭವಿಸಿದೆ. ವಸಂತ್‌ ಕುಮಾರ್‌ ಎಂಬವರೇ ಮೃತಪಟ್ಟ ವ್ಯಕ್ತಿ. ಮದ್ಯಪಾನ ದುಶ್ಚಟ ಹೊಂದಿದ್ದ ಇವರು ಏ.13 ರಂದು ಕ್ರಿಮಿನಾಶಕ ಸೇವಿಸಿದ್ದು, ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿರುತ್ತಾರೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕ್ರಿಮಿನಾಶಕ ಸೇವಿಸಿ ವ್ಯಕ್ತಿ ಸಾವು Read More »

ಚೇತನ್ ಅಹಿಂಸಾ ವಿಸಾ ರದ್ದು ಪಡಿಸಿದ ಕೇಂದ್ರ ಸರಕಾರ

ಬೆಂಗಳೂರು : ಕನ್ನಡ ನಟ ಚೇತನ್ ಅಹಿಂಸಾ ಅವರಿಗೆ ಭಾರತದಲ್ಲಿ ಬಂದು ವಾಸಿಸಲು ನೀಡಲಾಗಿದ್ದ ಭಾರತೀಯ ಸಾಗರೋತ್ತರ ಪೌರತ್ವವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಕುರಿತಂತೆ, ಏ. 14ರಂದು (ಶುಕ್ರವಾರ) ಅವರಿಗೆ ವಿದೇಶಿಗರ ಪ್ರಾದೇಶಿಕ ನೋಂದಾವಣಿ ಕಚೇರಿಯಿಂದ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಪೇಕ್ಷಿತ ಹಾಗೂ ಆಕ್ಷೇಪಾರ್ಹ ಬರಹಗಳನ್ನು ಹಾಕುವ ಮೂಲಕ, ಭಾರತದಲ್ಲಿ ಸಾಮಾಜಿಕ ಶಾಂತಿ ಹಾಗೂ ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತರುವುದನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. 15

ಚೇತನ್ ಅಹಿಂಸಾ ವಿಸಾ ರದ್ದು ಪಡಿಸಿದ ಕೇಂದ್ರ ಸರಕಾರ Read More »

ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ

16 ಹೊಸ ಮುಖಗಳಿಗೆ ಅವಕಾಶ ಪುತ್ತೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಬಾಕಿ ಇರಿಸಿಕೊಂಡಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಿಗೆ ಮೂರನೇ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆಯಾಗಿದ್ದು, ಇನ್ನೂ 15 ಕ್ಷೇತ್ರಗಳಲ್ಲಿ ಟಿಕೆಟ್‌ ಬಾಕಿ ಇರಿಸಿಕೊಳ್ಳಲಾಗಿದೆ. ಕೋಲಾರ ಕ್ಷೇತ್ರದಿಂದ ಭಾರೀ ನಿರೀಕಷೆ ಹುಟ್ಟಿಸಿದ್ದ ಸಿದ್ಧರಾಮಯ್ಯ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿಲ್ಲ. ಕೋಲಾರದಿಂದ ಕೊತ್ತೂರು ಜಿ ಮಂಜುನಾಥ್‌ಗೆ ಟಿಕೆಟ್‌ ನೀಡಲಾಗಿದೆ. ತೇರದಾಳ ಕ್ಷೇತ್ರದಿಂದ ಟಿಕೆಟ್‌ ನಿರೀಕ್ಷೆ ಇಟ್ಟಿದ್ದ ನಟಿ

ಕಾಂಗ್ರೆಸ್‌ನ ಮೂರನೇ ಪಟ್ಟಿ ಬಿಡುಗಡೆ Read More »

ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ

ಕಾರವಾರ : ಸಿದ್ಧರಾಮಯ್ಯಗೆ ನಿಲ್ಲೋಕೆ ಕ್ಷೇತ್ರ ಇಲ್ಲ ಎಂದು ಈಶ್ವರಪ್ಪನಿಗೆ ಬಿಜೆಪಿ ಟಿಕೆಟ್‌ ನೀಡಲಿಲ್ಲ ಎಂದು ಈಶ್ವರಪ್ಪ ವಿರುದ್ಧ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ನಾಯಕ ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ. ಉತ್ತರ ಕನ್ನಡದ ಹಳಿಯಾಳಕ್ಕೆ ಆರ್‌.ವಿ. ದೇಶಪಾಂಡೆ ಪರವಾಗಿ ಪ್ರಚಾರ ಮಾಡಲು ಆಗಮಿಸಿದ್ದ ಸಿದ್ಧರಾಮಯ್ಯ, ಪ್ರಚಾರ ಸಭೆಯ ವೇಳೆ, ಈಶ್ವರಪ್ಪ ಕುರಿತು ಲೇವಡಿ ಮಾಡಿದ್ದಾರೆ. ನನಗೆ ಕ್ಷೇತ್ರ ಇಲ್ಲ ಎಂದು ಈಶ್ಚರಪ್ಪ ಟೀಕಿಸಿದ್ದರು. ಈಗ ಈಶ್ವರಪ್ಪನಿಗೆ ಟಿಕೇಟೇ ಇಲ್ಲದಂತಾಗಿದೆ. ನನಗೆ ರಾಜ್ಯದ ಎಲ್ಲಾ ಕ್ಣೇತ್ರದಲ್ಲೂ ಸ್ಪರ್ಧೆ ಮಾಡುವಂತೆ

ನನಗೆ ಕ್ಷೇತ್ರವಿಲ್ಲ ಎಂದ ಈಶ್ವರಪ್ಪನಿಗೆ ಟಿಕೆಟೇ ಇಲ್ಲ ಎಂದು ಸಿದ್ದರಾಮಯ್ಯ ಲೇವಡಿ Read More »

ಪುಲ್ವಾಮ ದಾಳಿಯ ಬಗ್ಗೆ ಸತ್ಯಪಾಲ್ ಮಲಿಕ್ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಅಸಮರ್ಥತೆಯಿಂದ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ನಮ್ಮ ಯೋಧರಿಗೆ ವಿಮಾನ ಸಿಕ್ಕಿದ್ದರೆ ಈ ದಾಳಿಯನ್ನು ತಪ್ಪಿಸಬಹುದಿತ್ತು. ಈ ಬಹುದೊಡ್ಡ ತಪ್ಪಿಗೆ ಕ್ರಮ ತೆಗೆದುಕೊಳ್ಳುವ ಬದಲು ನೀವು ವಿಷಯವನ್ನು ನಿಗ್ರಹಿಸಿ ನಿಮ್ಮ ಇಮೇಜ್‌ಗೆ ಧಕ್ಕೆ ಆಗದಂತೆ ನೋಡಿಕೊಂಡಿರಿ. ಪುಲ್ವಾಮದ ಕುರಿತು ಸತ್ಯಪಾಲ್ ಮಲಿಕ್‌ರವರ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ ಎಂದು ಕಾಂಗ್ರೆಸ್ ಹೇಳಿದೆ.ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ

ಪುಲ್ವಾಮ ದಾಳಿಯ ಬಗ್ಗೆ ಸತ್ಯಪಾಲ್ ಮಲಿಕ್ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ ಎಂದ ಕಾಂಗ್ರೆಸ್ Read More »

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ

ಉಡುಪಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯಗಳನ್ನು ಚುರುಕುಗೊಳಿಸುತ್ತಿವೆ. ಸಭೆ-ಸಮಾರಂಭಗಳನ್ನು ಏರ್ಪಡಿಸುವುದು, ರಾಜಕೀಯ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರುತ್ತಿದ್ದಾರೆ. ಈಗ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಕೋರಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಕಮಾರ ಶೆಟ್ಟಿ ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಗುರುರಾಜ್ ಗಂಟಿಹೊಳೆ ಅವರು ಈಗ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ

ಕುಂದಾಪುರ ಶಾಸಕ ಹಾಲಾಡಿಯವರಿಂದ ಆಶೀರ್ವಾದ ಪಡೆದ ಬೈಂದೂರು ಶಾಸಕ ಗಂಟಿಹೊಳೆ Read More »

ಏ. 16 ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಭಾನುವಾರ (ನಾಳೆ) ಆಗಮಿಸಲಿದ್ದು, ಮೊದಲ ದಿನ ಕೋಲಾರದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಬಾರಿ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ ನೇಮ್ ಕುರಿತಾಗಿ ಮಾಡಿದ್ದ ಭಾಷಣ ಅವರ ಸಂಸತ್ ಸದಸ್ಯತ್ವ ಅನರ್ಹಕ್ಕೆ ಕಾರಣವಾಗಿತ್ತು. ಇದೀಗ ಕೋಲಾರದಲ್ಲೇ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್ ಭಾಗಿಯಾಗಲಿದ್ದು, ಈ ಮೂಲಕ ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ಮ 12.

ಏ. 16 ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ Read More »

ಕಂದಕಕ್ಕೆ ಉರುಳಿ ಬಿದ್ದ ಬಸ್‌ : 12 ಮಂದಿ ಸಾವು, 25 ಮಂದಿ ಗಾಯ

ಮಹಾರಾಷ್ಟ್ರ : ಮಹಾರಾಷ್ಟ್ರ ರಾಜ್ಯದಲ್ಲಿ ಜವರಾಯ ಅಟ್ಟಹಾಸ ಮೆರದಿದ್ದು, ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು, 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ 4 ಗಂಟೆಗೆ ಸಂಭವಿಸಿದೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. 40 ಜನರಿದ್ದ ಖಾಸಗಿ ಬಸ್​ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿದ್ದು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು ನಿದ್ರೆಯಲ್ಲಿದ್ದಾಗ

ಕಂದಕಕ್ಕೆ ಉರುಳಿ ಬಿದ್ದ ಬಸ್‌ : 12 ಮಂದಿ ಸಾವು, 25 ಮಂದಿ ಗಾಯ Read More »

error: Content is protected !!
Scroll to Top