ಸುದ್ದಿ

ಶಬರಿಮಲೆಯಲ್ಲಿ ಭಕ್ತರ ಭಾರಿ ದಟ್ಟಣೆ : ಸ್ಪಾಟ್‌ ಬಿಕ್ಕಿಂಗ್‌ಗೆ ಮಿತಿ ಹಾಕಲು ತೀರ್ಮಾನ

ಯಾತ್ರೆ ಆರಂಭದ ದಿನದಿಂದಲೇ ಸಾಲುಗಟ್ಟಿ ಬರುತ್ತಿರುವ ಅಯ್ಯಪ್ಪ ವ್ರತಧಾರಿಗಳು ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ-ಮಕರ ವಿಳಕ್ಕು ಯಾತ್ರೆ ಸೋಮವಾರದಿಂದ ವಿಧ್ಯುಕ್ತವಾಗಿ ಆರಂಭವಾಗಿದ್ದು, ಆರಂಭದಿಂದಲೇ ಸಿಕ್ಕಾಪಟ್ಟೆ ದಟ್ಟಣೆಯಿದೆ. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ಸ್ಥಳೀಯ ಪೊಲೀಸರು ಹೆಣಗಾಡುತ್ತಿದ್ದಾರೆ. ಆನ್‌ಲೈನ್‌ ಮತ್ತು ಸ್ಪಾಟ್‌ ಬುಕ್ಕಿಂಗ್‌ ಎಂಬೆರಡು ಸೌಲಭ್ಯಗಳ ಮೂಲಕ ಮಾತ್ರ ದರ್ಶನಕ್ಕೆ ಅವಕಾಶ ಇದ್ದರೂ ಭಕ್ತರು ಅನಿಯಮಿತವಾಗಿ ಬರುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ […]

ಶಬರಿಮಲೆಯಲ್ಲಿ ಭಕ್ತರ ಭಾರಿ ದಟ್ಟಣೆ : ಸ್ಪಾಟ್‌ ಬಿಕ್ಕಿಂಗ್‌ಗೆ ಮಿತಿ ಹಾಕಲು ತೀರ್ಮಾನ Read More »

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ : ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ Read More »

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ತೆರಿಗೆ ವಂಚಿಸಿ ಐಷರಾಮಿ ಕಾರು ನೋಂದಣಿ ಮಾಡಿದ ಪ್ರಕರಣ ಮಂಗಳೂರು : ತೆರಿಗೆ ವಂಚಿಸಿ ಐಷಾರಾಮಿ ಕಾರು ನೋಂದಣಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳೂರು ಮತ್ತು ಉಡುಪಿಯ ಆರ್ ಟಿಒ ಕಚೇರಿಯಲ್ಲಿ ಮಂಗಳವಾರ ಕಡತ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಆರ್‌ಟಿಒ ಕಚೇರಿಯಲ್ಲಿ ತೆರಿಗೆ ಕಡಿಮೆ ಮಾಡಿ ಬಿಎಂಡಬ್ಲ್ಯು ಕಾರೊಂದನ್ನು ನೋಂದಣಿ ಮಾಡಲಾಗಿದೆ. ಇದರಿಂದ ಸರ್ಕಾರಕ್ಕೆ ಸಂದಾಯ ಆಗಬೇಕಾಗಿದ್ದ ಸುಮಾರು 85 ಲಕ್ಷ ರೂ. ತೆರಿಗೆ ವಂಚನೆಯಾಗಿತ್ತು. ನೋಂದಣಿಗೆ ಸಂಬಂಧಿಸಿದಂತೆ ಮಂಗಳೂರು ಆರ್‌ಟಿಒ ಕಚೇರಿಯಲ್ಲೂ

ಮಂಗಳೂರು : ಆರ್‌ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ Read More »

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ

ನರೇಂದ್ರ ಮೋದಿ, ಅಮಿತ್‌ ಶಾ ಮತ್ತಿತರರು ಭಾಗವಹಿಸುವ ನಿರೀಕ್ಷೆ ಪಾಟ್ನಾ : ಬಿಹಾರದ ಮುಖ್ಯಮಂತ್ರಿ ಆಗಿ ದಾಖಲೆ 10ನೇ ಬಾರಿಗೆ ನಿತೀಶ್ ಕುಮಾರ್ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನವೆಂಬರ್ 20ರಂದು ನಿತೀಶ್ ಕುಮಾರ್ ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಿಹಾರದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಯ ಹಲವಾರು ಉನ್ನತ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ Read More »

ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಇನ್ನಷ್ಟು ಹೆಚ್ಚಿಸಿ ತರಗತಿಗೆ ಒಂದರಂತೆ ಶಿಕ್ಷಕರನ್ನು ನಿಗದಿಪಡಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಪ್ರಮಾಣ ಹೆಚ್ಚಿಸಲು ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಸಂಸ್ಥೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಲಭ್ಯವಾಗಬೇಕೆಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ತಿಳಿಸಿದರು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪೋಷಕರ ಮಹಾಸಭೆ ಮತ್ತು

ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ Read More »

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ

ಹುಬ್ಬಳ್ಳಿಯ ಓರ್ವ ವ್ಯಕ್ತಿಯೂ ಸಾವು ನವದೆಹಲಿ : ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಡುವೆ ಸೋಮವಾರ ನಸುಕಿನ ವೇಳೆ ಸಂಭವಿಸಿದ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಭಾರತೀಯರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಕನ್ನಡಿಗ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಡೀಸಿಲ್‌ ಟ್ಯಾಂಕರ್ ನಡುವೆ ಡಿಕ್ಕಿಯಾದ ರಭಸಕ್ಕೆ ಬಸ್ ಹೊತ್ತಿ ಉರಿದಿತ್ತು. ದುರ್ಘಟನೆಯಲ್ಲಿ 45 ಮಂದಿ ಭಾರತೀಯರು ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿದ್ದ 46 ಜನರಲ್ಲಿ 43

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ Read More »

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ

ಮೂರು ರಾಜ್ಯಗಳ ಸಂಗಮ ಸ್ಥಳದಲ್ಲಿ ಅಡಗಿಕೊಂಡಿದ್ದ ನಕ್ಸಲ್‌ ಮುಖಂಡನನ್ನು ಬೇಟೆಯಾಡಿದ ಭದ್ರತಾ ಪಡೆ ಹೈದರಾಬಾದ್‌ : ಆಂಧ್ರ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಎನ್​ಕೌಂಟರ್‌ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ. ಹಿಡ್ಮಾ ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಹಲವಾರು ಮಾವೋವಾದಿ ಅಡಗುತಾಣಗಳನ್ನು ಹೊಂದಿರುವ ಆಂಧ್ರ ಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ತ್ರಿ-ಜಂಕ್ಷನ್ ಬಳಿ ಈ

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ Read More »

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ

25 ಸ್ಥಳಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 13 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್​-ಫಲಾಹ್ ವಿಶ್ವವಿದ್ಯಾಲಯದ ಹಣಕಾಸು ವ್ಯವಹಾರದ ಕುರಿತ ತನಿಖೆಯನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದ್ದು, ವಿವಿಯ ಕಚೇರಿ ಸೇರಿ 25 ಸ್ಥಳಗಳ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ. ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ Read More »

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಇಷ್ಟಕ್ಕೂ ಬೆದರಿಕೆ ಹಾಕಿದ ವ್ಯಕ್ತಿಯ ಬೇಡಿಕೆ ಏನು ಗೊತ್ತೆ? ಬೆಂಗಳೂರು : ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇ-ಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇ-ಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್​ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ. ಇ-ಮೇಲ್‌ನಲ್ಲಿ ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ

ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ Read More »

ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ

ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಅವರನ್ನು ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಡಾ.ಬಿ.ಸಿ. ಶ್ರೀನಿವಾಸ್ ನೇತೃತ್ವದ ವೈದ್ಯರ ಚಿಕಿತ್ಸೆ ನೀಡುತ್ತಿದೆ. ಸಿದ್ದರಾಮಯ್ಯ ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕೂಡಲೇ ಆಸ್ಪತ್ರೆಗೆ ದೌಡಾಯಿಸಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ

ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ Read More »

error: Content is protected !!
Scroll to Top