ಸುದ್ದಿ

26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ನೇಮಕಾತಿ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಅ. 23 ರಿಂದ ನ. 9 ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಡಿ. 7 ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಶೀಘ್ರವೇ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿಯನ್ನೂ ಸರ್ಕಾರ ಹೊರಡಿಸಲಿದೆ. ಹೊಸದಾಗಿ ರಾಜ್ಯದಲ್ಲಿ 800 ಕೆಪಿಎಸ್ ‌ಶಾಲೆಗಳನ್ನೂ ಆರಂಭ ಮಾಡಲಾಗುತ್ತದೆ. ಆರನೇ […]

26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ Read More »

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ

ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪದಲ್ಲಿ ನಿಷೇಧಿಸಲು ಕರೆ ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆ (WHO) ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದೆ. ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪವೊಡ್ಡಿ ಅಡಿಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಅಡಿಕೆ ಮೇಲೆ ಅಪವಾದ ಹೊರಿಸುತ್ತಿರುವದು ಇದೇ ಮೊದಲಲ್ಲ. ಕಳೆದ ಸುಮಾರು ಒಂದೂವರೆ ದಶಕದಿಂದ ಅಡಿಕೆಯಿಂದ

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ Read More »

ರಾಷ್ಟ್ರಪತಿ, ಪ್ರಧಾನಿಯಿಂದ ಜನತೆಗೆ ದೀಪಾವಳಿ ಶುಭಾಶಯ

ಸ್ವದೇಶಿ ಉತ್ಪನ್ನಗಳನ್ನು ಖರೀದಿಸಿ ಹಬ್ಬವನ್ನು ಸಂಭ್ರಮಿಸಿ ಎಂದು ಕರೆ ನೀಡಿದ ಮೋದಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಈ ಬೆಳಕಿನ ಹಬ್ಬವು ಜನರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಲಿ ಎಂದು ದೀಪಾವಳಿ ಶುಭಾಶಯ ಕೋರಿ ಹಾರೈಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಶುಭಕೋರಿರುವ ಮೋದಿ, ಈ ಬೆಳಕಿನ ಹಬ್ಬವು ನಮ್ಮೆಲ್ಲರ ಜೀವನವನ್ನು ಸಾಮರಸ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ. ನಮ್ಮ ಸುತ್ತಲೂ ಸಕಾರಾತ್ಮಕತೆಯ ಮನೋಭಾವ ಮೇಲುಗೈ

ರಾಷ್ಟ್ರಪತಿ, ಪ್ರಧಾನಿಯಿಂದ ಜನತೆಗೆ ದೀಪಾವಳಿ ಶುಭಾಶಯ Read More »

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನ, ತರೀಕೆರೆಯಲ್ಲಿ, ನಡೆದ 14 ರ ವಯೋಮಾನದ ಬಾಲಕರ ಹೊನಲು ಬೆಳಕಿನ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಪ್ರಥಮ ಸ್ಥಾನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಇನ್ನು ಜಾತಿ ಗಣತಿ ಹೊಣೆ ಜಿಲ್ಲಾಡಳಿತ ಸಿಬ್ಬಂದಿಗೆ : ಶಿಕ್ಷಕರಿಗಿಲ್ಲ ಸಮೀಕ್ಷೆ ಹೊರೆ

ಅ.31ರ ವರೆಗೆ ಜಿಲ್ಲೆಯ ವಿವಿಧ ಇಲಾಖೆ ಸಿಬ್ಬಂದಿ ಬಳಸಿ ಗಣತಿ ನಡೆಸಲು ತೀರ್ಮಾನ ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ತಿಳಿಸಿದ್ದಾರೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲ್ಲ.

ಇನ್ನು ಜಾತಿ ಗಣತಿ ಹೊಣೆ ಜಿಲ್ಲಾಡಳಿತ ಸಿಬ್ಬಂದಿಗೆ : ಶಿಕ್ಷಕರಿಗಿಲ್ಲ ಸಮೀಕ್ಷೆ ಹೊರೆ Read More »

ಹೈಕೋರ್ಟ್‌ ಮೆಟ್ಟಿಲೇರಿದ ಚಿತ್ತಾಪುರದ ಆರ್‌ಎಸ್‌ಎಸ್‌ ಪಥಸಂಚಲನ ಜಟಾಪಟಿ

ಅ.24ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ವಿಚಾರ ಹೈಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ. ಚಿತ್ತಾಪುರದಲ್ಲಿ ಇಂದು (ಭಾನುವಾರ) ಆರ್​ಎಸ್​ಎಸ್​​ ಪಥ ಸಂಚಲನ ನಡೆಯಬೇಕಿತ್ತು. ಆದರೆ ಅನುಮತಿ ನಿರಾಕರಿಸಿ ತಹಸೀಲ್ದಾರ್​ ನಾಗಯ್ಯ ಹಿರೇಮಠ

ಹೈಕೋರ್ಟ್‌ ಮೆಟ್ಟಿಲೇರಿದ ಚಿತ್ತಾಪುರದ ಆರ್‌ಎಸ್‌ಎಸ್‌ ಪಥಸಂಚಲನ ಜಟಾಪಟಿ Read More »

ದೀಪಾವಳಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪಟಾಕಿ ಸಿಡಿಸಲು ಹಲವು ನಿರ್ಬಂಧ ; ಮಾಲಿನ್ಯ ತಡೆಯಲು ಸೂಚನೆ ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಹೀಗಾಗಿ ಮಾಲಿನ್ಯ ರಹಿತವಾಗಿ ಆಚರಿಸಲು ಮನವಿ ಮಾಡಲಾಗಿದೆ. ಹಸಿರು ಪಟಾಕಿ ಮಾತ್ರ ಬಳಸಿ. ಪಟಾಕಿ ಬಾಕ್ಸ್‌ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್

ದೀಪಾವಳಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ Read More »

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರ

ಸಚಿವ ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಇಂದು ನಡೆಯಬೇಕಿದ್ದ ಪಥಸಂಚಲನ ಬೆಂಗಳೂರು : ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿನಿಧಿಸುತ್ತಿರುವ ಚಿತ್ತಾಪುರದಲ್ಲಿ ಇಂದು ನಡೆಯಬೇಕಿದ್ದ ಆರ್‌ಎಸ್‌ಎಸ್‌ ಪಥ ಸಂಚನಲನಕ್ಕೆ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಎಂಬ ಕಾರಣ ನೀಡಿ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ತಹಸೀಲ್ದಾರ್‌ ನಾಗಯ್ಯ ಅನುಮತಿ ನೀಡಲು ನಿರಾಕರಿಸಿದ್ದಾರೆ. ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಹಾಕಿದ್ದನ್ನು ಖಂಡಿಸಿ ತವರು ಕ್ಷೇತ್ರದಲ್ಲಿ ಬಂದ್‌ ನಡೆಸಿ ಪ್ರತಿಭಟನೆ ನಡೆಸಲಾಗಿದೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರ Read More »

ದೀಪಾವಳಿಗೆ ದೇಶದಲ್ಲಿ ನಡೆಯುತ್ತಿದೆ ಭರ್ಜರಿ ಖರೀದಿ : ಪ್ರಧಾನಿ ಮೋದಿ ಖುಷ್‌

ಕಾರು, ಇಲೆಕ್ಟ್ರಾನಿಕ್ಸ್‌ ವಸ್ತು, ಚಿನ್ನ, ಬೆಳ್ಳಿ ಸೇರಿ ಎಲ್ಲ ವಸ್ತುಗಳು ಭರ್ಜರಿ ಸೇಲ್‌ ನವದೆಹಲಿ : ಈ ವರ್ಷದ ದೀಪಾವಳಿ ಭಾರತೀಯರ ಪಾಲಿಗೆ ವಿಶೇಷವಾಗಿದೆ. ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದ್ದು, ಇದೆಲ್ಲ ಜಿಎಸ್‌ಟಿ ಇಳಿಕೆ ಪರಿಣಾಮ ಎನ್ನಲಾಗುತ್ತಿದೆ. ಧನತ್ರಯೋದಶಿ ಸಂದರ್ಭದಲ್ಲಿ ಏನಾದರೊಂದು ಹೊಸತು ವಸ್ತು ಖರೀದಿಸುವುದು ಭಾರತೀಯರ ಸಂಪ್ರದಾಯ. ಈ ವರ್ಷ ಧನತ್ರಯೋದಶಿ ಪ್ರಯುಕ್ತ ದೇಶಾದ್ಯಂತ ಈಗಾಗಲೇ 1 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ದಾಖಲೆ ವ್ಯಾಪಾರ ನಡೆದಿದೆ. ಚಿನ್ನ, ಬೆಳ್ಳಿ, ವಾಹನಗಳು, ಇಲೆಕ್ಟ್ರಾನಿಕ್ ವಸ್ತುಗಳು

ದೀಪಾವಳಿಗೆ ದೇಶದಲ್ಲಿ ನಡೆಯುತ್ತಿದೆ ಭರ್ಜರಿ ಖರೀದಿ : ಪ್ರಧಾನಿ ಮೋದಿ ಖುಷ್‌ Read More »

error: Content is protected !!
Scroll to Top