ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು
ವಿಟ್ಲ: ಉಕ್ಕುಡದಲ್ಲಿ ವಿದ್ಯುತ್ ಕಂಬಕ್ಕೆ ಕಾರೊಂದು ಗುದ್ದಿದ ಘಟನೆ ನಡೆದಿದೆ. ಕಾರು ಢಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು, ಕಾರಿನ ಮುಂಭಾಗ ಸಹ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದಿವೆ. ಇದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಜೊತೆಗೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು Read More »










