ಟ್ರೋಫಿ ಜೊತೆ ಹೋಟೆಲ್ಗೆ ಹೋದ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ : ಸೋಷಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್
ಸೋತ ದುಃಖ, ಅವಮಾನದಿಂದ ಕಂಗೆಟ್ಟು ಹೋಗಿರುವ ಪಾಕಿಸ್ತಾನೀಯರು ದುಬೈ: ಏಷ್ಯಾ ಕಪ್ 2025ರ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ಭಾನುವಾರ ಭಾರತ ತಂಡ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಆದರೆ ಈ ಐತಿಹಾಸಿಕ ಗೆಲುವಿನ ನಂತರ ನಡೆದಿದ್ದು ಮಾತ್ರ ಭಾರಿ ನಾಟಕೀಯ ಬೆಳವಣಿಗೆ. ಭಾರತೀಯ ತಂಡವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರೂ ಆಗಿರುವ ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರ ಕೈಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಕಾರಣ ಅವರು ಟ್ರೋಫಿ ಮತ್ತು ವಿಜೇತರ […]










