ಸುದ್ದಿ

ನಾಳೆ ಮೈಸೂರಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ

ರಾಷ್ಟ್ರಪತಿ, ಪ್ರಧಾನಿಯಿಂದ ಶೋಕ ಸಂದೇಶ ಬೆಂಗಳೂರು : ಕನ್ನಡದ ಹೆಮ್ಮೆಯ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪನವರು ಬುಧವಾರ ಇಹಲೋಕ ತ್ಯಜಿಸಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಮೈಸೂರಿನಲ್ಲಿ ನೆರವೇರಲಿದೆ. ಇಂದು ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಪಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1 ಗಂಟೆ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ಮಧ್ಯಾಹ್ನ 3 […]

ನಾಳೆ ಮೈಸೂರಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ Read More »

ಖಾಸಗಿ ಜಮೀನಿನಲ್ಲಿ ಪಿಡಬ್ಲ್ಯೂಡಿ ನಿರ್ಮಿಸಿದ ರಸ್ತೆ ಅಗೆದು ಹಾಕಿದ ಮಾಲೀಕರು

ಜಮೀನು ಮಾಲೀಕರ ಒಪ್ಪಿಗೆಯಿಲ್ಲದೆ ನಿರ್ಮಿಸಿದ್ದ ರಸ್ತೆ; ಸಾರ್ವಜನಿಕರ ಓಡಾಟಕ್ಕೆ ತೊಂದರೆ ಮಂಗಳೂರು: ಖಾಸಗಿ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಿರುವ ಪಿಡಬ್ಲ್ಯೂಡಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯ ತೀರ್ಪು ನೀಡಿದ್ದರೂ ಅಧಿಕಾರಿಗಳು ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಜಮೀನು ಮಾಲಕರು ರಸ್ತೆ ಅಗೆದಿರುವ ಘಟನೆ ಬುಧವಾರ ಬಜಪೆ ಸಮೀಪ ನಿಡ್ಡೋಡಿಯ ಮಂಜನಕಟ್ಟೆ ಎಂಬಲ್ಲಿ ನಡೆದಿದೆ. ನಿಡ್ಡೋಡಿ ಮಂಜನಕಟ್ಟೆ ನಿವಾಸಿ ಸಿಸಿಲಿಯಾ ಅವರು ವಿದೇಶದಲ್ಲಿದ್ದ ಸಂದರ್ಭ ಅವರ ಖಾಸಗಿ ಜಮೀನಿನಲ್ಲಿ ಯಾವುದೇ ಮಾಹಿತಿ ನೀಡದೆ ಪಿಡಬ್ಲ್ಯೂಡಿ ಇಲಾಖೆ 2008ರಲ್ಲಿ ರಸ್ತೆ ನಿರ್ಮಾಣ

ಖಾಸಗಿ ಜಮೀನಿನಲ್ಲಿ ಪಿಡಬ್ಲ್ಯೂಡಿ ನಿರ್ಮಿಸಿದ ರಸ್ತೆ ಅಗೆದು ಹಾಕಿದ ಮಾಲೀಕರು Read More »

ಸೋಷಿಯಲ್‌ ಮೀಡಿಯಾದಲ್ಲಿ ಸಿಎಂ ಟೀಕೆ : ಬಿಜೆಪಿ ಐಟಿ ಸೆಲ್‌ ಯುವಕನ ವಿರುದ್ಧ ಕೇಸ್‌

ಕಟೀಲು ದೇವಳ ಪೂಜಾ ದರ ಏರಿಕೆ ಹಿನ್ನೆಲೆಯಲ್ಲಿ ಮಾಡಿದ್ದ ಟೀಕೆಗೆ ಕೇಸ್‌ ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯ ದರಗಳನ್ನು ಏರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್‌ಗೆ ಸೇರಿದ ಯುವಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳದ ಈದು ನಿವಾಸಿ ಪ್ರಖ್ಯಾತ್ ಬಿ.ಜೆ ಎಂದು ಗುರುತಿಸಲಾದ ಯುವಕ ಸೋಷಿಯಲ್‌ ಮೀಡಿಯಾಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸುಳ್ಳು

ಸೋಷಿಯಲ್‌ ಮೀಡಿಯಾದಲ್ಲಿ ಸಿಎಂ ಟೀಕೆ : ಬಿಜೆಪಿ ಐಟಿ ಸೆಲ್‌ ಯುವಕನ ವಿರುದ್ಧ ಕೇಸ್‌ Read More »

ಪ್ರಸಿದ್ಧ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಕನ್ನಡ ಸಾರಸ್ವತ ಲೋಕದ ಪ್ರಸಿದ್ಧ ಕಾದಂಬರಿಕಾರ, ಹಿರಿಯ ಸಾಹಿತಿ ಎಸ್ ಎಲ್. ಭೈರಪ್ಪ ಬುಧವಾರ(ಸೆ24) ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ 94 ವರ್ಷ ಪ್ರಾಯವಾಗಿದ್ದು, ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದರು. ಪರ್ವ, ಉತ್ತರಕಾಂಡ, ಅವರಣ, ವಂಶವೃಕ್ಷಸೇರಿ ಹಲವು ಕೃತಿಗಳನ್ನು ಎಲ್ ಭೈರಪ್ಪ ರಚಿಸಿದ್ದರು. ಮೈಸೂರಿನಲ್ಲಿ ವಾಸವಿದ್ದರು. ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ

ಪ್ರಸಿದ್ಧ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ Read More »

ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ನಲ್ಲಿ ಏರ್ಪಡಿಸಿದ ಝೋನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರ ವರ್ಗದ ಗಣಿತ ಮಾದರಿ ಪ್ರದರ್ಶನದಲ್ಲ್ರಿ 9ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಜಿ. ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ 10ನೇತರಗತಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಗಣಿತ ಮಾದರಿ ಸ್ಪರ್ಧೆ ಪಂಜಾಬಿನ ಸರ್ವಹಿತಕಾರ್ಯ ಕೇಶವ ವಿದ್ಯಾನಿಕೇತನ ವಿದ್ಯಾಧಾಮ ಜಲಂಧರದಲ್ಲಿ

ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ, ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ‌

ಕಡಬ: ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ, ಮಂಗಳೂರು ಕಾವೂರು ಶಾಖಾ ಮಠದ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿಭಾಗದ 2025 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವನ್ನು ಕಡಬ ತಾಲೂಕಿನ ದ.ಕ.ಜಿ. ಪಂ.ಹಿ ಪ್ರಾ. ಶಾಲೆ ಗೋಳಿಯಡ್ಕ, ರೆಂಜಿಲಾಡಿಯಲ್ಲಿ, 23-09-2025 ರಂದು ಅಪರಾಹ್ನ 2.30ಕ್ಕೆ ನಡೆಯಿತು, ವಾರ್ಷಿಕ ವಿಶೇಷ ಶಿಬಿರವನ್ನು ರೆಂಜಿಲಾಡಿ ಬೀಡಿನ ಅರಸರಾದ ಶ್ರೀ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳರು ದೀಪ‌ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ವಹಿಸಿದ್ದರು.

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ, ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ‌ Read More »

ಜಾತಿ ಗಣತಿಗೆ ಸಾವಿರ ಸಮಸ್ಯೆ : ಎರಡೂ ದಿನಗಳಲ್ಲಿ ಗುರಿ ಮುಟ್ಟಲು ವಿಫಲ

ಆಪ್‌ ಕುರಿತು ಹಲವು ದೂರು; ಒಟಿಪಿ ಬರುವುದಿಲ್ಲ ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸೆ.22ರಿಂದ ಆರಂಭವಾಗಿದ್ದರೂ ಮೊದಲ ಎರಡು ದಿನ ಪೂರ್ಣ ಪ್ರಮಾಣದಲ್ಲಿ ಸಮೀಕ್ಷೆ ನಡೆದಿಲ್ಲ. ಸಮೀಕ್ಷೆಗಾಗಿ ಅಭಿವೃದ್ಧಿಪಡಿಸಿದ ಆಪ್ ಓಪನ್ ಆಗದಿರುವುದು, ಓಪನ್ ಆದರೂ ಒಟಿಪಿ ಬರುತ್ತಿಲ್ಲ ಎಂಬ ದೂರುಗಳು ಕೇಳೀಬಂದಿವೆ. ಆಪ್‌ ಅಪ್ಡೇಟ್ ಕೇಳಿ ತಂತಾನೆ ಆಪ್ ಕ್ಲೋಸ್ ಆಗುತ್ತಿದೆ, ಸರ್ವೆ ಸಂಬಂಧಿಸಿದ ಯುಎಚ್‌ಐಡಿ ಸ್ಟಿಕ್ಕರ್ ಸರಿಯಾಗಿ ಅಂಟಿಸಿಲ್ಲ ಮುಂತಾದ ಸಮಸ್ಯೆಗಳನ್ನು ಸಿಬ್ಬಂದಿ ಎದುರಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಸರಿಯಾಗಿ ಲೊಕೇಷನ್ ತೋರಿಸದೇ

ಜಾತಿ ಗಣತಿಗೆ ಸಾವಿರ ಸಮಸ್ಯೆ : ಎರಡೂ ದಿನಗಳಲ್ಲಿ ಗುರಿ ಮುಟ್ಟಲು ವಿಫಲ Read More »

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಸಂವಿಧಾನ ದತ್ತ ಅಧಿಕಾರ ಇಲ್ಲದೆ ಮಾಡುವ ಗಣತಿಗೆ ತಡೆಕೋರಿ ಅರ್ಜಿ ಬೆಂಗಳೂರು: ಜಾತಿಗಣತಿ ಸಮೀಕ್ಷೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ನಡೆಯಲಿದೆ. ನಿನ್ನೆ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸರ್ಕಾರದ ಪರ ವಕೀಲರಾದ ಶಶಿಕಿರಣ್ ಶೆಟ್ಟಿ ಮತ್ತು ಅಭಿಷೇಕ್ ಮನುಸಿಂಘ್ವಿ ಹಾಗೂ ಅರ್ಜಿದಾರರ ಪರ ಪ್ರಭುಲಿಂಗ ನಾವದಗಿ, ಅಶೋಕ್ ಹಾರನಹಳ್ಳಿ, ಶ್ರೀರಂಗ, ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಪ್ರಭುಲಿಂಗ ನಾವದಗಿ ಸರ್ಕಾರದ

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ Read More »

ವಿಟ್ಲ : ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಸೆರೆ

ವಿಟ್ಲ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ನಾರಾಯಣ (42) ಎಂಬಾತನನ್ನು ಪೊಲೀಸರು ಈ ಸಂಬಂಧ ಬಂಧಿಸಿದ್ದಾರೆ. ತಂದೆ-ತಾಯಿ ಕೆಲಸಕ್ಕೆ ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಂಟ್ವಾಳ ತಾಲೂಕಿನ ನಾರಾಯಣ ಎಂಬಾತ ಲೈಂಗಿಕ ನೀಡಿರುವುದಾಗಿ ಮಹಿಳೆಯೋರ್ವರು ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಅಕ್ರ 133/2025 ಕಲಂ: 7,

ವಿಟ್ಲ : ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಸೆರೆ Read More »

ಮಹೇಶ್‌ ತಿಮರೋಡಿ ಒಂದು ವರ್ಷದ ಮಟ್ಟಿಗೆ ಗಡಿಪಾರು

ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪುತ್ತೂರು ಎಸಿ ಧರ್ಮಸ್ಥಳ : ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಿವಿಧ ಪ್ರಕರಣದ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ 30ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ

ಮಹೇಶ್‌ ತಿಮರೋಡಿ ಒಂದು ವರ್ಷದ ಮಟ್ಟಿಗೆ ಗಡಿಪಾರು Read More »

error: Content is protected !!
Scroll to Top