ಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅಧಿಕಾರ ಹಂಚಿಕೆ ಸೂತ್ರದನ್ವಯ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಗುರುವಾರ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ಇರಲಿಲ್ಲ. ಹೀಗಾಗಿ ಅವರ ಕಾರ್ಯದರ್ಶಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರವನ್ನು ನೀಡಿದ್ದರು. ಬುಧವಾರ […]

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು Read More »

ಅಕ್ರಮ ಗೋಹತ್ಯೆ : ಇಬ್ಬರ ಬಂಧನ, ಆರು ಜಾನುವಾರು ರಕ್ಷಣೆ

ಬಂಟ್ವಾಳ : ಬಂಟ್ವಾಳ ಪಟ್ಟಣ ಪೊಲೀಸರು ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿ ಅಕ್ರಮ ಗೋಹತ್ಯೆ ಜಾಲವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಆರು ಜೀವಂತ ದನಗಳು, ಗೋಮಾಂಸ, ಒಂದು ಕಾರು ಮತ್ತು ಕೃತ್ಯಕ್ಕೆ ಬಳಸಿದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ. ಬಂಟ್ವಾಳ ಪಟ್ಟಣ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿಗಾರ್ ಅವರಿಗೆ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ

ಅಕ್ರಮ ಗೋಹತ್ಯೆ : ಇಬ್ಬರ ಬಂಧನ, ಆರು ಜಾನುವಾರು ರಕ್ಷಣೆ Read More »

ಸೋಮವಾರ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸಾಧ್ಯತೆ?

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಪಟ್ಟವೇರಲು ಸಿದ್ಧತೆ ಬೆಂಗಳೂರು: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ, ಡಿಸಿಎಂ ಡಿ.ಕೆ ಶಿವಕುಮಾರ್ ಪಾಳಯದಲ್ಲಿ ಚಟುವಟಿಕೆ ಗರಿಗೆದರಿದ್ದು, ಬಹುತೇಕ ಸೋಮವಾರ ಅವರಿಗೆ ಪಟ್ಟಾಭಿಷೇಕಬಾಗಲಿದೆ ಎಂದು ಮೂಲವೊಂದು ತಿಳಿಸಿದೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುತ್ತಿದ್ದಂತೆ, ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಶುಕ್ರವಾರ ಉಪರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯಪಾಲರು ಕಾರ್ಯದ ಒತ್ತಡದಲ್ಲಿರುತ್ತಾರೆ. ಶುಕ್ರವಾರ ಸಂಜೆಯೊಳಗೆ ರಾಜೀನಾಮೆ ಅಂಗೀಕಾರವಾಗಬೇಕಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ. ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ

ಸೋಮವಾರ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸಾಧ್ಯತೆ? Read More »

ಗಿರ್‌ ವನ್ಯಧಾಮದಲ್ಲಿ 7 ಸಿಂಹಗಳ ನಿಗೂಢ ಸಾವು

ವೈರಸ್‌ ಸೋಂಕಿನ ಶಂಕೆಯಲ್ಲಿ 7 ಸಿಂಹಗಳು ಕ್ವಾರಂಟೈನ್‌ ಗಾಂಧಿನಗರ: ಏಷ್ಯಾಟಿಕ್‌ ಸಿಂಹಗಳ ಆವಾಸಸ್ಥಾನವೆಂದೇ ಖ್ಯಾತಿ ಪಡೆದಿರುವ ಗಿರ್‌ ಅರಣ್ಯ ಪ್ರದೇಶದಲ್ಲಿ 7 ಸಿಂಹಗಳ ಸರಣಿ ಸಾವು ಸಂಭವಿಸಿದೆ. ಗುಜರಾತ್‌ನ ಗಿರ್‌ ಕಾಡಿನಲ್ಲಿ ಸಿಂಹಗಳ ನಿರಂತರ ಸಾವು ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದಲ್ಲಿ ಭಾರಿ ಕಳವಳ ಹುಟ್ಟುಹಾಕಿದೆ. ಕಳೆದ ಕೆಲ ದಿನಗಳಲ್ಲಿ 7 ಸಿಂಹಗಳು ಸಾವನ್ನಪ್ಪಿದ್ದು, ನಿಗೂಢ ವೈರಸ್‌ನ ಆತಂಕ ಎದುರಾಗಿದೆ. ಇದರಿಂದಾಗಿ ಸಾವನ್ನಪ್ಪಿದ ಅರಣ್ಯ ವ್ಯಾಪ್ತಿಯಲ್ಲಿರುವ 17 ಸಿಂಹಗಳನ್ನು ಕ್ವಾರಂಟೈನ್‌ ಮಾಡಲಾಗಿದೆ. ಈ ಪೈಕಿ 8

ಗಿರ್‌ ವನ್ಯಧಾಮದಲ್ಲಿ 7 ಸಿಂಹಗಳ ನಿಗೂಢ ಸಾವು Read More »

ಬಸ್ – ಕಾರು ನಡುವೆ ಅಪಘಾತ

ಮೂಡಬಿದಿರೆ: ಖಾಸಗಿ ಬಸ್ – ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಳುವಾಯಿ ಕಾಂತಾವರ ಕ್ರಾಸ್ ಬಳಿ ನಡೆದಿದೆ. ಗುದ್ದಿದ ರಭಸಕ್ಕೆ ಎರಡೂ ವಾಹನಗಳಿಗೆ ತೀವ್ರ ಹಾನಿಯಾಗಿದೆ. ಕಾಂತಾವರ ‌ಕ್ರಾಸ್ ಸಮೀಪ ಇರುವ ಯು ಟರ್ನ್ ಅನ್ನು ಬುಧವಾರದಿಂದ ಬಂದ್ ಮಾಡಲಾಗಿದೆ. ಕಾಂತಾವರ ಕಡೆಯಿಂದ ಬರುವ ವಾಹನಗಳು ಮೂಡುಬಿದಿರೆ ಕಡೆಗೆ ಹೋಗುವ ಕ್ರಾಸ್ ರಸ್ತೆಯನ್ನು ಏಕಾಏಕಿ ಬಂದ್ ಮಾಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಭಾರಿ ಗೊಂದಲ ಉಂಟಾಗಿದೆ. ರಸ್ತೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ಕಾಂತಾವರ ಕಡೆಯಿಂದ ಬರುವ ವಾಹನಗಳು

ಬಸ್ – ಕಾರು ನಡುವೆ ಅಪಘಾತ Read More »

SDRF ಸಿಪಿಐ ಶ್ರೀಶೈಲ ಚೌಗಲೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ಎಸ್‌ಡಿಆರ್‌ಎಫ್ ಸಿಪಿಐ ಶ್ರೀಶೈಲ ಚೌಗಲೆ(37) ಅವರು ನೇಣು ಬಿಗಿದುಕೊಂಡು ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಮ್ಮ ನಗರದಲ್ಲಿ ನಡೆದಿದೆ. ಮನೆಯ ಕೊಠಡಿಯನ್ನು ಲಾಕ್ ಮಾಡಿಕೊಂಡು ಅವರು ನೇಣಿಗೆ ಶರಣಾಗಿರುವುದಾಗಿದೆ. ಅವರ ಪತ್ನಿಗೆ ಅನುಮಾನ ಬಂದು ತಕ್ಷಣವೇ ಎಸ್‌ಡ್ಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಬಂದು ಬಾಗಿಲು ಒಡೆದು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿದ್ದಾರೆ ಎನ್ನುವ ಸಂಗತಿ ಇನ್ನಷ್ಟೇ ತಿಳಿಯಬೇಕಿದೆ. ಉದ್ಯಮಬಾಗ ಪೊಲೀಸರು ಪ್ರಕರಣ

SDRF ಸಿಪಿಐ ಶ್ರೀಶೈಲ ಚೌಗಲೆ ಆತ್ಮಹತ್ಯೆಗೆ ಶರಣು Read More »

ನೇಣು ಬಿಗಿದು ಮಹಿಳೆ ಸಾವು: ಸಂದೇಹ ವ್ಯಕ್ತಪಡಿಸಿದ ಕುಟುಂಬ ವರ್ಗ

ಪುತ್ತೂರು: ಮಹಿಳೆಯೊಬ್ಬರ ಮೃತದೇಹ ನೇಣು ಬಿಗಿದ‌ ಸ್ಥಿತಿಯಲ್ಲಿ ಮನೆಯ ಸಮೀಪದ ಶೆಡ್‌ನಲ್ಲಿ ‌ಪತ್ತೆಯಾದ ಘಟನೆ ಮುಳ್ಳೇರಿಯಾದ ಪಳ್ಳಪ್ಪಾಡಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸೆರೆನಾ (27) ಎಂದು‌ ಗುರುತಿಸಲಾಗಿದೆ. ಪಳ್ಳಪ್ಪಾಡಿಯ ಜೈನುದ್ದೀನ್ ಎಂಬವರಿಗೆ ಆಕೆಯನ್ನು ನಾಲ್ಕು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು.‌ ಆಕೆಗೆ ಮಕ್ಕಳಾಗದ ಕಾರಣ ಗಂಡನ ಮನೆಯವರು ಮಾನಸಿಕ, ದೈಹಿಕ ಕಿರುಕುಳ ನೀಡಲಾರಂಭಿಸಿದ್ದರು ಎಂದು ಹೇಳಲಾಗುತ್ತಿದೆ. ಅತ್ತೆಯ ಕಿರುಕುಳ ತಾಳಲಾರದೆ ಸಾಕಷ್ಟು ಬಾರಿ ಆಕೆ ತವರಿಗೆ ಬಂದು ನೆಲೆಸುತ್ತಿದ್ದರು. ಸಂಬಂಧಿಕರು ಸಂಧಾನ ನಡೆಸಿ ಪತಿಯ ಮನೆಗೆ ಮತ್ತೆ

ನೇಣು ಬಿಗಿದು ಮಹಿಳೆ ಸಾವು: ಸಂದೇಹ ವ್ಯಕ್ತಪಡಿಸಿದ ಕುಟುಂಬ ವರ್ಗ Read More »

ರಾಜೀನಾಮೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದಂತೆ ‌ಸಿದ್ದರಾಮಯ್ಯ ಅವರು ಸಿ.ಎಂ. ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೈಕಮಾಂಡ್ ‌ಸೂಚಿಸಿದ ಹಾಗೆ ತಾವು ರಾಜೀನಾಮೆ ಸಲ್ಲಿಕೆ ಮಾಡಿದ್ದಾಗಿ ತಿಳಿಸಿದ್ದಾರೆ. ಯಾವುದೋ ಕಾರ್ಯದ ನಿಮಿತ್ತ ರಾಜ್ಯಪಾಲರು ಇಂದೋರ್‌ಗೆ ಹೋಗಿದ್ದು, ಅವರು ಮರಳಿದ ಬಳಿಕ ರಾಜೀನಾಮೆ ಪತ್ರ ಅಂಗೀಕಾರವಾಗಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಎರಡು ಬಾರಿ ಸಿ.ಎಂ. ಆಗುವ ಅವಕಾಶ ಸಿಕ್ಕಿದೆ. ಎರಡು ಬಾರಿ ವಿರೋಧ ಪಕ್ಷದ

ರಾಜೀನಾಮೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು? Read More »

ಸಿಎಂ ‌ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಮದ್ಯಾಹ್ನ‌ದ ಬಳಿಕ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸುವ ಸಲುವಾಗಿ ರಾಜಭವನಕ್ಕೆ ತೆರಳಿದ್ದು, ರಾಜ್ಯಪಾಲರು ನಗರದಲ್ಲಿರದ ಕಾರಣ ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ. ಮೂಲಗಳ ಪ್ರಕಾರ ರಾಜ್ಯಪಾಲರು ರಾಜ ಭವನ ಕ್ಕೆ ಹಿಂದಿರುಗಿದ ನಂತರವಷ್ಟೇ ರಾಜೀನಾಮೆ ಪತ್ರ ಅಂಗೀಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಸಾಂವಿಧಾನಿಕ ಪ್ರಕ್ರಿಯೆಗಳ ನಂತರ ಅಂತಿಮ ಘೋಷಣೆ ಹೊರಬೀಳಲಿದೆ. ಸಿಎಂ ‌ಸ್ಥಾನಕ್ಕೆ ರಾಜೀನಾಮೆ ನೀಡುವ

ಸಿಎಂ ‌ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ Read More »

ಇಂದು ಮದ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

ಸಂಪುಟ ಸಹೋದ್ಯೋಗಿಗಳ ಜೊತೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಭಾವುಕರಾಗಿ ನಿರ್ಧಾರ ಪ್ರಕಟಿಸಿದ ಸಿಎಂ ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ. ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು

ಇಂದು ಮದ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ Read More »

error: Content is protected !!
Scroll to Top