ಸುದ್ದಿ

ಸೇನಾ ವಾಹನ ಕಮರಿಗೆ ಉರುಳಿ ಐವರು ಯೋಧರು ಸಾವು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. 18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನ ಇದು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು […]

ಸೇನಾ ವಾಹನ ಕಮರಿಗೆ ಉರುಳಿ ಐವರು ಯೋಧರು ಸಾವು Read More »

ನಾಳೆಯಿಂದ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮಹಾಅಧಿವೇಶನದ ಶತಮಾನೋತ್ಸವ

ರಾಷ್ಟ್ರೀಯ ನಾಯಕರ ದಂಡೇ ಬೆಳಗಾವಿಗೆ; ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್‌ ಮಹಾಅಧಿವೇಶನಕ್ಕೆ 100 ವರ್ಷ ತುಂಬುತ್ತಿರುವ ನೆನಪಿಗಾಗಿ ನೂರು ವರ್ಷ ಹಿಂದೆ ಅಧಿವೇಶನ ನಡೆದ ಬೆಳಗಾವಿಯಲ್ಲೇ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾಅಧಿವೇಶನ ನಡೆದಿತ್ತು. ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ವಿಜೃಂಭಣೆಯಿಂದ ಶತಮಾನೋತ್ಸವ ಆಚರಿಸಲು ಸಜ್ಜಾಗಿದೆ. ಗುರುವಾರ ಮತ್ತು ಶುಕ್ರವಾರ ಎರಡು ದಿನ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಕಾಂಗ್ರೆಸ್

ನಾಳೆಯಿಂದ ಬೆಳಗಾವಿಯಲ್ಲಿ ಕಾಂಗ್ರೆಸ್‌ ಮಹಾಅಧಿವೇಶನದ ಶತಮಾನೋತ್ಸವ Read More »

ಭಾರತೀಯ ರಾಜಕಾರಣದ ಅಜಾತಶತ್ರು ವಾಜಪೇಯಿ

ಬದುಕಿದ್ದರೆ ಇಂದವರಿಗೆ 100 ತುಂಬುತ್ತಿತ್ತು ‘ನನಗೆ ಅಷ್ಟೊಂದು ಎತ್ತರವನ್ನು ಕೊಡಬೇಡ ದೇವರೇ, ನನ್ನ ಆತ್ಮೀಯರು ನನ್ನನ್ನು ಆಲಂಗಿಸಲು ಆಗದಷ್ಟು!’ಈ ಕವಿತೆಯನ್ನು ಬರೆದ ಸಾತ್ವಿಕ ಕವಿ, ಚತುರಮತಿ ರಾಜಕಾರಣಿ, ಪ್ರಖರ ಭಾಷಣಕಾರ ಅಟಲ್ ಬಿಹಾರಿ ವಾಜಪೇಯಿ ಅವರ ಬಗ್ಗೆ ಹತ್ತಾರು ಬಾರಿ ಬರೆದಿದ್ದೇನೆ. ಎಷ್ಟು ಬರೆದರೂ ಅದು ಮುಗಿದು ಹೋಗುವುದಿಲ್ಲ ಅವರ ಜೀವನ ಸಂದೇಶ.ವಾಜಪೇಯಿ ಬದುಕಿದ ರೀತಿಯೇ ಹಾಗಿತ್ತು. ಅವರ ರಾಜಕೀಯ ವಿರೋಧಿಗಳೂ ಅವರನ್ನು ಟೀಕೆ ಮಾಡಲು ಹಿಂದೆಮುಂದೆ ನೋಡುತ್ತಿದ್ದರು. ಅವರು ಹುಟ್ಟಿದ್ದು 1924 ಡಿಸೆಂಬರ್ 25ರಂದು ಒಬ್ಬ

ಭಾರತೀಯ ರಾಜಕಾರಣದ ಅಜಾತಶತ್ರು ವಾಜಪೇಯಿ Read More »

ಜನಮಂಗಲ ಕಾರ್ಯಕ್ರಮದ  ಯೋಜನೆಯಡಿಯಲ್ಲಿ ವ್ಹೀಲ್ ಚೇರ್ ವಿತರಣೆ

ಕೆದಿಲ : ಬಂಟ್ವಾಳ  ತಾಲೂಕು,ಕೆದಿಲ ಗ್ರಾಮದ ಆನಡ್ಕ (ಕರಿಮಜಲು) ಗಂಗಾಧರ ಸಪಲ್ಯರು  ಅಸೌಖ್ಯವಾಗಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ  ಯೋಜನೆಯ ಜನಮಂಗಲ ಕಾರ್ಯಕ್ರಮದ  ಯೋಜನೆಯಡಿಯಲ್ಲಿ  ಡಿ. ರಂದು ಶೌಚಾಲಯಕ್ಕೆ  ಅನುಕೂಲಕ್ಕಾಗಿ  ಕೊಮೋಡೋ  ವೀಲ್ ಚೇರನ್ನು ವಿತರಿಸಲಾಯಿತು. ವಿಟ್ಲ ತಾಲೂಕು ಕೃಷಿ ಅಧಿಕಾರಿಯಾದ ಚಿದಾನಂದ ಮತ್ತು ಪೆರ್ನೆ ವಲಯ  ಮೇಲ್ವಿಚಾರಕಿ ಶಾರದಾ ವ್ಹೀಲ್‍ ಚೇರ್‍ ನ್ನು ವಿತರಿಸಿದ್ದಾರೆ.  ಈ ಸಂದರ್ಭದಲ್ಲಿ  ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ  ಶಾರದ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಜಗದೀಶ ಕೆದಿಲ,

ಜನಮಂಗಲ ಕಾರ್ಯಕ್ರಮದ  ಯೋಜನೆಯಡಿಯಲ್ಲಿ ವ್ಹೀಲ್ ಚೇರ್ ವಿತರಣೆ Read More »

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ

ಮುಲ್ಕಿ:  ಹಳೆಯಂಗಡಿ ರೈಲ್ವೇ ಗೇಟ್ ಬಳಿ ರೈಲು ಬರುವ ಕೆಲವೇ ಹೊತ್ತಲ್ಲಿ ಪಿಕಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ರೈಲ್ವೆ ಗೇಟ್‍ ತುಂಡಾಗಿದ್ದು. ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ರೈಲ್ವೇ ಗೇಟ್ ಸಿಬ್ಬಂದಿ ರೈಲು ಬರುವ ಹೊತ್ತಿನಲ್ಲಿ ಗೇಟ್ ಹಾಕಲು ಮುಂದಾಗುವ ವೇಳೆ ಕಿನ್ನಿಗೋಳಿ ಕಡೆಯಿಂದ ಹಳೆಯಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನ ಇಂದ್ರ ನಗರ ರೈಲ್ವೇ ಗೇಟ್ ತಲುಪುತ್ತಿದ್ದಂತೆ ಪಿಕಪ್ ಚಾಲಕ

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ Read More »

ಡಿ.28-29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಭರದಿಂದ ಸಾಗುತ್ತಿದೆ ಸಕಲ ಸಿದ್ಧತೆಗಳು, ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಹಾಗೂ 29 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಸಮಿತಿ ಸಂಚಾಲಕ ಅರುಣ್ ಕುಮಾರ್‍ ಪುತ್ತಿಲ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀನಿವಾಸ ಕಲ್ಯಾಣೋತ್ಸವ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಈಗಾಗಲೇ 53 ಚದರ ಅಡಿಯ ಪೆಂಡಾಲ್‍ ಹಾಗೂ ಅನ್ನ ಸಂತರ್ಪಣೆಗಾಗಿ 20 ಸಾವಿರ ಚದರ ಅಡಿಯ ಬೃಹತ್

ಡಿ.28-29 : ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ | ಭರದಿಂದ ಸಾಗುತ್ತಿದೆ ಸಕಲ ಸಿದ್ಧತೆಗಳು, ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ Read More »

ಜ.4 : ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

ಪುತ್ತೂರು : ನಗರದ ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನ ವರ್ಷಾವಧಿ ಪೂಜೆ ಹಾಗೂ ಗ್ರಾಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಜ.4 ರಂದು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೈವಸ್ಥಾನ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಎ. ಕಲ್ಲಿಮಾರ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನ ಅಂದಿನ ಕಾಲದಲ್ಲಿ ವಿಜೃಂಭಣೆಯಿಂದ ನೇಮ ನಡಾವಳಿಗಳು ಜರಗುತ್ತಿದ್ದವು. ಅನಂತರ ದಿನಗಳಲ್ಲಿ ಬೇರೆ ಬೇರೆ ಕಾರಣಗಳಿಂದ ನೇಮೋತ್ಸವ

ಜ.4 : ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ Read More »

ಜ.4 : ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ

ಪುತ್ತೂರು : ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ವಾರ್ಷಿಕ ಕಾರ್ಯಕ್ರಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಭಾ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಸಾಧನೆ ಮಾಡಿದ ಹಿರಿಯ, ಯುವ ಮತ್ತು ಮಹಿಳಾ ಹೀಗೆ ಆಯ್ದ ಮೂರು

ಜ.4 : ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ Read More »

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಪ್ರೇರಣಾ ಮತ್ತು ನ್ಯೂಸ್ ಪುತ್ತೂರು ಸಂಸ್ಥೆಗೆ ಭೇಟಿ | ಪ್ರೇರಣಾ ಸಂಸ್ಥೆಯಿಂದ ಸನ್ಮಾನ

ಪುತ್ತೂರು : 2ನೇ ಬಾರಿಗೆ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರಿಗೆ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಮಾತನಾಡಿ, ಮೂರು ವರ್ಷದ ಹಿಂದೆ ಐದು ಮಂದಿ ನಿರ್ದೇಶಕರ ಮೂಲಕ ನನ್ನ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು ಈ ವರೆಗೆ ಬಹಳ  ಉತ್ತಮ ಕಾರ್ಯವನ್ನು ಮಾಡುತ್ತಿದೆ. ಐದು ಮಂದಿ ಪ್ರಾರಂಭಿಸಿದ ಪ್ರೇರಣಾ ಸಂಸ್ಥೆಗೆ ನನ್ನಿಂದಾಗುವ ಹಾಗೂ ರಾಜ್ಯ ಒಕ್ಕಲಿಗ ಸಂಘದಿಂದ ನೀಡುವ ಎಲ್ಲಾ ಸಹಕಾರವನ್ನು ನೀಡುತ್ತೇನೆ. ಪ್ರೇರಣಾ ಸಂಸ್ಥೆ ಅನೇಕ

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್ ಪ್ರೇರಣಾ ಮತ್ತು ನ್ಯೂಸ್ ಪುತ್ತೂರು ಸಂಸ್ಥೆಗೆ ಭೇಟಿ | ಪ್ರೇರಣಾ ಸಂಸ್ಥೆಯಿಂದ ಸನ್ಮಾನ Read More »

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು  ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ,  ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ,  ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »

error: Content is protected !!
Scroll to Top