ಸುದ್ದಿ

ಕಾರು ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌

ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದ ಚಾಲಕ ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಒಂದನೇ ಆರೋಪಿಯಾಗಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಹೆಸರಿಸಲಾಗಿದೆ. ನಾಗೇಶ ಮತ್ತು […]

ಕಾರು ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ Read More »

ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಓರ್ವ ಸೆರೆ

150ಕ್ಕೂ ಮಂದಿಯ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಬುಧವಾರ ಸಂಭವಿಸಿದ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪ್ರತ್ಯೇಕ

ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಓರ್ವ ಸೆರೆ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯನ್ನು ಎಸ್‌ಐಟಿ ವಶದಲ್ಲಿಟ್ಟುಕೊಳ್ಳಲು ಆಗ್ರಹಿಸಿ ಪತ್ರ

ವಕೀಲರು, ಉಜಿರೆಯ ಖಾಸಗಿ ವ್ಯಕ್ತಿಗಳ ಮನೆಯಲ್ಲಿರು ಬಗ್ಗೆ ಉಲ್ಲೇಖ ಮಂಗಳೂರು: ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿರುವ ಮುಸುಕುಧಾರಿ ವ್ಯಕ್ತಿಯನ್ನು ಎಸ್‌ಐಟಿ ತನ್ನ ವಶದಲ್ಲಿಯೇ ಇಟ್ಟುಕೊಂಡು ತನಿಖೆ ಮುಂದುವರಿಸಬೇಕೆಂದು ಆಗ್ರಹಿಸಿ ಬೆಳ್ತಂಗಡಿಯ ನಿವಾಸಿಯೊಬ್ಬರು ಎಸ್‌ಐಟಿಗೆ ಪತ್ರ ಬರೆದಿದ್ದಾರೆ. ಬೆಳ್ತಂಗಡಿ ನಿವಾಸಿ ಶ್ಯಾಮ ಸುಂದರ ಎಂಬವರು ಈ ಪತ್ರ ಬರೆದಿದ್ದು, ಅನಾಮಿಕ ಮುಸುಕುಧಾರಿ ವ್ಯಕ್ತಿ 13 ಸ್ಥಳಗಳನ್ನು ಈಗಾಗಲೇ ತೋರಿಸಿದ್ದಾನೆ. ಆತ ಗುರುತಿಸಿದ 12 ಸ್ಥಳಗಳಲ್ಲಿ ಎಸ್‌ಐಟಿ ತಂಡ ತನಿಖೆ ನಡೆಸಿದೆ. ಆರಂಭದಲ್ಲಿ ಅನಾಮಿಕ ವ್ಯಕ್ತಿ ತನ್ನ ವಕೀಲರ ಜೊತೆ

ಧರ್ಮಸ್ಥಳ ಪ್ರಕರಣ : ಮುಸುಕುಧಾರಿಯನ್ನು ಎಸ್‌ಐಟಿ ವಶದಲ್ಲಿಟ್ಟುಕೊಳ್ಳಲು ಆಗ್ರಹಿಸಿ ಪತ್ರ Read More »

ವೃದ್ಧನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.77 ಕೋ. ರೂ. ವಂಚನೆ

ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಹೆದರಿಸಿದ್ದ ವಂಚಕರು ಬೆಂಗಳೂರು: ಸೈಬರ್‌ ಚೋರರು ವೃದ್ಧರೊಬ್ಬರನ್ನು ಒಂದು ವಾರ ಡಿಜಿಟಲ್‌ ಟರೆಸ್ಟ್‌ ಮಾಡಿ ಬರೋಬ್ಬರಿ 1.77 ಕೋಟಿ ರೂ. ಎಗರಿಸಿದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಪೊಲೀಸರ ಸೋಗಿನಲ್ಲಿ ವೃದ್ಧರನ್ನು ಒಂದು ವಾರ ಡಿಜಿಟಲ್‌ ಬಂಧನದಲ್ಲಿಟ್ಟಿದ್ದರು. ಸೈಬರ್‌ ವಂಚನೆಗೆ ಒಳಗಾದ ಜಿ.ವಸಂತ್‌ಕುಮಾರ್‌ (81) ಎಂಬುವರು ಪೂರ್ವ ವಿಭಾಗದ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದಾನಂದ ನಗರ ಬಳಿಯ ಎನ್‌ಜಿಇಎಫ್‌ ಲೇಔಟ್‌ ನಿವಾಸಿಯಾದ ವಸಂತ್‌ಕುಮಾರ್‌ ಅವರಿಗೆ ಸಂದೀಪ್‌ ಜಾಧವ್‌ ಎಂಬಾತ ಜುಲೈ

ವೃದ್ಧನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.77 ಕೋ. ರೂ. ವಂಚನೆ Read More »

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟ ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ನಡೆದಿದ್ದು, ಪುತ್ತೂರಿನ ನರೇಂದ್ರ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ತರುಣ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳ ತರುಣವರ್ಗದ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿರುತ್ತದೆ, ಬಾಲಕಿಯರ ತಂಡದಲ್ಲಿರುವ ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ಕೃತಿ ಎಚ್., ಸಿಂಚನಾ ಎಸ್. ಎಮ್.,ಶೀಲಾ ಎಸ್. ,ಶಷ್ಟಿಕಾ, ದ್ವಿತೀಯ ವಿಜ್ಞಾನ ವಿಭಾಗದ ಶ್ರಾವ್ಯಶ್ರೀ ಕೆ.,ಪ್ರತೀಕ್ಷಾ,

ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಕಾಡಾನೆ ದಾಳಿಗೆ ವೃದ್ಧ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಬುಧವಾರ ತಡರಾತ್ರಿ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ ವ್ಯಕ್ತಿ. ಶಿವಪ್ಪ ಅವರು ಬುಧವಾರ ರಾತ್ರಿ ಸುಮಾರು 10.30 ರ ಸಮಯ ಮನೆ ಬಳಿಯ ತೋಟದಲ್ಲಿ ನಾಯಿ ಬೊಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭ ಆನೆ ತುಳಿದಿದೆ. ತಕ್ಷಣ ಅವರನ್ನು ಮನೆಯವರು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಡಾನೆ ದಾಳಿಗೆ ವೃದ್ಧ ಬಲಿ Read More »

ಆ.16 : ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ

ಪುತ್ತೂರು: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಆ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 15ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ. ಇದರ ಜೊತೆಗೆ ಆ.9ರಂದು ಮ್ಯಾಟ್ ಅಂಕಣದ ಕಬಡ್ಡಿ ಪಂದ್ಯಾಟ, ಆ.10ಕ್ಕೆ ಕೃಷ್ಣವೇಷ, ಶಂಖನಾದ ಸ್ಪರ್ಧೆ, ಆ.16ಕ್ಕೆ ಬೆಳಗ್ಗಿನಿಂದಲೇ ವಿವಿಧ ಸ್ಪರ್ಧೆಗಳು ಜರುಗಲಿದೆ ಎಂದು ವಿಶ್ವಹಿಂದು

ಆ.16 : ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ | 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ Read More »

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌

ಖಾಸಗಿ ವಾಹಿನಿ ವರದಿಗಾರರ ಮೇಲೆ ಹಲ್ಲೆ ಮಾಡಿದ ಕೇಸ್‌ ದಾಖಲು ಮಂಗಳೂರು: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣನವರ್‌ , ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್‌ (ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್‌ ಸಮೀರ್‌(ಎ3),

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ

ಮೂರು ವರ್ಷದ ಹಿಂದೆ ಆಟೋರಿಕ್ಷಾದಲ್ಲಿ ಬಾಂಬ್‌ ಸ್ಫೋಟಗೊಂಡ ಪ್ರಕರಣ ಮಂಗಳೂರು : ಮಂಗಳೂರಿನ ಕಂಕನವಾಡಿ ಬಳಿ 2022ರಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಗೆ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ. ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಸೈಯದ್ ಯಾಸೀನ್​ನ ಬ್ಯಾಂಕ್​ ಖಾತೆಯನ್ನು ಜಪ್ತಿ ಮಾಡಲಾಗಿದೆ. ಉಗ್ರ ಸಂಘಟನೆಯನ್ನು ಭಾರತದಾದ್ಯಂತ ವಿಸ್ತರಿಸುವುದು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ Read More »

ಗಂಧದ ಮರ ಕಳ್ಳತನ : ಮೂವರು ಬಂಧನ

ರಾತ್ರಿ ಹೊತ್ತು ತೋಟದಲ್ಲಿದ್ದ 9 ಗಂಧದ ಮರ ಕಡಿದು ಸಾಗಿಸಿದ್ದ ಆರೋಪಿಗಳು ಕಾರ್ಕಳ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಜೂನ್ 16ರಂದು ರಾತ್ರಿ ಕಳ್ಳತನ ಮಾಡಿಕೊಂಡು ಹೋಗಿದ್ದ ಬಂಟ್ವಾಳದ ಓರ್ವನ ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕಳವು ಮಾಡಲಾದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ 2023 ಕಲಂ 86,87 ಕರ್ನಾಟಕ ಅರಣ್ಯ ಕಾಯ್ದೆ1963ರಂತೆ

ಗಂಧದ ಮರ ಕಳ್ಳತನ : ಮೂವರು ಬಂಧನ Read More »

error: Content is protected !!
Scroll to Top