ಸುದ್ದಿ

ಮಂಗಳೂರು : ಕಾರಿನಲ್ಲಿ ಸಾಗಿಸುತ್ತಿದ್ದ 123 ಕೆಜಿ ಗಾಂಜಾ ವಶ, ಮೂವರ ಸೆರೆ

5 ಮೊಬೈಲ್‌, ಕಾರು ಸಹಿತ 46.20 ಲ.ರೂ. ಸೊತ್ತು ವಶಪಡಿಸಿಕೊಂಡ ಪೊಲೀಸರು ಮಂಗಳೂರು : ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್‌ನ ಮಠದಕೆರೆ ಎಂಬಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು […]

ಮಂಗಳೂರು : ಕಾರಿನಲ್ಲಿ ಸಾಗಿಸುತ್ತಿದ್ದ 123 ಕೆಜಿ ಗಾಂಜಾ ವಶ, ಮೂವರ ಸೆರೆ Read More »

ಉಪ್ಪಿನಂಗಡಿ : ವಿವಾಹಿತ ಮಹಿಳೆ ನಾಪತ್ತೆ

ಉಪ್ಪಿನಂಗಡಿ : ಇಲ್ಲಿನ 34ನೇ ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ನಾಪತ್ತೆಯಾದ ಮಹಿಳೆಯಾಗಿದ್ದು, ಆಕೆ ಪತಿಯೊಂದಿಗೆ 34ನೇ ನೆಕ್ಕಿಲಾಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಭೀಮಪ್ಪ ನಾಗರ ಪಂಚಮಿಯ ಹಬ್ಬಕ್ಕಾಗಿ ಜು.26ರಂದು ಹಾವೇರಿಗೆ ಹೋಗಿ ಜು.30ರಂದು ಹಿಂತಿರುಗಿ ಬರುವಾಗ ಮನೆಯಲ್ಲಿದ್ದ ಪತ್ನಿ ನಾಪತ್ತೆಯಾಗಿದ್ದರು.

ಉಪ್ಪಿನಂಗಡಿ : ವಿವಾಹಿತ ಮಹಿಳೆ ನಾಪತ್ತೆ Read More »

ಪುತ್ತೂರು : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು: ಕೌಡಿಚಾರ್ – ರೆಂಜ ರಸ್ತೆಯ ಪಾಪೆಮಜಲು ಎಂಬಲ್ಲಿ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಪಾಪೆಮಜಲು ನಿವಾಸಿ ಸುಭಾಷ್ (50) ಮೃತಪಟ್ಟವರು. ಅವರು ಶುಕ್ರವಾರ ರಾತ್ರಿ ವೇಳೆ ರಸ್ತೆ ದಾಟುತ್ತಿದ್ದಾಗ ಅವರಿಗೆ ರಿಕ್ಷಾ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪುತ್ತೂರು : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಪುತ್ತೂರು : ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪುತ್ತೂರು : ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿರುವ ಪುತ್ತೂರು ಪೊಲೀಸರು ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಮಹಮ್ಮದ್ ಹನೀಫ್ (55) ಎಂದು ಗುರುತಿಸಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 35/2001 ಕಲಂ: 379 ಜೊತೆಗೆ 34 ಭಾ.ದಂ.ಸಂ ನೇ ಪ್ರಕರಣದಲ್ಲಿ ಆರೋಪಿ 2018 ರಲ್ಲಿ ಜಾಮೀನು ಪಡೆದ ನಂತರ, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ

ಪುತ್ತೂರು : ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಧರ್ಮಸ್ಥಳ ಪ್ರಕರಣ : ಮೂಳೆಗಳು ಎಫ್‌ಎಸ್‌ಎಲ್‌ಗೆ ರವಾನೆ

ಇನ್ನು ಗುರುತು ಮಾಡಿದ ಐದು ಸ್ಥಳಗಳ ಅಗೆತ ಮಾತ್ರ ಬಾಕಿ ಬೆಂಗಳೂರು: ಧರ್ಮಸ್ಥಳದ ನೇತ್ರಾವತಿ ದಂಡೆಯ ಪಾಯಿಂಟ್‌ 6ರಲ್ಲಿ ಸಿಕ್ಕಿದ ಅಸ್ಥಿಪಂಜರದ ಮೂಳೆಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌ಗೆ) ಕಳುಹಿಸಲಾಗಿದೆ. ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣವನ್ನು ಬೆನ್ನತ್ತಿದ ವಿಶೇಷ ತನಿಖಾ ತಂಡಕ್ಕೆ ನೇತ್ರಾವತಿ ತಟದ ಪಾಯಿಂಟ್ 6ರಲ್ಲಿ ಅಸ್ಥಿಪಂಜರದ ಮೂಳೆಗಳು, ತಲೆಬುರುಡೆ ಸಿಕ್ಕಿದೆ. ಸುಮಾರು 25 ಮೂಳೆಗಳನ್ನು ಎಸ್‌ಐಟಿ ತಂಡ ಬೆಂಗಳೂರಿನ ಎಫ್‌ಎಸ್‌ಎಲ್‌ಗೆ ರವಾನಿಸಿದೆ. ಬೆಂಗಳೂರಿನ ಪ್ರಯೋಗಾಲಯದಲ್ಲಿ ಮೂಳೆಗಳ ಲಿಂಗ, ವಯಸ್ಸು, ಎತ್ತರ, ಗಾತ್ರ ಪತ್ತೆ ಪರೀಕ್ಷೆ

ಧರ್ಮಸ್ಥಳ ಪ್ರಕರಣ : ಮೂಳೆಗಳು ಎಫ್‌ಎಸ್‌ಎಲ್‌ಗೆ ರವಾನೆ Read More »

ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಪರಮೇಶ್ವರ ಎಚ್ಚರಿಕೆ

ತನಿಖಾ ತಂಡ ವರದಿ ನೀಡುವವರೆಗೆ ಹೇಳಿಕೆ ಕೊಡುವುದಿಲ್ಲ ಎಂದ ಗೃಹ ಸಚಿವ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್‌ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದಿರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ದ್ವೇಷ

ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಪರಮೇಶ್ವರ ಎಚ್ಚರಿಕೆ Read More »

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು

ತನಿಖೆ ನಡೆಸಿದ ಎಟಿಎಸ್‌ ಅಧಿಕಾರಿ ಬಹಿರಂಗಪಡಿಸಿದ ಸ್ಫೋಟಕ ಮಾಹಿತಿ ಮುಂಬೈ : ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರ್​​ಎಸ್​ಎಸ್​ ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಸಿಲುಕಿಸುವ ಪಿತೂರಿ ನಡೆದಿತ್ತು ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ಪಡೆಯ (ಎಟಿಎಸ್‌) ಮಾಜಿ ಅಧಿಕಾರಿ ಮೆಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ. 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ತನಿಖೆ ನಡೆಸಿದ್ದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿಯೊಬ್ಬರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ಒತ್ತಡವಿತ್ತು ಮತ್ತು

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು Read More »

ಧರ್ಮಸ್ಥಳ ಪ್ರಕರಣ : ಡೆಬಿಟ್‌, ಪ್ಯಾನ್‌ ಕಾರ್ಡ್‌ ವಾರಸುದಾರರು ಪತ್ತೆ

ಅಗೆದ ಮೊದಲ ಗುಂಡಿಯಲ್ಲಿ ಸಿಕ್ಕಿದ ಕಾರ್ಡ್‌ಗಳು ಧರ್ಮಸ್ಥಳ: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ವೇಳೆ ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪ್ಯಾನ್‌ ಕಾ‌ರ್ಡ್‌ನ ವಾರಸುದಾರ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ನಿವಾಸಿಯಾಗಿದ್ದ ಸುರೇಶ್ ಎಂಬವರದ್ದು ಪತ್ತೆಯಾಗಿದೆ. ಗಂಗಮರಿಯಪ್ಪ ಹಾಗೂ ಸಿದ್ದಲಕ್ಷ್ಮಮ್ಮ ಎಂಬವರ ಪುತ್ರ ಸುರೇಶ್ ಪರ್ಸ್‌ನಲ್ಲಿ ಎರಡು ಪ್ಯಾನ್‌ ಕಾರ್ಡ್‌ ಪತ್ತೆಯಾಗಿತ್ತು. ಒಂದು ಸುರೇಶ್‌ ಎಂಬಾತನ ಪ್ಯಾನ್‌ ಕಾರ್ಡ್, ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಬಹಿರಂಗವಾಗಿತ್ತು. 2‌ ವರ್ಷಗಳ ಹಿಂದೆ ಮನೆ

ಧರ್ಮಸ್ಥಳ ಪ್ರಕರಣ : ಡೆಬಿಟ್‌, ಪ್ಯಾನ್‌ ಕಾರ್ಡ್‌ ವಾರಸುದಾರರು ಪತ್ತೆ Read More »

ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಡ್ರೋನ್‌ ಸಹಾಯದಿಂದ ತುಂಬೆ ಡ್ಯಾಂ ಕೆಳಗೆ ಶವ ಪತ್ತೆ ಹಚ್ಚಿದ ಮುಳುಗು ಪರಿಣತರು ಬಂಟ್ವಾಳ : ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21) ಎಂಬವರ ಮೃತದೇಹ ನೇತ್ರಾವತಿ ನದಿಯಲ್ಲಿ ಗುರುವಾರ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು.27ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29ರಂದು ಹೇಮಂತ್‌ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ

ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆ

ಓಲಾ, ಊಬರ್‌ ಮಾದರಿ ಆ್ಯಪ್‌ ಬಳಸಿ ಆಂಬ್ಯುಲೆನ್ಸ್ ಬುಕ್‌ ಮಾಡಲು ಅವಕಾಶ ಬೆಂಗಳೂರು: ಗೋರಗುಂಟೆಪಾಳ್ಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅಲ್ಪ ದೂರದ ಆಂಬ್ಯುಲೆನ್ಸ್ ಪ್ರಯಾಣಕ್ಕೆ ರೋಗಿಯೊಬ್ಬರಿಗೆ 8,500 ರೂ. ಶುಲ್ಕ ವಿಧಿಸಲಾಗಿದೆ ಎಂಬ ವರದಿಗಳು ಬೆಳಕಿಗೆ ಬಂದ ನಂತರ, ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರಿಗೆ ಕಡಿವಾಣ ಹಾಕುವ ಸಲುವಾಗಿ ನಿಯಮಗಳನ್ನು ಬಿಗಿಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಓಲಾ, ಊಬರ್‌ ಆ್ಯಪ್‌ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್‌ ಮಾಡುವಂತೆ ಆ್ಯಂಬುಲೆನ್ಸ್‌ಗಳನ್ನು ಬುಕ್ ಮಾಡುವ ಅವಕಾಶವನ್ನು ರಾಜ್ಯ ಸರ್ಕಾರ ನೀಡಲು

ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆ Read More »

error: Content is protected !!
Scroll to Top