ಸುದ್ದಿ

ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಸಂಪರ್ಕ ಕಡಿತ

ಶೃಂಗೇರಿ ದೇವಸ್ಥಾನಕ್ಕೆ ನೆರೆ ಭೀತಿ ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ತುಂಗಾ, ಭದ್ರಾ ನದಿಗಳು ಭೋರ್ಗರೆಯುತ್ತಿದ್ದು ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದೆ. ಕೆರೆಕಟ್ಟೆ ಸಮೀಪದ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಮಣ್ಣು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. […]

ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಸಂಪರ್ಕ ಕಡಿತ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿದ ಕೂಟ

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದ ಪುತ್ತೂರು ಶಾಖೆಯಲ್ಲಿ ಇಂದು ವಿಶೇಷ ಕಾರ್ಯಕ್ರಮ ‘ಆಟಿದ ಕೂಟ’ ನಡೆಯಿತು. ಆಟಿ ತಿಂಗಳು ಮತ್ತು ನಾಗರ ಪಂಚಮಿ ಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿ.ಎಲ್. ಆಚಾರ್ಯ ಚಿನ್ನಾಭರಣ ಮಳಿಗೆಯ ಸಿಬ್ಬಂದಿ ಮತ್ತು ಗ್ರಾಹಕರಿಗೆ ಆಟಿ ತಿಂಗಳ ವಿಶೇಷ ತಿನಿಸುಗಳಾದ ಪತ್ರೊಡೆ, ಗೆಣಸೆಲೆ, ಕಷಾಯಗಳನ್ನೊಳಗೊಂಡ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿದ ಕೂಟ Read More »

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ

ನವದೆಹಲಿ: ಕೊರೋನಾ ಅವಧಿಯಲ್ಲಿ ಪ್ರಪಂಚದ 25 ಲಕ್ಷಕ್ಕೂ ಅಧಿಕ ಜನರ ಜೀವವನ್ನು ಕೊರೋನಾ ‌ಲಸಿಕೆ ಕಾಪಾಡಿದೆ ಎಂದು ವರದಿಯೊಂದು ತಿಳಿಸಿದೆ. ಇಟಲಿ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳು ಜಂಟಿಯಾಗಿ ನಡೆಸಿದ ಈ ಅಧ್ಯಯನದಲ್ಲಿ ಪ್ರತಿ 5,400 ಡೋಸ್‌ಗಳಿಗೆ ಒಂದು ಸಾವನ್ನು ತಪ್ಪಿಸಲಾಗಿದೆ. ಕೊರೋನಾ ಲಸಿಕೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಹಿರಿಯರ ಸಾವಿನ ಪ್ರಮಾಣವನ್ನು ತಪ್ಪಿಸಲಾಗಿದೆ ಎಂದು ಈ ವರದಿ ಹೇಳಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್ ಒಂದರಲ್ಲಿ ಈ ವರದಿ ಪ್ರಕಟವಾಗಿದೆ. ಇನ್ನು ಕೊರೋನಾ ಲಸಿಕೆಯ ಕಾರಣಕ್ಕೆ ಹೃದಯಾಘಾತವಾಗುತ್ತಿಲ್ಲ

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ Read More »

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಡಿದ್ದ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಚುನಾವಣಾ ಆಯೋಗದ ಫ್ಯಾಕ್ಟ್ ಚೆಕ್ಕಿಂಗ್ ವಿಭಾಗ, ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಚು. ಆಯೋಗ, ಅವರ ಹೇಳಿಕೆಗಳು ನಿರ್ಧಾರ ಮತ್ತು ಜನರನ್ನು ದಾರಿ ತಪ್ಪಿಸುವಂತಹವು ಎಂದು ಹೇಳಿದೆ. ಜನ ಪ್ರತಿನಿಧಿಗಳ ಕಾಯ್ದೆಯಡಿ ಈ ಬಗ್ಗೆ ದೂರು ನೀಡದ ರಾಹುಲ್ ಗಾಂಧಿ ಆಧಾರವಿಲ್ಲದೆ ಈ ರೀತಿ ಆರೋಪಗಳನ್ನು ಮಾಡುತ್ತಿರುವುದು

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ Read More »

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ

ಶಾಲೆ, ಕಾಲೇಜು, ವಿವಿ, ಖಾಸಗಿ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲ ಸಂಸ್ಥೆಗಳಿಗೆ ಅನ್ವಯ ನವದೆಹಲಿ: ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡದ ಕಾರಣಕ್ಕೆ ಸಾವಿಗಿ ಶರಣಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಇದನ್ನು ತಡೆಯುವ ನಿಟ್ಟಿನಲ್ಲಿ ಕಾಲೇಜುಗಳಿಗೆ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿದೆ. ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ Read More »

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು

ಉಡುಪಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಉಡುಪಿ: ಇಲ್ಲಿನ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಬಂದ ಇಬ್ಬರು ಮೂರ್ಚೆತಪ್ಪಿ ಜನರ ಕೈಗೆ ಸಿಕ್ಕಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಕಳ್ಳರು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ದೇವಸ್ಥಾನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯ್ಯಲು ಯತ್ನಿಸಿದ್ದಾರೆ. ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಜಮಾಯಿದ್ದಾರೆ. ಬಳಿಕ ಸಿಸಿಟಿವಿ

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು Read More »

ಧರ್ಮಸ್ಥಳ ಪ್ರಕರಣ : ದೂರು ನೀಡಿದ ವ್ಯಕ್ತಿ ಎಸ್‌ಐಟಿ ಎದುರು ಹಾಜರು?

ಮಂಗಳೂರಿನಲ್ಲಿ ಪೊಲೀಸ್‌ ವಿಚಾರಣೆಗೆ ಹಾಜರಾದ ಶವ ಹೂತಿಟ್ಟಿದ್ದೇನೆ ಎಂದ ವ್ಯಕ್ತಿ ಮಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಿದ್ದ ವ್ಯಕ್ತಿ ಇಂದು ಮಂಗಳೂರಿನಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಎದುರು ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಶವ ಹೂತಿಟ್ಟ ಆರೋಪದ ಬಗ್ಗೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಶುಕ್ರವಾರದಿಂದ ತನಿಖೆ ಪ್ರಾರಂಭಿಸಿದೆ. ನಿನ್ನೆ ದೂರಿನ ಕಡತಗಳ ಪರಿಶೀಲನೆ ನಡೆದಿದ್ದು, ಇಂದು ದೂರುದಾರನ ವಿಚಾರಣೆ ನಡೆಯುತ್ತಿದೆ ಎಂದು

ಧರ್ಮಸ್ಥಳ ಪ್ರಕರಣ : ದೂರು ನೀಡಿದ ವ್ಯಕ್ತಿ ಎಸ್‌ಐಟಿ ಎದುರು ಹಾಜರು? Read More »

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಬಂಟ್ವಾಳ : ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಹಿಂದೂ ಮಠದಲ್ಲಿ ಮುಸ್ಲಿಂ ಮಹಿಳೆಯ ಧ್ಯಾನ

ಮಾನಸಿಕ ನೆಮ್ಮದಿಗಾಗಿ 11 ದಿನಗಳ ಧ್ಯಾನ ವ್ರತ ಬೆಂಗಳೂರು: ಕೊಪ್ಪಳದ ಪ್ರಸಿದ್ಧ ಗವಿಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನಕ್ಕೆ ಮಾಡುತ್ತಿವುದು ಈ ಭಾಗದಲ್ಲಿ ಅಚ್ಚರಿಗೆ ಕಾರಣವಾಗಿದೆ. ಎಂಟು ದಿಗಳಿಂದ ನಿತ್ಯ ಮಠಕ್ಕೆ ಬರುತ್ತಿರುವ ಮಹಿಳೆ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿ ಎಂಬಲ್ಲಿನ ನಿವಾಸಿ ಹಸೀನಾ ಬೇಗಂ ಎಂಬ ಮಹಿಳೆ ಗವಿ ಮಠದಲ್ಲಿ ನಿತ್ಯ ಒಂದು ಗಂಟೆಗಳ ಕಾಲ ಧ್ಯಾನ ಮಾಡುತ್ತಿದ್ದಾರೆ. ಮಠಕ್ಕೆ ಬರುವವರಲ್ಲಿ ಮುಸ್ಲಿಂ ಭಕ್ತರೂ ಇದ್ದಾರೆ.

ಹಿಂದೂ ಮಠದಲ್ಲಿ ಮುಸ್ಲಿಂ ಮಹಿಳೆಯ ಧ್ಯಾನ Read More »

ಇಂದು ಕಾರ್ಗಿಲ್‌ ವಿಜಯ ದಿವಸ : ಭಾರತದ ಸೈನಿಕರ ಪರಾಕ್ರಮಕ್ಕೆ ಗೌರವ ಸಲ್ಲಿಸುವ ದಿನ

ಜಗತ್ತಿನ ಅತ್ಯಂತ ದುರ್ಗಮ ಪ್ರದೇಶದಲ್ಲಿ ನಡೆದ ಯುದ್ಧವನ್ನು ಗೆದ್ದು ಬೀಗಿದ ನಮ್ಮ ಸೈನಿಕರು ಪುತ್ತೂರು : ಕುತಂತ್ರದಿಂದ ಭಾರತದ ಭೂಭಾಗವನ್ನು ಕಬಳಿಸಲು ಹೊಂಚು ಹಾಕಿದ್ದ ಪಾಕಿಸ್ತಾನವನ್ನು ನಮ್ಮ ಧೀರ ಸೈನಿಕರು ಜಗತ್ತಿನ ಅತ್ಯಂತ ದುರ್ಗಮ ಪ್ರದೇಶದ ಯುದ್ಧದಲ್ಲಿ ಸೋಲಿಸಿ ಹೆಡೆಮುರಿ ಕಟ್ಟಿ ಅದ್ಭುತ ಪರಾಕ್ರಮ ಮೆರೆದ ಕಾರ್ಗಿಲ್‌ ವಿಜಯ ದಿವಸ ಇಂದು. 1999ರ ಜುಲೈ 26ರಂದು ಕೊನೆಗೊಂದ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಮೇಲೆ ಭಾರತದ ಸೇನೆ ಸಾಧಿಸಿದ ಗೆಲುವನ್ನು ಸ್ಮರಿಸಲು ಪ್ರತಿವರ್ಷ ಆಪರೇಷನ್ ಕಾರ್ಗಿಲ್‌ ವಿಜಯೋತ್ಸವ ಆಚರಿಸಲಾಗುತ್ತದೆ.

ಇಂದು ಕಾರ್ಗಿಲ್‌ ವಿಜಯ ದಿವಸ : ಭಾರತದ ಸೈನಿಕರ ಪರಾಕ್ರಮಕ್ಕೆ ಗೌರವ ಸಲ್ಲಿಸುವ ದಿನ Read More »

error: Content is protected !!
Scroll to Top