ಸುದ್ದಿ

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್‌ ತೀಕ್ಷ್ಣ ವಾಗ್ದಾಳಿ ನವದೆಹಲಿ: ಪಾಕಿಸ್ತಾನದ ವಿರುದ್ಧ ಕಳೆದ ಮೇ 7ರಂದು ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ ಕೆಲವು ಯುದ್ಧ ವಿಮಾನಗಳು ನಾಶವಾಗಿವೆ ಎಂಬುದಾಗಿ ನೌಕಾಪಡೆಯ ಅಧಿಕಾರಿಯೊಬ್ಬರು ಇಂಡೋನೇಷ್ಯಾದಲ್ಲಿ ಹೇಳಿಕೊಂಡಿದ್ದು, ಈ ಹೇಳಿಕೆ ಭಾರಿ ಕೋಲಾಹಲ ಎಬ್ಬಿಸಿದೆ. ಮೇ 7ರ ಆಪರೇಷನ್ ಸಿಂದೂರ ಕಾರ್ಯಾಚರಣೆ ವೇಳೆ ಭಾರತೀಯ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ನೌಕಾಸೇನೆ ಅಧಿಕಾರಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ […]

ಆಪರೇಷನ್‌ ಸಿಂದೂರದಲ್ಲಿ ಭಾರತದ 5 ಯುದ್ಧ ವಿಮಾನ ನಾಶ : ಕೋಲಾಹಲ ಸೃಷ್ಟಿಸಿದ ನೌಕಾಪಡೆ ಕ್ಯಾಪ್ಟನ್‌ ಹೇಳಿಕೆ Read More »

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಕಾರಿಗೆ ಕ್ಯಾಂಟರ್‌ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ದುರಂತ ಬೆಂಗಳೂರು: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ​ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಬೇಗೌಡ (48), ಶೋಭಾ (42), ದುಂಬಿಶ್ರೀ (16) ಮತ್ತು ಭಾನು ಕಿರಣ್ ಗೌಡ (14) ಮೃತ ದುರ್ದೈವಿಗಳು. ಇವರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್​​ನವರು

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು

ಬಲವಾದ ಪುರಾವೆ ಆಗಲಿರುವ ಡಿಎನ್‌ಎ ಟೆಸ್ಟ್‌ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಪ್ರಕರಣದಲ್ಲಿ ಮಗುವಿನ ಡಿಎನ್‌ಎ ಪರೀಕ್ಷೆ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಪೊಲೀಸರು ಮುಂದಾಗಿದ್ದಾರೆ. ಪುತ್ತೂರು ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ಜೆ. ರಾವ್‌ ಎಂಬಾತ ತನ್ನ ಶಾಲಾ ದಿನಗಳ ಸಹಪಾಠಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ದೈಹಿಕ ಸಂಬಂಧ ಬೆಳೆಸಿದ್ದು, ಇದರ ಪರಿಣಾಮವಾಗಿ ಯುವತಿ ಗರ್ಭಿಣಿಯಾಗಿ ಕೆಲದಿನಗಳ ಹಿಂದೆ ಪುತ್ತೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ

ಪ್ರೀತಿಸಿ ಕೈಕೊಟ್ಟ ಪ್ರಕರಣ : ಮಗುವಿನ ಡಿಎನ್‌ಎ ಪರೀಕ್ಷೆಗೆ ಮುಂದಾದ ಪೊಲೀಸರು Read More »

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮೂರು ಅಡಿ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಮಂಗಳೂರು : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂನ್ 28ರಂದು ಕೆಲಸಗಾರ ಕಟ್ಟಡದ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದಾಗ ಶವ ನೋಡಿದ್ದಾರೆ. ನೆಲಮಾಳಿಗೆ ಭಾಗಶಃ ನೀರಿನಿಂದ ತುಂಬಿತ್ತು. ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆತ ಸ್ಥಿತಿಯಲ್ಲಿತ್ತು. ಉರ್ವ ಪೊಲೀಸ್

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ವಸತಿ ಶಾಲೆ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಮಗಳೂರು: ವಸತಿ ಶಾಲೆಯ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.ಶಮಿತಾ (15) ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಬೆಳಗ್ಗಿನ ಜಾವ ಮಕ್ಕಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಸತಿ ಶಾಲೆ ಹಾಸ್ಟೆಲ್‌ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ

ಸಾಕುನಾಯಿಯನ್ನು ಕೊಂದು ಮಾಟಮಂತ್ರ ಮಾಡಿದ ಗುಮಾನಿ ಬೆಂಗಳೂರು: ನಗರದ ಮಹದೇವಪುರದ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯ ಕೊಳೆತು ನಾರುತ್ತಿದ್ದ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. 38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಸಂಖ್ಯೆ ಜೆ-404 ರಲ್ಲಿ ವಾಸವಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘ ಆಕೆಯ ಫ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಬಿಬಿಎಂಪಿಗೆ ದೂರು ನೀಡಿತ್ತು. ದೂರು ಹಿನ್ನೆಲೆಯಲ್ಲಿ ಪಶುಸಂಗೋಪನಾ ತಂಡ ಫ್ಲಾಟ್‌ಗೆ ಭೇಟಿ ನೀಡಿದ್ದು, ಈ

ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸಿಸುತ್ತಿದ್ದ ಮಹಿಳೆ Read More »

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು

ದರ್ಶನಕ್ಕಾಗಿ ಭಕ್ತರು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ನವದೆಹಲಿ: ಒಡಿಶಾದ ಪುರಿಯಲ್ಲಿ ಜಗತ್ಪ್ರಸಿದ್ಧ ಜಗನ್ನಾಥನ ರಥಯಾತ್ರೆಯ ಸಮಯದಲ್ಲಿ ಇಂದು ಮುಂಜಾನೆ ಕಾಲ್ತುಳಿತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 10 ಜನರು ಗಾಯಗೊಂಡಿದ್ದು, ಈ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಿದೆ ಎನ್ನಲಾಗಿದೆ.ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಜಗನ್ನಾಥ ದೇವಾಲಯದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಾಲಯದ ಬಳಿ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ : ಮೂವರು ಸಾವು Read More »

ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ

ಇನ್‌ಸ್ಟಾಗ್ರಾಂ ಗೆಳತಿಯನ್ನು ಕರೆದುಕೊಂಡು ಬಂದು ಕಾರಿನಲ್ಲಿ ದೌರ್ಜನ್ಯ ಮಂಗಳೂರು : ಉಳ್ಳಾಲ ಸಮೀಪ ಸೋಮೇಶ್ವರ ಬೀಚ್‌ನಲ್ಲಿ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹದಿಹರೆಯದ ಬಾಲಕಿಯನ್ನು ಸೋಮೇಶ್ವರ ಬೀಚ್ ಬಳಿ ಕರೆದುಕೊಂಡು ಬಂದ ಯುವಕ ಕಾರಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಬಂಧಿತ

ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ Read More »

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ

ಮಂಗಳೂರು ನಗರವೊಂದರಲ್ಲೇ ಹಲವು ಲಕ್ಷ ರೂಪಾಯಿ ಪಂಗನಾಮ ಮಂಗಳೂರು : ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರಚೋದಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ಮತ್ತೊಮ್ಮೆ ಕಳವಳಕಾರಿಯಾಗಿ ಹೆಚ್ಚುತ್ತಿವೆ. ಕಳೆದೊಂದು ವಾರದಲ್ಲೆ ಮಂಗಳೂರು ಸೈಬರ್‌ ಠಾಣೆಯಲ್ಲೇ ಇಂಥ ಹಲವು ಪ್ರಕರಣಗಳು ದಾಖಲಾಗಿದ್ದು, ಒಂದು ಕೋಟಿಗಟ್ಟಲೆ ಮೊತ್ತ ವಂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದು, ಜನರು ಇಂಥ ತ್ವರಿತ ಲಾಭದ ಹೂಡಿಕೆಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಎಚ್ಚರಿಸಿದ್ದಾರೆ. ವಂಚಕರು ನಕಲಿ ಹೂಡಿಕೆ ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ Read More »

ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಪ್ರೀತಿಸುವ ನಾಟಕವಾಡಿ ವಂಚಿಸಿದ್ದಾರೆ ಎಂದು ಆರೋಪಿಸಿದ ಯುವತಿ ಲಖನೌ: ಐಪಿಎಲ್​ನಲ್ಲಿ ಆರ್‌ಸಿಬಿ ಪರ ಆಡುತ್ತಿರುವ ಭಾರತದ ಯುವ ಕ್ರಿಕೆಟಿಗ ಯಶ್ ದಯಾಳ್ ವಿರುದ್ಧ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನ್ಯಾಯಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸರಿಗೆ ಮನವಿ ಕೂಡ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸಿಎಂ ಹೆಲ್ಪ್‌ಲೈನ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದು,

ಆರ್‌ಸಿಬಿ ಆಟಗಾರ ಯಶ್‌ ದಯಾಳ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ Read More »

error: Content is protected !!
Scroll to Top