ಸುದ್ದಿ

ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ

ಕಡಬ: ಅತ್ಯುತ್ತಮ ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನರಾದರು. ಇತ್ತೀಚೆಗೆ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು ಧಾನಿಗಳು ಆರ್ಥಿಕ ಸಹಾಯವನ್ನು ನೀಡಿದ್ದರು. ಕೋಕಿಲಾನಂದ ಅವರು ಕಡಬ ನಿವಾಸಿಯಾಗಿದ್ದು, ಕೇವಲ ಕಬಡ್ಡಿ ಆಟ ಮಾತ್ರವಲ್ಲದೆ ಊರಿನ ಕೆಲವೊಂದು ಸಮಸ್ಯೆಗೆ ಹೋರಾಟ ಕೂಡಾ ನಡೆಸಿದ್ದರು. ಕಡಬದಲ್ಲಿ ಆನೆ ದಾಳಿಯ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳ […]

ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ Read More »

ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ

ಕುಕ್ಕೆ  ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ  ಪೂರ್ವ ವಿದ್ಯಾರ್ಥಿ  ಸಂಘ ಬೆಂಗಳೂರು ಚಾಪ್ಟರ್ ವತಿಯಿಂದ ದತ್ತಿನಿಧಿ ಸ್ಥಾಪನೆ ಕಾರ್ಯಕ್ರಮವನ್ನು ಏ.21ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ .ಟಿ ವಹಿಸಿದರು. ಕಾರ್ಯಕ್ರಮದಲ್ಲಿ, ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಘಟಕವನ್ನು ಹುಟ್ಟು ಹಾಕಿದ ಕೆ ಎಸ್ ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ ಕೆ ರಂಗಯ್ಯ ಶೆಟ್ಟಿಗಾರ್ ಅವರು ಈ ಘಟಕವು ಸಂಸ್ಥೆಯ ಹಲವಾರು ವಿದ್ಯಾರ್ಥಿಗಳಿಗೆ  ಉದ್ಯೋಗವನ್ನು,

ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ Read More »

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌

ಕೊಣಾಜೆಯ ವ್ಯಕ್ತಿಗಾಗಿ ಪೊಲೀಸರ ಶೋಧ ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌ Read More »

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಏ. 25 ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ.  ಇದನ್ನು ಮಂಗಳೂರು ಆಕಾಶವಾಣಿಯ  100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ Read More »

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮನೆಯಲ್ಲಿ ಇ.ಡಿ.ಶೋಧ

ಚಿನ್ನ ವಂಚನೆ ಪ್ರಕರಣದಲ್ಲಿ ಶಾಮೀಲಾಗಿರುವ ಅನುಮಾನ ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾತ್ರಿಯಿಡೀ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ತನಿಖೆ ವೇಳೆ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಮನೆಯಲ್ಲಿ ಇ.ಡಿ.ಶೋಧ Read More »

ಸೆರೆ ಹಿಡಿದ ಬಿಎಸ್‌ಎಫ್‌ ಯೋಧನನ್ನು ಬಿಡುಗಡೆಗೊಳಿಸದೆ ಪಾಕ್‌ ಮೊಂಡಾಟ

ನಿನ್ನೆಯಿಂದೀಚೆಗೆ ಪಾಕ್‌ ಸೈನಿಕರ ಕಸ್ಟಡಿಯಲ್ಲಿರುವ ಭಾರತೀಯ ಯೋಧ ಶ್ರೀನಗರ: ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಬಂಧನಕ್ಕೆ ಒಳಗಾಗಿರುವ ಗಡಿ ಭದ್ರತಾ ಪಡೆ ಯೋಧನನ್ನು ಹಸ್ತಾಂತರ ಮಾಡಲು ಪಾಕಿಸ್ತಾನ ಮೊಂಡಾಟ ಮಾಡುತ್ತಿದೆ. ಗುರುವಾರ ಸಂಜೆ ಧ್ವಜ ಸಭೆಗೆ ರೇಂಜರ್‌ಗಳು ಬರಲಿಲ್ಲ. ಮಾಧ್ಯಮಗಳಲ್ಲಿ ತಾನು ಒಳ್ಳೆಯವನು ಎಂದು ಪ್ರಚಾರ ಮಾಡುವ ಸಲುವಾಗಿ ಪಾಕಿಸ್ತಾನ ಭಾರತೀಯ ಯೋಧನನ್ನು ಬಳಸಲು ಮುಂದಾಗಿದೆ ಎನ್ನಲಾಗಿದೆ. ಪಂಜಾಬ್‌ನ ಫಿರೋಜ್‌ಪುರ ಬಳಿ ಗುರುವಾರ ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ 182ನೇ ಬೆಟಾಲಿಯನ್‌ ಕಾನ್‌ಸ್ಟೆಬಲ್‌ ಪಿ.ಕೆ ಸಾಹು ಅವರನ್ನು

ಸೆರೆ ಹಿಡಿದ ಬಿಎಸ್‌ಎಫ್‌ ಯೋಧನನ್ನು ಬಿಡುಗಡೆಗೊಳಿಸದೆ ಪಾಕ್‌ ಮೊಂಡಾಟ Read More »

ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ

ಗುರುವಾರ ರಾತ್ರಿಯಿಡೀ ಎಲ್‌ಒಸಿಯಲ್ಲಿ ಭಾರಿ ಗುಂಡಿನ ಚಕಮಕಿ ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ಮಾಡಿದ ಮೂರು ದಿನಗಳ ಬಳಿಕ ಪಾಕಿಸ್ಥಾನ ಗಡಿಯಾಚೆಗಿನಿಂದ ಗುಂಡಿನ ದಾಳಿ ಪ್ರಾರಂಭಿಸಿದ್ದು, ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಗಡಿ ನಿಯಂತ್ರಣ ರೇಖೆಯಾಚೆಯಿಂದ ರಾತ್ರಿಯಿಡೀ ಶೆಲ್‌ ಮತ್ತು ಮೋರ್ಟರ್‌ ದಾಳಿಯಾಗಿದೆ. ಇದು ಅಸ್ವಾಭಾವಿಕ ಬೆಳವಣಿಗೆಯಾಗಿದ್ದು, ಪಾಕಿಸ್ಥಾನ ಕಾಲು ಕೆದರಿ ಯುದ್ಧಕ್ಕೆ ಬರುವ ಲಕ್ಷಣದಂತೆ ಕಾಣಿಸುತ್ತಿದೆ ಎಂದು ಭದ್ರತಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ಥಾನಿ ಸೈನಿಕರು ಶೆಲ್‌ ಮತ್ತು ಮೋರ್ಟರ್‌ಗಳಿಂದ ದಾಳಿ ನಡೆಸಿದ್ದು,

ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ Read More »

ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್‌ ನಡೆಸುತ್ತಿದ್ದ ಮೂವರು ಯುವಕರು ಸೆರೆ

ಮೊಬೈಲ್‌ ಬೆಟ್ಟಿಂಗ್ ಅಪ್ಲಿಕೇಶನ್ ಮೂಲಕ ಅಕ್ರಮ ದಂಧೆ ಉಡುಪಿ : ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ವ್ಯಕ್ತಿಗಳನ್ನು ಉಡುಪಿ ಸಿಇಎನ್ (ಸೆನ್‌) ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಸಿಇಎನ್ ಪೊಲೀಸ್ ಠಾಣೆಯ ಅಪರಾಧ ನಿರೀಕ್ಷಕ ರಾಮಚಂದ್ರ ನಾಯಕ್ ಉಡುಪಿ ಅಜ್ಜರಕಾಡಿನ ಭುಜಂಗ್ ಪಾರ್ಕ್ ಬಳಿ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ನಡುವಿನ ಐಪಿಎಲ್ ಪಂದ್ಯದ ಮೇಲೆ ಬೆಟ್ಟಿಂಗ್ ಕಟ್ಟಲು

ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್‌ ನಡೆಸುತ್ತಿದ್ದ ಮೂವರು ಯುವಕರು ಸೆರೆ Read More »

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ನಿರ್ವಾಹಕ ನೌಕರಿಯಿಂದ ವಜಾ

ಮುಡಿಪುವಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದ ಘಟನೆ ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ನಿರ್ವಾಹಕನನ್ನು ನೌಕರಿಯಿಂದಲೇ ವಜಾ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಂಡಕ್ಟರ್‌ ನೇಮಕಾತಿ ಪಡೆದಿದ್ದ ಆರೋಪಿ ಬಾಗಲಕೋಟೆಯ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35)ನನ್ನು ವಜಾಗೊಳಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. ಸರಕಾರಿ ಬಸ್‌ಗಳಲ್ಲಿ ಪ್ರತಿಯೊಬ್ಬ ಮಹಿಳೆಯೂ ಸುರಕ್ಷಿತವಾಗಿ ಪ್ರಯಾಣಿಸಬೇಕು. ಬಸ್‌ನ ಸಿಬ್ಬಂದಿಯೇ ದುರ್ವರ್ತನೆ ತೋರಿಸಿದರೆ ಅದು ಜನರಿಗೆ ತೀರಾ ಕೆಟ್ಟ ಸಂದೇಶ ನೀಡಿದಂತಾಗುತ್ತದೆ. ಇಂಥ ಕೃತ್ಯವನ್ನು ಸರಕಾರ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ನಿರ್ವಾಹಕ ನೌಕರಿಯಿಂದ ವಜಾ Read More »

ಸೀತಾರಾಮ ಪಟ್ಟೆ ವಿಧಿವಶ

ಪುತ್ತೂರು – ಉಪ್ಪಿನಂಗಡಿ ರಸ್ತೆಯ ಪಡೀಲಿನಲ್ಲಿರುವ ಬಾಳಪ್ಪ ಕಾಂಪ್ಲೆಕ್ಸ್’ನಲ್ಲಿ ಎಸ್.ಆರ್. ಹಾರ್ಡ್’ವೇರ್ ಉದ್ಯಮ ನಡೆಸುತ್ತಿದ್ದ ಸೀತಾರಾಮ ಪಟ್ಟೆಯವರು ಇಂದು ಮುಂಜಾನೆ 5.30ಕ್ಕೆ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈಚೆಗೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಪತ್ನಿ ಶೋಭಾ ಮತ್ತು ಅಂಬಿಕಾ ಸೆಂಟ್ರಲ್ ಸ್ಕೂಲ್’ನಲ್ಲಿ 10ನೆ ತರಗತಿ ವ್ಯಾಸಂಗ ಮಾಡುತ್ತಿರುವ ಮಗಳು ಮನಸ್ವಿ ಮತ್ತು 6ನೆ ತರಗತಿ ವ್ಯಾಸಂಗ ಮಾಡುತ್ತಿರುವ ಶ್ರೇಯಸ್ ಅವರನ್ನು ಅಗಲಿದ್ದಾರೆ. ಸೀತಾರಾಮ ಅವರು ಪಡೀಲ್’ನಲ್ಲಿರುವ ‘ಸಮೃದ್ಧಿ ಕಾಂಪ್ಲೆಕ್ಸ್’ನ ಮಾಲಕರು ಆಗಿದ್ದರು. ಪುಟ್ಟದೊಂದು ಸರಕು ಸಾಗಣೆಯ

ಸೀತಾರಾಮ ಪಟ್ಟೆ ವಿಧಿವಶ Read More »

error: Content is protected !!
Scroll to Top