ಕೆ ಎಸ್ ಎಸ್ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಕೈಗಾರಿಕಾ ಭೇಟಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ನಿಪುನ್ ಪರೀಕ್ಷೆಗೆ ಅಗತ್ಯವಾಗಿ ಏಪ್ರಿಲ್ 8 ರಂದು ಪಂಜದಲ್ಲಿರುವ ತೊಂಡಚ್ಚನ್ ಇಂಡಸ್ಟ್ರೀಸ್ ಫ್ಯಾಕ್ಟರಿಗೆ ಭೇಟಿ ಮಾಡಲಾಯಿತು. ತೊಂಡಚ್ಚನ್ ಇಂಡಸ್ಟ್ರೀಸ್ ಫ್ಯಾಕ್ಟರಿ ಮಾಲೀಕರಾದ ಮಧು ಎಂಬವರು ಫ್ಯಾಕ್ಟರಿಯಲ್ಲಿ ತಯಾರಾಗುವ ಸಿಮೆಂಟ್ ಹಂಚುಗಳು, ಕಬ್ಬಿಣದ ವಿವಿಧ ಬಗೆಯ ಉಪಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಟ್ಟು 11 ವಿದ್ಯಾರ್ಥಿಗಳು ಕೈಗಾರಿಕಾ ಭೇಟಿಯಲ್ಲಿ ಭಾಗಿಯಾಗಿದ್ದು ರೇಂಜರ್ ಲೀಡರ್ ಅಶ್ವಿನಿ ಎಸ್ ಎನ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಕೆ ಎಸ್ ಎಸ್ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಕೈಗಾರಿಕಾ ಭೇಟಿ Read More »










