ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶ್ರೀಮಠಕ್ಕೆ ಕ್ಷಮೆಯಾಚಿಸುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು | ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು : ಡಿ.ಬಿ. ಬಾಲಕೃಷ್ಣ
ಬೆಳ್ತಂಗಡಿ: ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ ಮತ್ತು ಸಭಾಭವನದ ಲೋಕಾರ್ಪಣಾ ಸಮಾರಂಭ ಏಪ್ರಿಲ್ 20 ಆದಿತ್ಯವಾರ ಬೆಳ್ತಂಗಡಿಯ ವಾಣಿ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಈಗಾಗಲೇ ಬಿಡುಗಡೆಗೊಂಡಿದೆ. ಆದರೆ ಬೆಳ್ತಂಗಡಿ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ತಮ್ಮ ಸಂಘದ ಕಚೇರಿ ಹಾಗೂ ಸಭಾಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ಸ್ವಾಮೀಜಿಗಳನ್ನು ಕರೆದು ನಮ್ಮ ಮಠದ ಸ್ವಾಮೀಜಿಗಳನ್ನು ಉದ್ದೇಶಪೂರ್ವಕವಾಗಿಯೇ ಕರೆಯದೆ ಅವಮಾನಿಸಿದ್ದಾರೆ. ಮಾತ್ರವಲ್ಲದೆ ಎರಡು ಧಾರ್ಮಿಕ ಪೀಠಗಳ ನಡುವೆ […]










