ಸುದ್ದಿ

ಅಗ್ನಿ-5 ಬಂಕರ್ ಬರ್ಸ್ಟರ್ ಕ್ಷಿಪಣಿಯತ್ತ ಭಾರತದ ರಕ್ಷಣಾ ವಲಯದ ಚಿತ್ತ?

ನವದೆಹಲಿ: ಭಾರತವು ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಸಶಕ್ತಗೊಳಿಸುವ ಗುರಿಯನ್ನು ಹೊಂದಿದ್ದು, ಬಂಕರ್ ಬರ್ಸ್ಟರ್ ಕ್ಷಿಪಣಿ ಯೋಜನೆಯನ್ನು ತೀವ್ರಗೊಳಿಸಿದೆ. ಅಮೆರಿಕಾದ ಬಂಕರ್ ಬರ್ಸ್ಟರ್ ಬಾಂಬಿಗಿಂತಲೂ ಹೆಚ್ಚು ಬಲಿಷ್ಟವಾದ ಅಸ್ತ್ರವನ್ನು ಭಾರತ ಅಭಿವೃದ್ಧಿ ಮಾಡುತ್ತಿದೆ. ಈ ಹೊಸ ಅಗ್ನಿ -5 ಕ್ಷಿಪಣಿಯು ವಾಯುಸೇನೆಯ ಹೊಸ ಆವೃತ್ತಿಯಾಗಿದ್ದು ಇದು ಶತ್ರು ರಾಷ್ಟ್ರಗಳ ರಹಸ್ಯ ಪರಮಾಣು ಬಂಕರ್‌ಗಳನ್ನು ಕೆಲವೇ ನಿಮಿಷಗಳಲ್ಲಿ ನಾಶಪಡಿಸುವ ‌ಸಾಮರ್ಥ್ಯ ಹೊಂದಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಈ ಯೋಜನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈಗಾಗಲೇ ಬಾಲಕೋಟ್ […]

ಅಗ್ನಿ-5 ಬಂಕರ್ ಬರ್ಸ್ಟರ್ ಕ್ಷಿಪಣಿಯತ್ತ ಭಾರತದ ರಕ್ಷಣಾ ವಲಯದ ಚಿತ್ತ? Read More »

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ತೀರ್ಪಿನಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಬೆಂಗಳೂರು 1: ಐಪಿಎಲ್ ಆರ್‌ಸಿಬಿ ವಿಜಯೋತ್ಸವ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಜನರ ಸಾವಿಗೆ ಕಾರಣವಾಗಿದ್ದ ಕಾಲ್ತುಳಿತ ಘಟನೆಗೆ ಹೊಣೆಯಾಗಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿದ ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿ.ಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಅವರಿಗೆ ಹಿಂದಿನ ಎಲ್ಲ ಭತ್ಯೆ, ಸೌಲಭ್ಯ ಒದಗಿಸಲು

ಬೆಂಗಳೂರು ಕಾಲ್ತುಳಿತ ಪ್ರಕರಣ : ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು Read More »

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌

ಕದ್ದ ಚಿನ್ನವನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಸಾಲ ಪಡೆದು ವಂಚನೆ ಮಂಗಳೂರು : ಬ್ಯಾಂಕ್‌ ಮ್ಯಾನೇಜರ್‌ ಒಬ್ಬ ತನ್ನದೇ ಬ್ಯಾಂಕಿನಿಂದ 6.5 ಕೆಜಿಯಷ್ಟು ಚಿನ್ನ ಕದ್ದು ಅದನ್ನು ಇನ್ನೊಂದು ಬ್ಯಾಂಕಿನಲ್ಲಿ ಅಡವಿಟ್ಟು ಹಣ ಪಡೆದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಮ್ಯಾನೇಜರ್‌ ಗ್ರಾಹಕರು ತನ್ನ ಬ್ಯಾಂಕಿನಲ್ಲಿ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ಕದ್ದು, ಕೋ-ಆಪರೇಟಿವ್‌ ಸೊಸೈಟಿ ಒಂದರಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ ಪಡೆದಿದ್ದಾನೆ. ಮಂಗಳೂರಿನ ಶಕ್ತಿನಗರದ ಪದುವಾ ವ್ಯವಸಾಯ

ಮಂಗಳೂರು: ತನ್ನದೇ ಬ್ಯಾಂಕಿನಿಂದ 6.5 ಕೆಜಿ ಚಿನ್ನ ಕದ್ದ ಮ್ಯಾನೇಜರ್‌ Read More »

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ಮಂಗಳೂರು: ಬಂಟ್ವಾಳದಲ್ಲಿ ಹಾಡಹಗಲೇ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿ ಶಿವಪ್ರಸಾದ್‌ನನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ತೆಲಂಗಾಣ ಕಾರ್ಖಾನೆ ಸ್ಫೋಟ : ಮೃತರ ಸಂಖ್ಯೆ 35ಕ್ಕೇರಿಕೆ

ಫಾರ್ಮಾ ಕಂಪನಿಯ ರಿಯಾಕ್ಟರ್‌ ಸ್ಫೋಟಿಸಿ ಭೀಕರ ದುರಂತ ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದ್ದಾರೆ. ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ನಿನ್ನೆ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ.

ತೆಲಂಗಾಣ ಕಾರ್ಖಾನೆ ಸ್ಫೋಟ : ಮೃತರ ಸಂಖ್ಯೆ 35ಕ್ಕೇರಿಕೆ Read More »

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು

ಡ್ಯೂಟಿ ಡಾಕ್ಟರ್‌ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ರೋಗಿಗಳು ಮತ್ತು ಸಿಬ್ಬಂದಿ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟ್ರರ್ ಬುಕ್, ಬೆಡ್ ಎಲ್ಲ ಸುಟ್ಟುಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್

ವಿಕ್ಟೋರಿಯ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ : ರೋಗಿಗಳು ಪ್ರಾಣಾಪಾಯದಿಂದ ಪಾರು Read More »

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ

ಅಕ್ರಮವಾಗಿ ನುಸುಳಿ ಬರುವ ದುಸ್ಸಾಹಸ ಪ್ರಾಣಕ್ಕೆ ಎರವಾಯಿತು ಜೈಪುರ: ಪಾಕಿಸ್ತಾನ ಮೂಲದ ಹಿಂದೂ ಧರ್ಮದ ಯುವಕ ಮತ್ತು ಯುವತಿಯ ಮೃತದೇಹ ಭಾರತ-ಪಾಕ್‌ ಅಂತಾರಾಷ್ಟ್ರೀಯ ಗಡಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಪಕ್ಕದಲ್ಲಿ ಗುರುತಿನ ಚೀಟಿಯೂ ಕಂಡು ಬಂದಿದೆ. ಜೈಸಲ್ಮೇರ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಪತ್ತೆಯಾದ ಯುವಕ ಮತ್ತು ಅಪ್ರಾಪ್ತೆಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದವು. ಶವದ ಸ್ಥಿತಿ ನೋಡಿದರೆ ಇವರು ಮೃತಪಟ್ಟು ವಾರ ಕಳೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕುಡಿಯಲು

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ

ಗ್ರಾಹಕರಿಗೆ ದೊಡ್ಡ ರಿಲೀಫ್‌ ನೀಡಿದ ತೈಲ ಕಂಪನಿಗಳು ನವದೆಹಲಿ: ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 58.50 ರೂ.ಗಳಷ್ಟು ಕಡಿಮೆ ಮಾಡಿ ಗ್ರಾಹಕರಿಗೆ ಶುಭ ಸುದ್ದಿ ನೀಡಿವೆ. ಗೃಹಬಳಕೆಯ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ ಕಡಿಮೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಬಿಡುಗಡೆ ಮಾಡಿದ ಹೊಸ ದರ ಪಟ್ಟಿಯ ಪ್ರಕಾರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,665

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ Read More »

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ

ಗೋಮಾಂಸ ಸಾಗಿಸಲು ಬಳಸಿದ್ದ ಕಾರು, ಸ್ಕೂಟಿ ವಶ ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಕುಂಜಾಲು ರಾಮ ಮಂದಿರದ ಬಳಿ ಶನಿವಾರ ತಡರಾತ್ರಿ ಗೋವಿನ ರುಂಡ ಪತ್ತೆಯಾದ ಘಟನೆ ಜಿಲ್ಲೆಯಲ್ಲಿ ಭಾರಿ ಸಂಚಲನವುಂಟು ಮಾಡಿತ್ತು. ಹಿಂದು ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿದ

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ Read More »

ಗೋವಿನ ರುಂಡ ನಡುರಸ್ತೆಯಲ್ಲಿ ಎಸೆದ ಕಟುಕರು : ಹಿಂದೂ ಸಂಘಟನೆಗಳಿಂದ ಆಕ್ರೋಶ

ಉಡುಪಿ ಸಮೀಪ ಬ್ರಹ್ಮಾವರದ ಕುಂಜಾಲಿನಲ್ಲಿ ನಡೆದ ಘಟನೆ ಉಡುಪಿ: ಜಿಲ್ಲೆಯ ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ದನವನ್ನು ಕಡಿದು ರುಂಡ ಎಸೆದು ಹೋಗಿರುವ ಅಮಾನವೀಯ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮತ್ತು ಹಲವು ಹಿಂದೂ ಮುಖಂಡರು ಈ ಘಟನೆಯ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಶನಿವಾರ ರಾತ್ರಿ ಸುಮಾರು 11.30 ಸಮಯದಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಹಿಂದುಗಳ ಧಾರ್ಮಿಕ ಭಾವನೆಯನ್ನು ನೋಯಿಸಲು

ಗೋವಿನ ರುಂಡ ನಡುರಸ್ತೆಯಲ್ಲಿ ಎಸೆದ ಕಟುಕರು : ಹಿಂದೂ ಸಂಘಟನೆಗಳಿಂದ ಆಕ್ರೋಶ Read More »

error: Content is protected !!
Scroll to Top