ಮೇ 20 : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ | ಪತ್ರಿಕಾಗೋಷ್ಠಿಯಲ್ಲಿ ನೀರಜ್ ದೋನೆರಿಯಾ
ಪುತ್ತೂರು ; ಕಾರಿಂಜ ಸಮೀಪದ ಪುಳಿಮಜಲು ನಿವಾಸಿ, ಹಿಂದೂ ಸಂಘಟನೆ ಕಾರ್ಯಕರ್ತ ಬಜರಂಗದಳದ ಗೋ ರಕ್ಷಾ ಪ್ರಮುಖ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನಕ್ಕೆ ವಿಹಿಂಪ ಬಜರಂಗಳ ಯೋಜನೆ ರೂಪಿಸಿದೆ. ಮೇ ೨೦ಕ್ಕೆ ಮಂಗಳೂರಿನಲ್ಲಿ ಬೃಹತ್ ಆಂದೋಲನ ನಡೆಯಲಿದೆ ಎಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕ ನೀರಜ್ ದೋನೆರಿಯಾ ಹೇಳಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಹಿಂದುಗಳನ್ನು ಭಯದ ವಾತಾವರಣಕ್ಕೆ ತಳ್ಳುವ ಮತ್ತು ಧರ್ಮ […]










