ಜ.24 : ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ.
ಪುತ್ತೂರು : ಬೊಳುವಾರಿನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಜ.24 ರಂದು 9ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನದಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2016 ರಿಂದ ನಮ್ಮ ದೇವಸ್ಥಾನದ ಜೊತೆಯಾಗಿ ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನವನ್ನು ಪ್ರಾರಂಭ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಚೆಂಡೆ, ಮದ್ದಳೆ, ಭಾಗವತಿಕೆ, ನೃತ್ಯ […]