ಸುದ್ದಿ

ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ!

ಸಿಕ್ಕಾಪಟ್ಟೆ ಏರಿಕೆಯಾದ ಚಿನ್ನ, ಬೆಳ್ಳಿ ಬೆಲೆಯಿಂದ ಜನ ಕಂಗಾಲು ಬೆಂಗಳೂರು: ಚಿನ್ನದ ಬೆಲೆ ಗಗನಕ್ಕೇರಿ ಬಡವರ ಪಾಲಿಗೆ ಮರೀಚಿಕೆಯಾಗಿದ್ದು, ವ್ಯಕ್ತಿಯೊಬ್ಬರು ಕೊನೆಗೆ ಚಿನ್ನದ ಬೆಲೆ ಇಳಿಸಲು ದೇವರಿಗೇ ಮೊರೆ ಹೋಗಿದ್ದಾರೆ! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರೊಬ್ಬರು ಚಿನ್ನದ ಬೆಲೆ ಇಳಿಯಲಿ ಎಂದು ಕೋರಿ ಸಲ್ಲಿಸಿರುವ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ.ನಾಗರಾಜ ಉಲವತ್ತಿ ಎಂಬವರು, ಚಿನ್ನದ ದರ ಇಳಿಯಲಿ, ಬಡವರು ಹಾಗೂ […]

ದೇವರೇ ಚಿನ್ನದ ಬೆಲೆ ಇಳಿಸು…: ಮೊರೆಯಿಟ್ಟ ಭಕ್ತ! Read More »

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ

ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ವರ ಚಾಮರಾಜನಗರ: ಮದುವೆ ಮಂಟಪಕ್ಕೆ ಹೋಗುತ್ತಿರುವಾಗಲೇ ವರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿರುವ ವರ. ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ Read More »

ಸರ್ಕಾರಿ ನೌಕರರಿಗೂ ಬಂತು ಡ್ರೆಸ್‌ ಕೋಡ್‌ : ಖಾದಿ ಉಡುಪು ಧರಿಸಲು ಸೂಚನೆ

ಯಾವಾಗ, ಯಾವ ಉಡುಪು ಧರಿಸಬೇಕೆಂದು ಸೂಚಿಸಿದ ಸರ್ಕಾರ ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೂ ಡ್ರೆಸ್ ಕೋಡ್ ಜಾರಿ ಮಾಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ನೌಕರರು ಸ್ವಯಂಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದಲ್ಲದೆ, ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಖಾದಿ ಉಡುಪನ್ನು ಧರಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು, ಖಾದಿ ಕೇವಲ ಒಂದು ಉಡುಪು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು

ಸರ್ಕಾರಿ ನೌಕರರಿಗೂ ಬಂತು ಡ್ರೆಸ್‌ ಕೋಡ್‌ : ಖಾದಿ ಉಡುಪು ಧರಿಸಲು ಸೂಚನೆ Read More »

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ

ಪೌರಾಯುಕ್ತಗೆ ನಿಂದಿಸಿ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರಸ್‌ ಮುಖಂಡ ಮಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತಂಗಿದ್ದ ರೆಸಾರ್ಟ್, ಆತನ ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಗುರುವಾರ ಸಂಜೆ ಶಿಡ್ಲಘಟ್ಟದ ಪೊಲೀಸರು ಮಹಜರು ನಡೆಸಿದ್ದಾರೆ. ಗುರುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಪೊಲೀಸ್ ವಾಹನದಲ್ಲಿ ಪಚ್ಚನಾಡಿಗೆ ಬಂದು ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿ ಆತ ವಾಸ್ತವ್ಯ ಇದ್ದುದಕ್ಕೆ ಪೂರಕ ಸಾಕ್ಷಿ

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ Read More »

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌

ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌ Read More »

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯ 177 ಕೋ. ರೂ. ಆಸ್ತಿ ಮುಟ್ಟುಗೋಲು

ಆನ್‌ಲೈನ್‌ ಬೆಟ್ಟಿಂಗ್‌ ಮೂಲಕ 2,300 ಕೋ. ರೂ. ಅಕ್ರಮ ಎಸಗಿರುವ ಶಾಸಕ ಬೆಂಗಳೂರು: ಅಕ್ರಮ ಬೆಟ್ಟಿಂಗ್ ವ್ಯವಹಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸೇರಿದ 177 ಕೋ. ರೂ. ಮೌಲ್ಯದ ಆಸ್ತಿಯನ್ನುಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯ 177 ಕೋ. ರೂ. ಆಸ್ತಿ ಮುಟ್ಟುಗೋಲು Read More »

ಸಂಸತ್ ಬಜೆಟ್ ಅಧಿವೇಶನ: ಪ್ರಧಾನಿ ಮೋದಿ ಭಾಷಣ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಚಾಲನೆ ದೊರೆತಿದೆ. ಪ್ರಧಾನಿ ಮೋದಿ ಅವರು ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದು, ದೇಶದ ಅಭಿವೃದ್ಧಿಯ ದಿಕ್ಸೂಚಿಯನ್ನು ಬಿಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರದ ಮೂಲಮಂತ್ರ ‘ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ’. ಭಾರತ ಈಗ ವೇಗವಾಗಿ ಚಲಿಸುತ್ತಿರುವ ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿದೆ ಎಂಬುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಬಗೆಗೂ ಮಾತನಾಡಿರುವ ಅವರು, ಅವರದ್ದು ಕೇವಲ ಭಾಷಣವಲ್ಲ. 140 ಕೋಟಿ ಭಾರತೀಯರ ಆತ್ಮವಿಶ್ವಾಸ ಮತ್ತು ಯುವ ಶಕ್ತಿಯ ಆಕಾಂಕ್ಷೆಗಳ ಪ್ರತಿಬಿಂಬ ಎಂದು ಹೇಳಿದ್ದಾರೆ.

ಸಂಸತ್ ಬಜೆಟ್ ಅಧಿವೇಶನ: ಪ್ರಧಾನಿ ಮೋದಿ ಭಾಷಣ Read More »

ಇನ್ಸ್ಟಾಗ್ರಾಮ್ ಪ್ರೀತಿ: ಮದುವೆಗೆ ವಿರೋಧಿಸಿದ ಹೆತ್ತವರನ್ನೇ ಕೊಂದ ಪಾಪಿ ಮಗಳು

ಹೈದರಾಬಾದ್: ಇನ್‌ಸ್ಟಾ‌ಗ್ರಾಮಿನಲ್ಲಿ ಪರಿಚಯವಾಗಿ, ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ಸಮ್ಮತಿಸದ ಹೆತ್ತವರ ಜೀವವನ್ನೇ ಪಾಪಿ ಪುತ್ರಿಯೊಬ್ಬಳು ತೆಗೆದ ಘಟನೆ ನಡೆದಿದೆ. ಆರೋಪಿಯನ್ನು ಸುರೇಖಾ ಎಂದು ಗುರುತಿಸಲಾಗಿದೆ. ನಕ್ಕಲಿ ದಶರಥಂ(59) ಮತ್ತು ಲಕ್ಷ್ಮೀ (54) ಎಂಬವರೇ ಮಗಳ ಕ್ರೂರತೆಗೆ ಬಲಿಯಾದ ನತದೃಷ್ಟ ಹೆತ್ತವರು. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಸುರೇಖಾ ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು. ಅವನನ್ನು ಮದುವೆಯಾಗುವುದಾಗಿ ಮನೆಯಲ್ಲಿ ಹೇಳಿದ್ದು, ಈ ವೇಳೆ ಹೆತ್ತವರು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ಆಕೆ ಮೋಸದಿಂದ ಅವರಿಗೆ ಹೆಚ್ಚಿನ ಡೋಸೇಜ್

ಇನ್ಸ್ಟಾಗ್ರಾಮ್ ಪ್ರೀತಿ: ಮದುವೆಗೆ ವಿರೋಧಿಸಿದ ಹೆತ್ತವರನ್ನೇ ಕೊಂದ ಪಾಪಿ ಮಗಳು Read More »

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ‌ವಿಮಾನ ಅವಘಡದಲ್ಲಿ ಮೃತಪಟ್ಟ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ನೂರಾರು ಗಣ್ಯರ ಸಮ್ಮುಖದಲ್ಲಿ, ಸಕಲ ಸರ್ಕಾರಿ ಗೌರವದ ಜೊತೆಗೆ ನಡೆಯಿತು. ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಲಾಗಿತ್ತು. ಮೃತದೇಹವನ್ನು ಅವರ ಹುಟ್ಟೂರಾದ ಕಟೇವಾಡಿಯಿಂದ ಬಾರಾಮತಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಸಲುವಾಗಿ ತರಲಾಗಿತ್ತು. ಅವರ ಚಿತೆಗೆ ಪುತ್ರರಾದ ಪಾರ್ಥ್ ಪವಾರ್ ಮತ್ತು ಜೇ ಪವಾರ್ ಅವರು ಅಗ್ನಿಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್ Read More »

ಸರ್ಕಾರಿ ವೈದ್ಯರುಗಳು ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೈದ್ಯರುಗಳು ಒಳರೋಗಿಗಳಿಗೆ ‌ಚಿಕಿತ್ಸೆ ನೀಡುವುದನ್ನು ನಿಷೇಧಿಸುವಂತಹ ಮಹತ್ವದ ನಿರ್ಧಾರವನ್ನು ಕರ್ನಾಟಕ ಸರ್ಕಾರ ತೆಗೆದುಕೊಂಡಿದೆ. ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಅದೇಶದ ಪ್ರಕಾರ ಪ್ರಸ್ತುತ ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ಮುಗಿದ ಬಳಿಕ ಖಾಸಗಿಯಾಗಿಯೂ ಸೇವೆ ಸಲ್ಲಿಸುವ ಅವಕಾಶ ಇದೆ. ಆದರೆ ಈಗ ಈ‌ ಆದೇಶವನ್ನು ಮಾರ್ಪಾಡು ಮಾಡಲಾಗಿದ್ದು, ಸರ್ಕಾರಿ ವೈದ್ಯರು ಕೇವಲ ಹೊರ ರೋಗಿಗಳಿಗೆ ಮಾತ್ರವೇ ಚಿಕಿತ್ಸೆ ನೀಡಬಹುದು ಎಂದು ಹೇಳಲಾಗಿದೆ.

ಸರ್ಕಾರಿ ವೈದ್ಯರುಗಳು ಖಾಸಗಿ ಸೇವೆಯಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ Read More »

error: Content is protected !!
Scroll to Top