ಜ.14ರಂದು ಪುತ್ತೂರಿನ ತೆಂಕಿಲದಲ್ಲಿ ಅಯೋಧ್ಯೆಯ ಸಮಗ್ರ ಕಥನ `ಶ್ರೀರಾಮ ಕಥಾ ವೈಭವ” | 3 ಗಂಟೆ, 3 ವೇದಿಕೆ, 300 ವಿದ್ಯಾರ್ಥಿಗಳು `ಶ್ರೀರಾಮ ಕಥಾ ವೈಭವ’ದ ವಿಶೇಷತೆ
ಪುತ್ತೂರು: ರಾಮನ ಚರಿತ್ರೆಯನ್ನು ಯುವಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಜ.14 ರಂದು ಪುತ್ತೂರಿನ ತೆಂಕಿಲದ ವಿವೇಕ ನಗರದಲ್ಲಿ ವೈಭವದ ಆಯೋಧ್ಯೆಯ ಸಮಗ್ರ ಕಥನವನ್ನು ಪ್ರಸ್ತುತಪಡಿಸುವ ‘ಶ್ರೀರಾಮ ಕಥಾ ವೈಭವ’ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀರಾಮ ಕಥಾ ವೈಭವ ಸಾಂಸ್ಕೃತಿಕ ಸಮಿತಿ ಗೌರವಾಧ್ಯಕ್ಷ ಬಲರಾಮ ಆಚಾರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14 ರಂದು ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ […]










