ಸುದ್ದಿ

25 ವರ್ಷದ ಬಳಿಕ ಪತ್ತೆಯಾದ ತಾಯಿ| ಭಾವುಕರಾದ  ಮಕ್ಕಳು

ಬಳ್ಳಾರಿ  : ಬಳ್ಳಾರಿ ಜಿಲ್ಲೆಯ ಸಾಕಮ್ಮ ಎನ್ನುವ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದ ಅನಾಥಾಶ್ರಮದಲ್ಲಿ ಪತ್ತೆಯಾಗಿದ್ದಾರೆ. ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಿಂದ ರೈಲು ಹತ್ತಿ ಹಿಮಾಚಲ ಪ್ರದೇಶಕ್ಕೆ ಹೋಗಿದ್ದು, ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ಸಾಕಮ್ಮ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಮಾಹಿತಿ ಸಿಕ್ಕಿದೆ. ಪಿ ಮಣಿವಣ್ಣನ್ ಅವರ ನಿರ್ದೇಶನದ ಮೇರೆಗೆ ಮಂಡಿಗೆ ಹೋಗಿದ್ದ ತಂಡ ಸಾಕಮ್ಮ ಅವರ […]

25 ವರ್ಷದ ಬಳಿಕ ಪತ್ತೆಯಾದ ತಾಯಿ| ಭಾವುಕರಾದ  ಮಕ್ಕಳು Read More »

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ | ಕಾರ್ಯಕರ್ತರ ಮಹಾಸಭೆ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ಮುಂಭಾಗ ಡಿ.28 – 29 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಭಾನುವಾರ ಸಂಜೆ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್  ಕುಮಾರ್ ಪುತ್ತಿಲ ಮಾತನಾಡಿ, ಈ  ಬಾರಿ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮದ ಅಚ್ಚುಕಟ್ಟಾದ ನಿರ್ವಹಣೆಗೆ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಯಾವುದೇ ಸೂಚನೆ

ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ | ಕಾರ್ಯಕರ್ತರ ಮಹಾಸಭೆ Read More »

ವಿಟ್ಲ ಅಂಬೇಡ್ಕರ್ ಭವನಕ್ಕೆ ಅನುದಾನ ಮಂಜೂರು ಮಾಡಲು ವಿಳಂಬ | ಡಿ.30 ರಂದು ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ ಮೂಲಕ ಮನವಿ

ಪುತ್ತೂರು: ವಿಟ್ಲದಲ್ಲಿ ಮಂಜೂರುಗೊಂಡಿರುವ ಅಂಬೇಡ್ಕರ್ ಭವನಕ್ಕೆ ಈಗಾಗಲೇ 2 ಕೋಟಿ ಅನುದಾನ ಮಂಜೂರುಗೊಳಿಸಲು ವಿಳಂಬ ಮಾಡಿರುವ ಹಿನ್ನಲೆಯಲ್ಲಿ ಸರಕಾರದ ವಿರುದ್ಧ ಡಿ.30 ರಂದು ಕಬಕ ವೃತ್ತದಿಂದ ಶಾಸಕರ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿ ಪುತ್ತೂರು ಶಾಸಕರಿಗೆ ಮನವಿ ಸಲ್ಲಿಸಲಾಗುವುದು ಎಂದು ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರಿಗೆ ಮನವಿ ಸಲ್ಲಿಸಿದ ಬಳಿಕವೂ ನಮ್ಮ ಬೇಡಿಕೆ ಈಡೇರದಿದ್ದಲ್ಲಿ ದಲಿತ ಏಳು ಸಮುದಾಯವನ್ನು ಸೇರಿಸಿಕೊಂಡು ಜನವರಿ

ವಿಟ್ಲ ಅಂಬೇಡ್ಕರ್ ಭವನಕ್ಕೆ ಅನುದಾನ ಮಂಜೂರು ಮಾಡಲು ವಿಳಂಬ | ಡಿ.30 ರಂದು ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ ಮೂಲಕ ಮನವಿ Read More »

ಡಿ.25 : ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಶ್ರೀ ಆಂಜನೇಯ-56 ಸಂಭ್ರಮ, ಶ್ರೀ ಯಕ್ಷಾಂಜನೇಯ ಪ್ರಶಸ್ತಿ, ಪ್ರದಾನ

ಪುತ್ತೂರು : ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ “ಆಂಜನೇಯ-56” ಸಂಭ್ರಮ ಡಿ.25 ಬುಧವಾರ ದಿನಪೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಳಗ್ಗೆ 9 ಕ್ಕೆ ಶ್ರೀ ಆಂಜನೇಯ-56 ಸಂಭ್ರಮದ ಉದ್ಘಾಟನೆ ನಡೆಯಲಿದ್ದು, ಬಳಿಕ ‘ಯಕ್ಷ ತಾಪಸಿಯರು-ಸಂವಾದ’ ತಾಳಮದ್ದಳೆ ನಡೆಯಲಿದೆ. ಮಧ್ಯಾಹ್ನ

ಡಿ.25 : ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಶ್ರೀ ಆಂಜನೇಯ-56 ಸಂಭ್ರಮ, ಶ್ರೀ ಯಕ್ಷಾಂಜನೇಯ ಪ್ರಶಸ್ತಿ, ಪ್ರದಾನ Read More »

ಯುವತಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬಂಟ್ವಾಳ : ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾವೆಸೆಗಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವಕ್ಕೆ ಮನೆಯವರ ಜೊತೆ ಆಗಮಿಸಿದ್ದ ಯುವತಿಯನ್ನು ಆರೋಪಿ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಯುವತಿ ನೀಡಿದ ದೂರಿನ ಅನ್ವಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ Read More »

ಉತ್ತರ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಎನ್‌ಕೌಂಟರ್‌ಗೆ ಬಲಿ

ನಿಷೇಧಿತ ಖಲಿಸ್ಥಾನ್‌ ಕಮಾಂಡೊ ಫೋರ್ಸ್‌ಗೆ ಸೇರಿದ ಉಗ್ರರು ಲಖನೌ: ನಿಷೇಧಿತ ಖಲಿಸ್ತಾನ್‌ ಕಮಾಂಡೊ ಫೋರ್ಸ್‌ನ (ಖಲಿಸ್ತಾನ್‌ ಜಿಂದಾಬಾದ್‌ ಫೋರ್ಸ್‌) ಸಂಘಟನೆಯ ಮೂವರು ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಸಾಯಿಸಿದ್ದಾರೆ. ಸೋಮವಾರ ಮುಂಜಾನೆ ಈ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಹತರಾದ ಖಲಿಸ್ಥಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಲಾಗಿದೆ. ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ

ಉತ್ತರ ಪ್ರದೇಶದಲ್ಲಿ ಮೂವರು ಭಯೋತ್ಪಾದಕರು ಎನ್‌ಕೌಂಟರ್‌ಗೆ ಬಲಿ Read More »

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್‌ : ಮೂವರು ಮೃತ್ಯು, ಆರು ಮಂದಿಗೆ ಗಾಯ

ಪುಣೆ: ಫುಟ್‌ಪಾತ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿದು ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ತಡರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಚಾಲಕ ಪಾನಮತ್ತನಾಗಿದ್ದು ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.ಮೃತರನ್ನು ವಿಶಾಲ್ ಪವಾರ್ (22) ಮತ್ತು ಪುಟ್ಟ ಮಕ್ಕಳಾದ ವೈಭವಿ ಪವಾರ್(1), ವೈಭವ್ ರಿತೇಶ್ ಪವಾರ್ (2) ಎಂದು ಗುರುತಿಸಲಾಗಿದೆ. ಎಲ್ಲರೂ ಅಮರಾವತಿಯವರಾಗಿದ್ದಾರೆ. ಪುಣೆಯ ವಾಘೋಲಿಯಲ್ಲಿ ಮಧ್ಯರಾತ್ರಿ 1ರ ಸುಮಾರಿಗೆ ಪಾನಮತ್ತ

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್‌ : ಮೂವರು ಮೃತ್ಯು, ಆರು ಮಂದಿಗೆ ಗಾಯ Read More »

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿಯ ವಿರುದ್ಧ ಕೇಸ್‌ ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾri ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಹಿರೇಬಾಗೇವಾಡಿ ಪೊಲೀಸ್‌

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌ Read More »

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು

ಪುತ್ತೂರು : ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ  ತಿಳಿಸಿದರು. ಪುತ್ತೂರಿನ ಕಲ್ಲೇಗ ಭಾರತ ಮಾತಾ ಸಮುದಾಯ ಭವನದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಇದರ ತೃತೀಯ ವಾರ್ಷಿಕೋತ್ಸವವನ್ನು  ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಪ್ರೊ ಎ.ವಿ ನಾರಾಯಣ ಅಧ್ಯಕ್ಷತೆ ವಹಿಸಿದ್ದರು.  ಮುಂಬೈ

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು : ಎಡನೀರು ಶ್ರೀಗಳು Read More »

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ

ಆನ್‌ಲೈನ್‌ ವಂಚನೆ ಪ್ರಕರಣಗಳ ತನಿಖೆಯಲ್ಲಿ ಮಂಗಳೂರು ಪೊಲೀಸರ ಮಹತ್ವದ ಸಾಧನೆ ಮಂಗಳೂರು: ಸೈಬರ್​ ವಂಚಕರಿಗೆ 500ಕ್ಕೂ ಅಧಿಕ ಸಿಮ್‌ಕಾರ್ಡ್‌ಗಳನ್ನು ಪೂರೈಕೆ ಮಾಡಿದ್ದ ವಂಚಕನೊಬ್ಬನನ್ನು ಮಂಗಳೂರು ಪೊಲೀಸರು ದಿಲ್ಲಿಯಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಸೆನ್ ಕ್ರೈಂ ಪೊಲೀಸರ ಕೈಗೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಂಚಕ ಸಿಕ್ಕಿಬಿದ್ದಿದ್ದಾನೆ. ಅವನನ್ನು ಒಡಿಶಾ ಮೂಲದ ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ Read More »

error: Content is protected !!
Scroll to Top