ಸುದ್ದಿ

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌

ಶಿಗ್ಗಾವಿಯಲ್ಲಿ ಪಠಾಣ್‌, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ, ಸಂಡೂರಿನಲ್ಲಿ ಅನ್ನಪೂರ್ಣ ಜಯಭೇರಿ ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಸುಮಾರು 09 ಸಾವಿರ ಮತಗಳ ಅಂತರದಿಂದ ಪಠಾಟ್‌ […]

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ Read More »

ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು

ಜಾರ್ಖಂಡ್‌ನಲ್ಲಿ ಸರಳ ಬಹುಮತದತ್ತ ಕಾಂಗ್ರೆಸ್‌ ಮುಂಬಯಿ: ಚುನಾವಣೋತ್ತರ ಸಮೀಕ್ಷೆಗಳು ಮತ್ತೆ ಸುಳ್ಳಾಗಿವೆ. ಮಹಾರಾಷ್ಟ್ರದಲ್ಲಿ 215ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ ಬಿಜೆಪಿ ನೇತೃತ್ವದ ಮಹಾಯುತಿ ನಿಚ್ಚಳ ಬಹುಮತದತ್ತ ದಾಪುಗಾಲು ಹಾಕಿದೆ. ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ ಬರೀ 56 ಕ್ಷೇತ್ರಗಳಲ್ಲಿ ಮುಂದಿದ್ದು, ಹೀನಾಯ ಸೋಲಿನತ್ತ ಮುಖಮಾಡಿದೆ. ಕಳೆದ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಪುಟಿದೆದ್ದಿರುವುದು ಅಚ್ಚರಿ ಮೂಡಿಸಿದೆ. ಯಾವ ಸಮೀಕ್ಷೆಯೂ ಬಿಜೆಪಿ ನೇತೃತ್ವದ ಎನ್‌ಡಿಎ

ಮಹಾರಾಷ್ಟ್ರದಲ್ಲಿ ಭರ್ಜರಿ ಗೆಲುವಿನತ್ತ ಬಿಜೆಪಿ ದಾಪುಗಾಲು Read More »

ಸಿ.ಪಿ.ಯೋಗೀಶ್ವರ್‌, ಅನ್ನಪೂರ್ಣ ಗೆಲುವು : ಬಿಜೆಪಿಗೆ ತೀವ್ರ ಮುಖಭಂಗ

ರಾಮನಗರ: ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಂಪ್‌ ಆದರೂ ಜನತೆ ಯೋಗೇಶ್ವರ್‌ ಕೈಹಿಡಿದಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ಗೆಲುವು ಸಾಧಿಸಿರುವುದರಿಂದ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ

ಸಿ.ಪಿ.ಯೋಗೀಶ್ವರ್‌, ಅನ್ನಪೂರ್ಣ ಗೆಲುವು : ಬಿಜೆಪಿಗೆ ತೀವ್ರ ಮುಖಭಂಗ Read More »

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ

ಜಾರ್ಖಂಡ್‌ನಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ಭಾರಿ ಹಣಾಹಣಿ ಮುಂಬಯಿ: ಮಹಾರಾಷ್ಟ್ರದ ಮತ ಎಣಿಕೆ ಮುಂದುವರಿದಿರುವಂತೆ ಬಿಜೆಪಿ ನೇತೃತ್ವದ ಮಹಾಯೂತಿ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದೆ. 288 ಕ್ಷೇತ್ರಗಳ ಪೈಕಿ 207 ಕ್ಷೇತ್ರಗಳಲ್ಲಿ ಮಹಾಯುತಿ ಮುಂದೆ ಇದೆ. ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ 76 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. ಜಾರ್ಖಂಡ್‌ನಲ್ಲಿ ಮಾತ್ರ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಕ್ಷಣಕ್ಷಣಕ್ಕೂ ಟ್ರೆಂಡ್‌ ಬದಲಾಗುತ್ತಿದ್ದು, ಸದ್ಯ ಬಿಜೆಪಿ 41ರಲ್ಲಿ ಮತ್ತು ಕಾಂಗ್ರೆಸ್‌ 37 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಕರ್ನಾಟಕದ

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ Read More »

ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ

ಎರಡೂ ರಾಜ್ಯಗಳಲ್ಲಿ ತೀವ್ರ ಹಣಾಹಣಿಯ ಸಾಧ್ಯತೆ ಗೋಚರ ಮುಂಬಯಿ: ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ, ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಮತ್ತು 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭದ ಸುತ್ತಿನಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಲ್ಪ ಮುನ್ನಡೆ ಸಿಕ್ಕಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆಯೂ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಅಂಚೆ ಮತಗಳಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾವಿಕಾಸ್‌ ಅಘಾಡಿ 61 ಕ್ಷೇತ್ರಗಳಲ್ಲಿ

ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ Read More »

3 ವರ್ಷದ ಮಗುವಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

ಮಂಗಳೂರು: ಉಳ್ಳಾಲ ತಾಲೂಕಿನ ಬಾಳೆಪುಣಿ ಎಂಬಲ್ಲಿ 70 ವರ್ಷದ ವೃದ್ಧ ಮೂರು ವರ್ಷದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ವೃದ್ಧ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂಲತಃ ಪುತ್ತೂರು ನಿವಾಸಿ, ಪ್ರಸ್ತುತ ಮುದುಂಗಾರುಕಟ್ಟೆಯಲ್ಲಿ ವಾಸವಾಗಿರುವ ಅಬ್ದುಲ್ಲಾ (70) ಆರೋಪಿ. ಮಗು ಆಟವಾಡುತ್ತಿದ್ದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅಸ್ವಸ್ಥಗೊಂಡ ಮಗುವನ್ನು ಗಮನಿಸಿ ವೈದ್ಯಕೀಯ

3 ವರ್ಷದ ಮಗುವಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ Read More »

ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ

ಬೆಂಗಳೂರು: ಭೋವಿ ನಿಗಮ ಹಗರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಎದುರಿಸಿದ್ದ ಯುವತಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಭವಿಸಿದ್ದು, ತನಿಖೆಯ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಭೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್‌ ಪೂರೈಕೆ ಮಾಡಿದ್ದ ಪದ್ಮನಾಭ ನಗರದ ಜೀವಾ (32) ಎಂಬ ಯುವತಿ ಪದ್ಮನಾಭ ನಗರದ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವಾ ಭೋವಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಮೂರು ತಿಂಗಳ ಹಿಂದೆ ಒಮ್ಮೆ ವಿಚಾರಣೆ ಎದುರಿಸಿದ್ದರು. ಬಳಿಕ

ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ Read More »

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ

ರಾಯ್ಪುರ್: ಛತ್ತೀಸ್‌ಗಢದ ಕೊಂಟಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ತು ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಇಂದು ನಸುಕಿನ ಹೊತ್ತು ಸುಕ್ಮ ಸಮೀಪ ಭಂಡರ್‌ಪದರ್‌ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ. ನಕ್ಸಲರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ನಡೆಸಿದೆ. ಈ ವೇಳೆ 10 ನಕ್ಸಲರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ Read More »

ಎಲ್ಲರ ಚಿತ್ತ ನಾಳಿನ ಫಲಿತಾಂಶದತ್ತ

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ಮತ ಎಣಿಕೆ ನಾಳೆ ಕುತೂಹಲ ಕೆರಳಿಸಿದ ಕರ್ನಾಟಕದ ಮೂರು ಕ್ಷೇತ್ರಗಳು ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ, ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಇದರ ಜೊತೆಗೆ ನಡೆದಿರುವ ಕೆಲವು ರಾಜ್ಯಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ದೇಶದಲ್ಲಿ ಈಗಾಗಲೇ ಈ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭೆಗಳಿಗೆ, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರದ ಒಂದು ಲೋಕಸಭಾ ಕ್ಷೇತ್ರಕ್ಕೆ

ಎಲ್ಲರ ಚಿತ್ತ ನಾಳಿನ ಫಲಿತಾಂಶದತ್ತ Read More »

ಮಾರ್ಚ್​ 14ರಿಂದ ಮೇ 25ರ ತನಕ ಐಪಿಎಲ್‌ ಟೂರ್ನಿ

ಕ್ರಿಕೆಟ್‌ ಹಬ್ಬದ ವೇಳಾಪಟ್ಟಿ ಬಹಿರಂಗ ಮುಂಬಯಿ : 18ನೇ ಆವೃತ್ತಿಯ ಐಪಿಎಲ್‌ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್‌ಸೈಟ್‌ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್‌ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್​ಪಿಎನ್ ಟಿವಿ ವಾಹಿನಿಗೆ ಸೇರಿದ ಇಎಸ್​ಪಿಎನ್ ಕ್ರಿಕ್​ಇನ್ಫೋ ಎಂಬ ವೆಬ್‌ಸೈಟ್‌ ಐಪಿಎಲ್‌ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಇಎಸ್​ಪಿಎನ್ ಕ್ರಿಕ್​ಇನ್ಫೋ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್​ 14ರಿಂದ ಆರಂಭವಾಗಲಿದ್ದು, ಮೇ

ಮಾರ್ಚ್​ 14ರಿಂದ ಮೇ 25ರ ತನಕ ಐಪಿಎಲ್‌ ಟೂರ್ನಿ Read More »

error: Content is protected !!
Scroll to Top