ಸುದ್ದಿ

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮಾಡಿದ್ದ ಆರೋಪದಲ್ಲಿ ಹುರುಳಿಲ್ಲ ಎಂದು ವರದಿ ಸಲ್ಲಿಸಿದ ಲೋಕಾಯುಕ್ತ ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ಮಾಡಿದ್ದ 40 ಪರೆಂಟ್‌ ಕಮಿಷನ್‌ ಆರೋಪ ಸುಳ್ಳು ಎಂಬುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿ ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು […]

40 ಪರ್ಸೆಂಟ್‌ ಆರೋಪ ಸುಳ್ಳು : ಲೋಕಾಯುಕ್ತ ತನಿಖೆಯಲ್ಲಿ ಸಾಬೀತು Read More »

ಗೂಗಲ್‌ ಮ್ಯಾಪ್‌ ಅವಾಂತರ : ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ಸಾವು

ತಿರುವನಂತಪುರ: ಗೂಗಲ್‌ ಮ್ಯಾಪ್‌ ನಂಬಿ ಹೋಗಿ ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ರಂಗ ಕಲಾವಿದರು ದಾರುಣವಾಗಿ ಮೃತ್ಯುವಿಡಾಗಿರುವ ಘಟನೆ ಕೇರಳದಲ್ಲಿ ನಿನ್ನೆ ಸಂಭವಿಸಿದೆ. ಕಣ್ಣೂರು ಸಮೀಪದ ಕೆಲಕಮ್ ಬಳಿ ನಿನ್ನೆ ಈ ಅಪಘಾತ ಸಂಭವಿಸಿದೆ. ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದ ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್ ಸಾವನ್ನಪ್ಪಿರುವ ದುರ್ದೈವಿಗಳು.ಮಿನಿ ಬಸ್ ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬಸ್ ಚಲಾಯಿಸುತ್ತಿದ್ದರು. ಗೂಗಲ್‌ ಮ್ಯಾಪ್‌ ಎಲ್ಲೆಲ್ಲೋ ಕರೆದುಕೊಂಡು ಹೋಗಿ ಇಕ್ಕಟ್ಟಿನ ಮಾರ್ಗಕ್ಕೆ ತಲುಪಿಸಿದೆ. ಮಾರ್ಗ ಕಡಿದಾಗಿದ್ದರಿಂದ ಅಪಘಾತ

ಗೂಗಲ್‌ ಮ್ಯಾಪ್‌ ಅವಾಂತರ : ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ಸಾವು Read More »

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್‌ ವಿಚಾರಣೆ

ಖುದ್ದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ತನಿಖಾಧಿಕಾರಿಯಿಂದ ನೋಟಿಸ್‌ ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿ.3ರಂದು ವಿಚಾರಣೆಗೆ ಖುದ್ದು ಹಾಜರಾಗಲು ಸಚಿವ ಜಮೀರ್‌ ಅಹ್ಮದ್‌ ಖಾನ್‌ಗೆ ಲೋಕಾಯುಕ್ತ ನೋಟಿಸ್‌ ನೀಡಿದೆ. ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಜಮೀರ್‌ ಮನೆಗೆ ಹೋಗಿ ಲೋಕಾಯುಕ್ತ ಇನ್‌ಸ್ಪೆಕ್ಟ‌ರ್ ಸಚಿವರಿಗೆ ನೋಟಿಸ್‌ ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಎಸಿಬಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್‌ ವಿಚಾರಣೆ Read More »

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳು ಜೀವಂತ ದಹನ

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ಸಂಭವಿಸಿದ ಭೀಕರ ದುರಂತ ಲಖನೌ : ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ಹರಡಿದೆ. ಬೆಂಕಿ ಹೊತ್ತಿಕೊಂಡಾಗ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡತೊಡಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು,

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳು ಜೀವಂತ ದಹನ Read More »

ಟಿ-20 ಸರಣಿ : ಟೀಮ್‌ ಇಂಡಿಯಾ ಎದುರು ಸೋತು ಸುಣ್ಣವಾದ ದಕ್ಷಿಣ ಆಫ್ರಿಕ

ಅತ್ಯಧಿಕ ರನ್, ಹೀನಾಯ ಸೋಲು… ದಾಖಲೆಗಳ ಮೇಲೆ ದಾಖಲೆ ಬರೆದ ಭಾರತ ಜೋಹಾನ್ಸ್​ಬರ್ಗ್ : ಇಲ್ಲಿನ ವಾಂಡರರ್ಸ್‌ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ ನಡೆದ ಟಿ-20 ಸರಣಿಯ ನಾಲ್ಕನೇ ತಥಾ ಕೊನೆಯ ಪಂದ್ಯದಲ್ಲಿ ದಾಖಲೆ ರನ್‌ ಗಳಿಸಿ, ದಾಖಲೆ ಅಂತರದಿಂದ ದಕ್ಷಿಣ ಆಫ್ರಿಕವನ್ನು ಸೋಲಿಸುವ ಮೂಲಕ ಭಾರತ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆದು ಬೀಗಿದೆ. ದಕ್ಷಿಣ ಆಫ್ರಿಕ ವಿರುದ್ಧ ಟೀಮ್ ಇಂಡಿಯಾ 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 4 ಪಂದ್ಯಗಳ ಟಿ-20 ಸರಣಿಯನ್ನು ಭಾರತ

ಟಿ-20 ಸರಣಿ : ಟೀಮ್‌ ಇಂಡಿಯಾ ಎದುರು ಸೋತು ಸುಣ್ಣವಾದ ದಕ್ಷಿಣ ಆಫ್ರಿಕ Read More »

ವಕ್ಫ್‌ ವಿರುದ್ಧ ಬಿಜೆಪಿ ಒಂದು ತಿಂಗಳು ಅಭಿಯಾನ

ಸಂತ್ರಸ್ತರ ನೆರವಿಗೆ ವಾಟ್ಸಪ್‌ ಸಹಾಯವಾಣಿ, ವಾರ್‌ ರೂಂ ಸ್ಥಾಪನೆ ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳ ರೈತರಿಗೆ ವಕ್ಫ್​​ ಬೋರ್ಡ್ ನೋಟಿಸ್​ ನೀಡಿರುವ ವಿಚಾರವಾಗಿ ನವೆಂಬರ್​​ 25ರಿಂದ ಡಿಸೆಂಬರ್​ 25ರವರೆಗೆ ರಾಜ್ಯಾದ್ಯಂತ ಜನ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ.ವಕ್ಫ್‌ ಸಮಸ್ಯೆ ಎದುರಾಗಿರುವವರಿಗೆ ಮಾಹಿತಿ ನೀಡಲು ವಾರ್ ರೂಂ ಸ್ಥಾಪನೆ ಮಾಡುತ್ತಿದ್ದೇವೆ.

ವಕ್ಫ್‌ ವಿರುದ್ಧ ಬಿಜೆಪಿ ಒಂದು ತಿಂಗಳು ಅಭಿಯಾನ Read More »

ದರ್ಶನ್‌ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ

ಸೋಮವಾರದಿಂದ ಮೇಲ್ಮನವಿ ಸಲ್ಲಿಕೆ ಪ್ರಕ್ರಿಯೆ ಆರಂಭ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ.ಗೃಹ ಸಚಿವಾಲಯ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ

ದರ್ಶನ್‌ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿ Read More »

ಗಂಡಸರಿಗೂ ಸಿಗಲಿದೆಯೇ ಉಚಿತ ಪ್ರಯಾಣ ಭಾಗ್ಯ?

ಡಿ.ಕೆ. ಶಿವಕುಮಾರ್‌ ಹೇಳಿಕೆ ಹಿನ್ನೆಲೆಯಲ್ಲಿ ಗರಿಗೆದರಿದ ನಿರೀಕ್ಷೆ ಬೆಂಗಳೂರು: ಸರಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ಪುರುಷರಿಗೂ ಸಿಗಲಿದೆಯೇ? ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯೊಂದು ಈ ನಿಟ್ಟಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಳಿಕ ಗಂಡಸರಿಗೂ ಫ್ರೀ ಬಸ್‌ ಪ್ರಯಾಣ ಸೌಲಭ್ಯ ಸಿಗುವ ಸಾಧ್ಯತೆ ಇದೆ ಎಂಬ ಆಶಾಭಾವನೆ ಗರಿಗೆದರಿದೆ.ವಿಧಾನಸೌಧದಲ್ಲಿ ನಿನ್ನೆ ಔಪಚಾರಿಕವಾಗಿ

ಗಂಡಸರಿಗೂ ಸಿಗಲಿದೆಯೇ ಉಚಿತ ಪ್ರಯಾಣ ಭಾಗ್ಯ? Read More »

ಪೀಠ ಪತನಗೊಳ್ಳುವ ಭೀತಿಯಲ್ಲಿ ಬೆಚ್ಚಿಬೀಳುತ್ತಿರುವ ಸಿದ್ದರಾಮಯ್ಯ : ಸುನಿಲ್‌ ಕುಮಾರ್‌ ಲೇವಡಿ

ಉಪಚುನಾವಣೆ ಸೋಲಿನ ವಾಸನೆ ಬಡಿದು ಬಡಬಡಿಕೆ ಎಂದು ಟೀಕೆ ಕಾರ್ಕಳ : ಉಪಚುನಾವಣೆ ಫಲಿತಾಂಶ ಬರುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೀತಿಗೊಂಡಿದ್ದಾರೆ. ಪೀಠದಿಂದ ಪತನಗೊಳ್ಳುವ ಕನಸು ಬೀಳುತ್ತಿರುವುದರಿಂದ ಪದೇಪದೆ ಬೆಚ್ಚಿ ಬೀಳುತ್ತಿದ್ದಾರೆ. ನಿರಾಯಾಸವಾಗಿ ಸಿಕ್ಕಿದ ಮುಖ್ಯಮಂತ್ರಿ ಗಾದಿಯನ್ನು ತಮ್ಮದೇ ಪಕ್ಷದವರು ಇನ್ನು ಕೆಲವೇ ದಿನಗಳಲ್ಲಿ ಕಸಿದುಕೊಳ್ಳುತ್ತಾರೆ ಎಂಬ ವಾಸನೆ ಬಡಿಯುತ್ತಿದ್ದಂತೆ ಪ್ರತಿಪಕ್ಷದ ಹೆಗಲ ಮೇಲೆ ಬಂದೂಕು ಇಟ್ಟು ಸ್ವಪಕ್ಷೀಯರನ್ನು ಬೆದರಿಸಲು ಹೊರಟಿದ್ದಾರೆ ಎಂದು ಶಾಸಕ ಸುನೀಲ್‌ ಕುಮಾರ್‌ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ ತಲಾ

ಪೀಠ ಪತನಗೊಳ್ಳುವ ಭೀತಿಯಲ್ಲಿ ಬೆಚ್ಚಿಬೀಳುತ್ತಿರುವ ಸಿದ್ದರಾಮಯ್ಯ : ಸುನಿಲ್‌ ಕುಮಾರ್‌ ಲೇವಡಿ Read More »

ಬಂದೂಕು ತೋರಿಸಿ ಬೆದರಿಸಿ ಊಟ ಮಾಡಿಕೊಂಡು ಹೋಗಿದ್ದ ನಕ್ಸಲರು

ತೀವ್ರಗೊಂಡ ಕೂಂಬಿಂಗ್‌ ಕಾರ್ಯಾಚರಣೆ, ವಾಹನ ತಪಾಸಣೆ ಕೊಪ್ಪ: ಕೊಪ್ಪದ ಕಾಡಂಚಿನ ಗ್ರಾಮದ ಮನೆಯೊಂದಕ್ಕೆ ಭೇಟಿ ನೀಡಿದ್ದ ನಕ್ಸಲರು ಬಂದೂಕು ತೋರಿಸಿ ಮನೆಯವರನ್ನು ಬೆದರಿಸಿ ಅಡುಗೆ ತಯಾರಿಸಲು ಹೇಳಿ ಊಟ ಮಾಡಿಕೊಂಡು ಹೋಗಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಡೇಗುಂದಿ ಗ್ರಾಮದ ಸುಬ್ಬೇ ಗೌಡ ಎಂಬವರ ಮನೆಯಲ್ಲಿ ನಕ್ಸಲರಿಗೆ ಸೇರಿದ್ದು ಎನ್ನಲಾಗಿರುವ ಮೂರು ಬಂದೂಕುಗಳು ಸಿಕ್ಕಿದ ಬಳಿಕ ಪೊಲೀಸರು ಮನೆಯವರನ್ನು ವಿಚಾರಣೆಗೊಳಪಡಿಸಿದ್ದು, ಆಗ ಮನೆಯವರು ತಮ್ಮನ್ನು ಬಂದೂಕು ತೋರಿಸಿ ಹೆದರಿಸಿರುವ ವಿಚಾರ ತಿಳಿಸಿದ್ದಾರೆ.ನಕ್ಸಲರ ಓಡಾಟದ

ಬಂದೂಕು ತೋರಿಸಿ ಬೆದರಿಸಿ ಊಟ ಮಾಡಿಕೊಂಡು ಹೋಗಿದ್ದ ನಕ್ಸಲರು Read More »

error: Content is protected !!
Scroll to Top