ಸುದ್ದಿ

ಪುರುಷ ಮೃಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ಪ್ರಯುಕ್ತ ಮಹಾಭಾರತ ಸರಣಿಯ ಪುರುಷಮೃಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಡಿ.ಕೆ. ಆಚಾರ್ಯ ಅಲಂಕಾರು. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೆರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಜಯರಾಮ ಬಲ್ಯ (ಶ್ರೀ ಕೃಷ್ಣ), ಬಾಲಕೃಷ್ಣ ಕೇಪುಳು (ಧರ್ಮರಾಯ), ಗುಡ್ಡಪ್ಪ ಬಲ್ಯ (ಭೀಮ), ಜಯರಾಮ ಭಟ್ ದೇವಸ್ಯ (ಹನುಮಂತ), ಹರೀಶ ಆಚಾರ್ಯ ಬಾರ್ಯ (ಪುರುಷ ಮೃಗ), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಅರ್ಜುನ) […]

ಪುರುಷ ಮೃಗ ತಾಳಮದ್ದಳೆ Read More »

ನೂತನ ಸಹಾಯಕ ಆಯುಕ್ತರಿಗೆ ಸುಳ್ಯದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಪರವಾಗಿ ಸ್ವಾಗತ

ಸುಳ್ಯ: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಹಾಗೂ ದಂಡಾಧಿಕಾರಿಯಾಗಿರುವ ಜುಬಿನ್ ಮೊಹಪಾತ್ರ ಅವರು ಸುಳ್ಯಕ್ಕೆ ಭೇಟಿ ನೀಡಿದ ಸಂಧರ್ಭ ಗ್ರಾಮ ಪಂಚಾಯತ್ ಜಿಲ್ಲಾ ಒಕ್ಕೂಟದ ವತಿಯಿಂದ ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಉಬರಡ್ಕ ಅವರು ಸ್ಥಳೀಯ ಜನಪ್ರತಿನಿಧಿಗಳ ಪರವಾಗಿ ಸ್ವಾಗತಿಸಿದರು. ಪುತ್ತೂರು, ಕಡಬ, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿರುವ ಜುಬಿನ್ ಮೊಹಪಾತ್ರ ಅವರು 2021ರ ಬ್ಯಾಚಿನ ಐ.ಎ.ಎಸ್. ಅಧಿಕಾರಿ.

ನೂತನ ಸಹಾಯಕ ಆಯುಕ್ತರಿಗೆ ಸುಳ್ಯದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಪರವಾಗಿ ಸ್ವಾಗತ Read More »

ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಕೇಸು | ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ

ಮಂಗಳೂರು: ಹಿಂದೂ ಸಮಾಜದ ಮಾರ್ಗದರ್ಶಕರಾಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದುರುದ್ದೇಶ ಪೂರ್ವಕವಾಗಿ ಕೇಸು ದಾಖಲಿಸಿರುವುದಕ್ಕೆ ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ದ.ಕ. ಮುಸ್ಲಿಂ ಸಮಾಜದ ಮಹಿಳೆಯರಿಗೆ ಆದ ಅನ್ಯಾಯ ಹಾಗೂ ಮೋದಿ ಸರ್ಕಾರ ತ್ರಿವಳಿ ತಲಾಕ್ ನಿಷೇಧ ಮಾಡಿದ ಬಗ್ಗೆ ಡಾ,ಭಟ್ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ಇದೇ ಹೇಳಿಕೆಯನ್ನು ತಿರುಚಿ ಅಲ್ಪಸಂಖ್ಯಾತರನ್ನು ಓಲೈಸುವ ಉದ್ದೇಶದಿಂದ ಕೇಸು ದಾಖಲಿಸಲಾಗಿದೆ. ಸಿದ್ದರಾಮಯ್ಯ

ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಕೇಸು | ಸಂಸದ ನಳಿನ್‌ಕುಮಾರ್ ಕಟೀಲ್ ಖಂಡನೆ Read More »

ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ | 957.39 ಕೋಟಿ ರೂ. ವೆಚ್ಚದ 2 ಯೋಜನೆಗಳಿಗೆ ಅನುಮೋದನೆ

ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ  613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ  ಚಾರ್ಮಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73  ಕೋಟಿ

ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ | 957.39 ಕೋಟಿ ರೂ. ವೆಚ್ಚದ 2 ಯೋಜನೆಗಳಿಗೆ ಅನುಮೋದನೆ Read More »

ಸುಬ್ರಹ್ಮಣ್ಯದಲ್ಲಿ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ.                                 

ಸುಬ್ರಹ್ಮಣ್ಯ: ದಿನನಿತ್ಯ ಸಾವಿರಾರು ಭಕ್ತಾದಿಗಳು ಬರುವ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಾದಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ 24 * 7 ಆಸ್ಪತ್ರೆ ಸೇವೆಗಾಗಿ ವಿಧಾನಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆ ಪದವು ಅವರು ಮನವಿ ಸಲ್ಲಿಸಿದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪ್ರಸ್ತುತ ಇರುವ ಆಸ್ಪತ್ರೆಯ ಪರಿಸ್ಥಿತಿಯನ್ನು ವಿವರವಾಗಿ ವಿವರಿಸಿ ಶ್ರೀ ಕ್ಷೇತ್ರಕ್ಕೆ

ಸುಬ್ರಹ್ಮಣ್ಯದಲ್ಲಿ 24 * 7 ಆಸ್ಪತ್ರೆ ಸೇವೆಗಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ.                                  Read More »

ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು !

ಬೆಳ್ತಂಗಡಿ: ಮರ ಕಡಿಯುವ ಸಂದರ್ಭ ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸಾವ್ಯ ಎಂಬಲ್ಲಿ ಬುಧವಾರ ನಡೆದಿದೆ. ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್‌ ಪೂಜಾರಿ (46) ಮೃತಪಟ್ಟವರು. ಮನೆಗೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಅವರು ಸಹೋದರ ಪ್ರಮೋದ್ ಜೊತೆ ಸೇರಿ ಕಟ್ಟಿಂಗ್ ಮೆಷಿನ್ ಮೂಲಕ ಮರ ಕಡಿಯುತ್ತಿದ್ದರು. ಈ ವೇಳೆ ಮೆಷಿನ್ ಪ್ರಶಾಂತ್ ಹಿಡಿತ ತಪ್ಪಿ ಕೆಳಕ್ಕೆ ಬಿದ್ದಿದ್ದು ಚಲನೆ ಸ್ಥಿತಿಯಲ್ಲಿ

ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು ! Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಒತ್ತಾಯ..

ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದ್ದು, ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಒತ್ತಾಯ.. Read More »

ಹೆಂಡತಿ-ಮಗಳಿಗೆ ಹಲ್ಲೆ | ಆರೋಪಿ ಬಂಧನ

ಶಿಶಿಲ: ಹೆಂಡತಿ ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು, ಇದೀಗ ಆರೋಪಿ ಪತಿಯನ್ನು ಬಂಧಿಸಲಾಗಿದೆ. ಶಿಶಿಲ ಕೋಟಬಾಗಿಲು ನಿವಾಸಿ ಸುರೇಶ್‍ ಬಂಧಿತ ಆರೋಪಿ. ತನ್ನ ಹೆಂಡತಿ ಮುಖದ ಭಾಗಕ್ಕೆ ಕಚ್ಚಿದ್ದು, ಕಣ್ಣಿಗೆ ಕೋಲಿನಿಂದ ಹೊಡೆದು ಕಣ್ಣನ್ನು ಸಂಪೂರ್ಣ ಹಾನಿಗೊಳ್ಳಿಸಿದ್ದಾರೆ. ಅಲ್ಲದೆ ಮಗಳಿಗೆ ತಲೆ ಭಾಗಕ್ಕೆ ಹೊಡೆದಿದ್ದು, ಹೆಂಡತಿ-ಮಗಳು ಇಬ್ಬರೂ ಪ್ರಾಣ ಭಯದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್‍ಗೆ ಫೋನಾಯಿಸಿ ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಿದ್ದರು. ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಗೆ

ಹೆಂಡತಿ-ಮಗಳಿಗೆ ಹಲ್ಲೆ | ಆರೋಪಿ ಬಂಧನ Read More »

ಕೇರಳದಲ್ಲಿ ಏರುತ್ತಿರುವ ಕೋವಿಡ್ ಪ್ರಕರಣ | ಗಡಿ ಭಾಗಗಳಲ್ಲಿ ತಪಾಸಣೆ

ಮಂಗಳೂರು: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗಡಿ ಪ್ರದೇಶವಾದ ಪೆರುಂಬಾಡಿ ಚೆಕ್‌ಪೋಸ್ಟ್‌ನಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ಆರಂಭಿಸಲಾಗಿದೆ. ಕೇರಳದಿಂದ ಬರುವ ಖಾಸಗಿ ವಾಹನಗಳನ್ನು ತಡೆದು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ನಿರೀಕ್ಷಣಾಧಿಕಾರಿ ಚಿರಂಜೀವಿ ಈ ಕುರಿತು ಪ್ರತಿಕ್ರಿಯಿಸಿ’ ಇಲಾಖೆಯ ಸೂಚನೆಯಂತೆ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿನ ಲಕ್ಷಣ ಕಂಡುಬಂದಲ್ಲಿ ಅವರಿಗೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗುತ್ತದೆ. ಇಲ್ಲಿಯವರೆಗೆ ನಡೆದ ತಪಾಸಣೆಯ ಸಂದರ್ಭ ಯಾರಿಗೂ ಸೋಂಕಿನ

ಕೇರಳದಲ್ಲಿ ಏರುತ್ತಿರುವ ಕೋವಿಡ್ ಪ್ರಕರಣ | ಗಡಿ ಭಾಗಗಳಲ್ಲಿ ತಪಾಸಣೆ Read More »

ಸಿಟಿ ಬಸ್‍ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಉಳ್ಳಾಲ: ಬಸ್ ಚಾಲಕರೊಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಆತ್ಮಹತ್ಯೆ ಮಾಡಿಕೊಂಡವರು. ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಜಗದೀಶ್‍ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕ್, ಪರ್ಸ್ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪರ್ಸ್‌ನಲ್ಲಿ ಚಿನ್ನ ಅಡವಿಟ್ಟ

ಸಿಟಿ ಬಸ್‍ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ Read More »

error: Content is protected !!
Scroll to Top