ಸುದ್ದಿ

ಅಮೆರಿಕ ಚುನಾವಣೆ : ಗೆಲುವಿನತ್ತ ಡೊನಾಲ್ಡ್‌ ಟ್ರಂಪ್‌ ನಾಗಾಲೋಟ; ಕಮಲಾ ಹ್ಯಾರಿಸ್‌ಗೆ ಹಿನ್ನಡೆ

ತವರು ರಾಜ್ಯ ನ್ಯೂಯಾರ್ಕ್‌ನಲ್ಲಿ ಟ್ರಂಪ್‌ಗೆ ಮುಖಭಂಗ ನ್ಯೂಯಾರ್ಕ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸುವ ಸನಿಹದಲ್ಲಿದ್ದಾರೆ. ಮಧ್ಯಾಹ್ನದ ತನಕದ ಫಲಿತಾಂಶದಲ್ಲಿ ಟ್ರಂಪ್‌ ಗೆಲುವಿನತ್ತ ನಾಗಾಲೋಟದಲ್ಲಿದ್ದಾರೆ. ಎದುರಾಳಿ ಕಮಲಾ ಹ್ಯಾರಿಸ್‌ ಕೆಲವು ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿ ಗೆಲುವಿನಿಂದ ದೂರ ಸರಿಯುತ್ತಿದ್ದಾರೆ. ಚುನಾವಣೆಯಲ್ಲಿ ಹಿನ್ನಡೆಯಾಗುತ್ತಿದ್ದಂತೆ ಡೆಮಾಕ್ರಟಿಕ್‌ ಅಭ್ಯರ್ಥಿ ಕಮಲಾ ಹ್ಯಾರಿಸ್‌ ತಮ್ಮ ಚುನಾವಣಾ ಭಾಷಣವನ್ನು ರದ್ದುಗೊಳಿಸಿದ್ದಾರೆ.ಅನಿಶ್ಚಿತ ಎಂದು ಭಾವಿಸಲಾಗಿದ್ದ ಎಲ್ಲ ಏಳು ರಾಜ್ಯಗಳಲ್ಲಿ ಟ್ರಂಪ್ ಎದುರಾಳಿ ಕಮಲಾ ಹ್ಯಾರಿಸ್ […]

ಅಮೆರಿಕ ಚುನಾವಣೆ : ಗೆಲುವಿನತ್ತ ಡೊನಾಲ್ಡ್‌ ಟ್ರಂಪ್‌ ನಾಗಾಲೋಟ; ಕಮಲಾ ಹ್ಯಾರಿಸ್‌ಗೆ ಹಿನ್ನಡೆ Read More »

ಆಯುಷ್ಮಾನ್‌ ವಯ ವಂದನಾ : ಹಿರಿಯರಿಗೆ ವರದಾನ

70 ವರ್ಷ ಮೇಲ್ಪಟ್ಟವರಿಗೆ ಉಚಿತ ವೈದ್ಯಕೀಯ ಶುಶ್ರೂಷೆ ಸೌಲಭ್ಯ ಬೆಂಗಳೂರು: 70 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಪ್ರಧಾನಿ ನರೇಂದ್ರ ಕಳೆದ ವಾರ ಚಾಲನೆ ನೀಡಿದರು. ಇದು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ವಿಸ್ತರಿತ ಆರೋಗ್ಯ ವಿಮೆ ಯೋಜನೆಯಾಗಿದೆ. ಈಗ 70 ವರ್ಷಕ್ಕೂ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಆಯುಷ್ಮಾನ್ ವಯ ವಂದನಾ ಕಾರ್ಡ್ ಪಡೆಯಲು ಅರ್ಹರಾಗಿದ್ದಾರೆ. ಈ ಯೋಜನೆಯಲ್ಲಿ ಹಿರಿಯ ನಾಗರಿಕರು 5 ಲಕ್ಷ

ಆಯುಷ್ಮಾನ್‌ ವಯ ವಂದನಾ : ಹಿರಿಯರಿಗೆ ವರದಾನ Read More »

ನ.20 : ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ; ಸಚಿವರೇ ಲಂಚ ವಸೂಲಿ ಮಾಡಿದ ಆರೋಪ ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿರೋಧಿಸಿ ನ.20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ.ಈ ಕುರಿತು ಕರ್ನಾಟಕ ಫೆಡರೇಷನ್‌ ಆಫ್‌ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಎಸ್‌.ಗುರುಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಗೋವಿಂದರಾಜ್‌ ಹೆಗ್ಡೆ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾಗೂ ಇಲಾಖೆಯಲ್ಲಿನ ಭ್ರಷ್ಟಾಚಾರ ತೊಡೆದುಹಾಕಲು ಮುಖ್ಯಮಂತ್ರಿ ಹಾಗೂ ಅಬಕಾರಿ

ನ.20 : ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌ Read More »

ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌

ತಹಶೀಲ್ದಾರ್‌ ಕಚೇರಿಯಲ್ಲೇ ಸಾವಿಗೆ ಶರಣಾಗಿದ್ದ ಎಸ್‌ಡಿಎ ರುದ್ರಣ್ಣ ಬೆಳಗಾವಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಈಗ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಂಕಟ ತಂದೊಡ್ಡಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪಿಎ ಮತ್ತು ಬೆಳಗಾವಿಯ ತಹಶೀಲ್ದಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ.ರುದ್ರಣ್ಣ ಅವರ ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ತಹಶೀಲ್ದಾರ್‌ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ವಿರುದ್ಧ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ

ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪಿಎ ವಿರುದ್ಧ ಕೇಸ್‌ Read More »

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ

ರಾತ್ರಿ ವಿಮಾನ ನಿಲ್ದಾಣದಲ್ಲೇ ಆಪ್ತ ಸಚಿವರ ಜೊತೆ ರಹಸ್ಯ ಸಮಾಲೋಚನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತದ ತನಿಖೆ ಎದುರಿಸಲಿದ್ದಾರೆ. ಈಗಾಗಲೇ ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ಹೆಸರಿಸಲಾಗಿರುವ ಸಿದ್ದರಾಮಯ್ಯನವರಿಗೆ ಇಂದು ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದ್ದು, ಅದರಂತೆ ಉಪಚುನಾವಣೆ ಪ್ರಚಾರದ ನಡುವೆಯೇ ಸಿದ್ದರಾಮಯ್ಯ

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ Read More »

ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ ಕರೆ

5 ಕೋಟಿ ರೂ. ಕೊಟ್ಟು, ದೇವಸ್ಥಾನಕ್ಕೆ ಹೋಗಿ ಕ್ಷಮೆ ಯಾಚಿಸದಿದ್ದರೆ ಫಿನಿಶ್‌ ಎಂದು ಧಮಕಿ ಮುಂಬಯಿ : ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಈ ಸಲ ಬೆದರಿಕೆ ಹಾಕಿದವ ಲಾರೆನ್ಸ್‌ ಬಿಷ್ಣೋಯ್‌ಯ ಸಹೋದರನ ಹೆಸರು ಹೇಳಿಕೊಂಡಿದ್ದಾನೆ. ಇದರೊಂದಿಗೆ ಕಳೆದ 10 ದಿನಗಳಲ್ಲಿ ಸಲ್ಮಾನ್‌ಗೆ ಮೂರು ಬೆದರಿಕೆಗಳು ಬಂದಿವೆ.ಮುಂಬಯಿ ಟ್ರಾಫಿಕ್‌ ಪೊಲೀಸರಿಗೆ ಕರೆ ಬಂದಿದ್ದು, ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ.

ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ ಕರೆ Read More »

ವಕ್ಫ್‌ ಕಾಯ್ದೆ ನೆಹರು ಸೃಷ್ಟಿ : ಶೋಭಾ ಕರಂದ್ಲಾಜೆ

ಮುಸ್ಲಿಮರ ಓಲೈಕೆಗಾಗಿ ಹಿಂದು ಮಠ, ಮಂದಿರಗಳನ್ನು ಸರಕಾರ ವಕ್ಫ್‌ಗೆ ಸೇರಿಸುತ್ತಿದೆ ಎಂದು ಆರೋಪ ವಿಜಯಪುರ: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. 1954-55ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿ ಅದಕ್ಕೆ ಹೆಚ್ಚಿನ ಅಧಿಕಾರ ನೀಡಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರ‌ಂದ್ಲಾಜೆ ಹೇಳಿದ್ದಾರೆ.ವಕ್ಫ್ ಆಸ್ತಿ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಸೋಮಚಾರ ವಿಜಯಪುರದಲ್ಲಿ ಮಾತನಾಡಿದ ಅವರು, ವಕ್ಫ್ ಮಂಡಳಿ ಅಸಾಂವಿಧಾನಿಕ ಸಂಸ್ಥೆಯಾಗಿದ್ದು, ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣದ ಭಾಗವಾಗಿ ಮಾಜಿ

ವಕ್ಫ್‌ ಕಾಯ್ದೆ ನೆಹರು ಸೃಷ್ಟಿ : ಶೋಭಾ ಕರಂದ್ಲಾಜೆ Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅವಧಿ ನ.30ರ ತನಕ ವಿಸ್ತರಣೆ

ಇನ್ನೂ ಒಂದೂವರೆ ಕೋಟಿ ವಾಹನಗಳಿಗೆ ನಂಬರ್‌ ಪ್ಲೇಟ್‌ ಅಳವಡಿಕೆಯಾಗಿಲ್ಲ ಬೆಂಗಳೂರು: ಸಾರಿಗೆ ಇಲಾಖೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸುವ ಗಡುವನ್ನು ಮತ್ತೊಮ್ಮೆ ವಿಸ್ತರಿಸಿ ವಾಹನ ಮಾಲಕರಿಗೆ ತುಸು ನೆಮ್ಮದಿ ನೀಡಿದೆ. ಈಗಾಗಲೇ ಮೂರಕ್ಕೂ ಅಧಿಕ ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಆದರೆ ಇನ್ನೂ ಸುಮಾರು 1.5 ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಬಾಕಿ ಇರುವುದರಿಂದ ಅಂತಿಮ ಗಡುವನ್ನು ವಿಸ್ತರಣೆ ಮಾಡಲಾಗಿದೆ.ಸಾರಿಗೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ. ಎಸ್. ಎಚ್‌ಎಸ್‌ಆರ್‌ಪಿ ಗಡುವನ್ನು

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅವಧಿ ನ.30ರ ತನಕ ವಿಸ್ತರಣೆ Read More »

ಮುಡಾ ಹಗರಣ : ನಾಳೆ ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ವಿಚಾರಣೆ

40 ವರ್ಷದ ರಾಜಕಾರಣದಲ್ಲಿ ಮೊದಲ ಸಲ ಹಗರಣದ ಕೇಸಿನಲ್ಲಿ ವಿಚಾರಣೆ ಎದುರಿಸಲಿರುವ ಸಿದ್ದರಾಮಯ್ಯ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದುಕೊಂಡ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನ.6ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.ಮುಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಆಗಲೇ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆ ಎದುರಿಸಲಿರುವುದು ಖಾತ್ರಿಯಾಗಿತ್ತು.ಸಿದ್ದರಾಮಯ್ಯನವರ 40

ಮುಡಾ ಹಗರಣ : ನಾಳೆ ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ವಿಚಾರಣೆ Read More »

ಈ ಸೀಸನ್‌ನಲ್ಲಿ ನಡೆಯಲಿವೆ 40 ಲಕ್ಷ ಮದುವೆಗಳು!

ಮದುವೆಯೊಂದರಿಂದಲೇ 6 ಲಕ್ಷ ಕೋಟಿ ರೂ. ವಹಿವಾಟು ಬೆಂಗಳೂರು : ಮಳೆಗಾಲ ಮುಗಿದದ್ದೇ ತಡ ಮದುವೆ ಸೀಸನ್‌ ಶುರುವಾಗಿದೆ. ಈಗ ಮದುವೆ ಕೂಡ ಪ್ರತಿಷ್ಠೆಯ ಸಂಕೇತವಾಗಿದೆ. ಎಷ್ಟು ದುಡ್ಡು ಇದ್ದರೂ ಮದುವೆ ಖರ್ಚಿಗೆ ಸಾಕಾಗುವುದಿಲ್ಲ ಎಂಬ ಪರಿಸ್ಥಿತಿಯಿದೆ. ಸಾಲಸೋಲ ಮಾಡಿಯಾದರೂ ಅದ್ದೂರಿಯಾಗಿ ಮದುವೆಯಾಗುವ ಶೋಕಿ ಎಲ್ಲೆಡೆ ಕಾಣಿಸುತ್ತದೆ. ಮಂಟಪದಲ್ಲಿ ಶಾಸ್ತ್ರೋಕ್ತವಾಗಿ ನಡೆಯುತ್ತಿದ್ದ ಮದುವೆಗಳು ಈಗ ಈವೆಂಟ್‌ ಮ್ಯಾನೇಜ್‌ಮೆಂಟ್‌ ಬದಲಾಗಿವೆ. ಎಂಗೇಜ್‌ಮೆಂಟ್‌ನಿಂದ ಹಿಡಿದು ಮೊದಲ ರಾತ್ರಿಯ ತನಕದ ಮದುವೆಗೆ ಸಂಬಂಧಪಟ್ಟ ಎಲ್ಲ ವಿಚಾರಗಳನ್ನು ನಿರ್ವಹಿಸುವ ಈವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಗಳು

ಈ ಸೀಸನ್‌ನಲ್ಲಿ ನಡೆಯಲಿವೆ 40 ಲಕ್ಷ ಮದುವೆಗಳು! Read More »

error: Content is protected !!
Scroll to Top