ಬಜೆಟ್ ಹೈಲೈಟ್ಸ್ : ಮಲ್ಪೆಯಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ
ಕರಾವಳಿಗೆ ಸಿದ್ದರಾಮಯ್ಯ ಕೊಡುಗೆಗಳು ಬೆಂಗಳೂರು: ಉಡುಪಿ ಮಲ್ಪೆಯಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್, ಮೈಸೂರಿನಲ್ಲಿ ಹೈಟೆಕ್ ಮತ್ಸ್ಯದರ್ಶಿನಿ, ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ…ಇವು ಕರಾವಳಿಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೊಟ್ಟಿರುವ ಕೊಡುಗೆಗಳು.ಮಲ್ಟಿ-ಲೆವೆಲ್ ಪಾರ್ಕಿಂಗ್ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು. […]