ಸುದ್ದಿ

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !!

ಬೆಳ್ತಂಗಡಿ: ಸರಕಾರಿ ಜಾಗದ ಒತ್ತುವರಿಯನ್ನು ತೆರವು ಗೊಳಿಸಲು ತೆರಳಿದ್ದ ತಹಶೀಲ್ದಾರರ ಮೇಲೆ ತಂಡವೊಂದು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ  ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗ ಒತ್ತುವರಿಯಾಗಿರುವ ಕುರಿತು ಮಾಹಿತಿ ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆಂದು ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಜಾಗವನ್ನು […]

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !! Read More »

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು

ಪುತ್ತೂರು: ಚಿನ್ನದ ಸರ ಖರೀದಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬ್ಯಾಗ್‍ ಕಳವಾದ ಘಟನೆ ನಡೆದಿದೆ. ಪುತ್ತೂರಿನ ಜಯರಾಮ ಭಟ್‍ ಪಿ. ಎಂಬವರು ಮಂಗಳೂರಿನ ಜ್ಯುವೆಲ್ಲರಿ ಒಂದರಿಂದ 1.60 ಲಕ್ಷ ರೂ. ಮೌಲ್ಯದ ಚಿನ್ನ ಖರೀದಿಸಿ ಬ್ಯಾಗ್‍ನಲ್ಲಿರಿಸಿ ಪುತ್ತೂರಿಗೆ ಕೆ ಎಸ್‍ ಆರ್ ಟಿಸಿ ಬಸ್ ಮೂಲಕ ಬರುತ್ತಿದ್ದಾಗ ಮಂಗಳೂರು ಬಂಟ್ಸ್ ಹಾಸ್ಟೇಲ್ ತಲುಪುತ್ತಿದ್ದಂತೆ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಚಿಲ್ಲರೆ ಹಣ ಬೀಳಿಸಿ ಅವರ ಗಮನ ಬೇರೆಡೆ ಸೆಳೆದಿದ್ದಾಳೆ. ಆ ಬಳಿಕ ಮಹಿಳೆ ಇನ್ನೋರ್ವ ಮಹಿಳೆಯೊಂದಿಗೆ ಬಸ್ಸಿನಿಂದ ಇಳಿದು

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು Read More »

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ | ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಭಿನ್ನ ಸಮುದಾಯದ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಘಟನೆ ಮಂಗಳೂರು ಕದ್ರಿ ಪಾರ್ಕ್‍ ನಲ್ಲಿ ನಡೆದಿದ್ದು ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶುಕ್ರವಾರ ಮಂಗಳೂರಿನ ಕಾಲೇಜೊಂದರ ಯುವಕ ಹಾಗೂ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿ ಜತೆಯಾಗಿ ಬಸ್‍ ನಲ್ಲಿ ಮಂಗಳೂರಿಗೆ ಬಂದಿದ್ದರು. ಬಸ್‍ನಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದ ತಂಡ ಕದ್ರಿ ಪಾರ್ಕ್‍ ತಲುಪುತ್ತಿದ್ದಂತೆ ರಸ್ತೆಯಲ್ಲಿ ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದೆ ಎನ್ನಲಾಗಿದೆ. ಈ ಸಂದರ್ಭ ಸ್ಥಳದಲ್ಲಿ ಜನ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ | ಮೂವರು ಪೊಲೀಸ್ ವಶಕ್ಕೆ Read More »

ಕರಾವಳಿ ಕಂಬಳಕ್ಕೆ ಅನುದಾನ: ಶಾಸಕರ ಮನವಿಗೆ ಸ್ಪಂದನೆ

ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ 5 ಲಕ್ಷ ರೂ. ಅನುದಾನ ನೀಡುವಂತೆ ಪುತ್ತೂರು ಶಾಸಕ ಅಶೋಕ್ ರೈ ಪ್ರವಾಸೋದ್ಯಮ , ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌ಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಶುಕ್ರವಾರ ಭೇಟಿಯಾದ ಶಾಸಕರು, ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪುರಾತನ ಕಾಲದಿಂದಲೂ ಕಂಬಳ ಕ್ರೀಡೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಕಂಬಳ ತುಳುನಾಡಿನ

ಕರಾವಳಿ ಕಂಬಳಕ್ಕೆ ಅನುದಾನ: ಶಾಸಕರ ಮನವಿಗೆ ಸ್ಪಂದನೆ Read More »

ನೇಣು ಬಿಗಿದು ಮಹಿಳೆ ಆತ್ಮಹತ್ಯೆ !

ಬೆಳ್ತಂಗಡಿ: ಉದ್ಯಮಿಯೋರ್ವರ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಕುಬಲಾಜೆ ನಿವಾಸಿ ಉದ್ಯಮಿ ಸುನಿಲ್ ಎಂಬವರ ಪತ್ನಿ ಕಾವ್ಯ (32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಮಧ್ಯಾಹ್ನ ಮನೆಯಲ್ಲಿ ಈ ಘಟನೆ ನಡೆದಿದೆ. ಮೃತರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ನೇಣು ಬಿಗಿದು ಮಹಿಳೆ ಆತ್ಮಹತ್ಯೆ ! Read More »

ವಿದ್ಯುತ್ ತಂತಿ ಸವರಿದ ಲಾರಿ | ರಸ್ತೆಗಡ್ಡವಾಗಿ ಬಿದ್ದ ಎರಡು ಕಂಬ : ವಿದ್ಯುತ್ ಪೂರೈಕೆ ಸ್ಥಗಿತ

ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳನ್ನು ಎಳೆದಾಡಿದ ಪರಿಣಾಮ ಎರಡು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎಂಬಲ್ಲಿ ತಡರಾತ್ರಿ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ರಾತ್ರಿ, ಲಾರಿಯ ಚಾಲಕ ಮೇಲಿರುವ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ‌ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದುವರಿದಿದ್ದಾನೆ. ಪರಿಣಾಮ ತಂತಿಗಳೊಂದಿಗೆ ಎರಡು ಕಂಬಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಈ ಸಂದರ್ಭ ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು.

ವಿದ್ಯುತ್ ತಂತಿ ಸವರಿದ ಲಾರಿ | ರಸ್ತೆಗಡ್ಡವಾಗಿ ಬಿದ್ದ ಎರಡು ಕಂಬ : ವಿದ್ಯುತ್ ಪೂರೈಕೆ ಸ್ಥಗಿತ Read More »

ನಿವೃತ್ತ ರೈಲ್ವೇ ಉದ್ಯೋಗಿ ಆತ್ಮಹತ್ಯೆ !

ಕಡಬ: ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ಕೋಡಿಂಬಾಳದಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62) ಆತ್ಮಹತ್ಯೆ ಮಾಡಿಕೊಂಡವರು. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ. ಮೃತರು ಕೋಡಿಂಬಾಳದ ಅಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ ತೊಡಗಿಕೊಂಡಿದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನಿವೃತ್ತ ರೈಲ್ವೇ ಉದ್ಯೋಗಿ ಆತ್ಮಹತ್ಯೆ ! Read More »

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿ | ಪೊಲೀಸರಿಂದ ವಿಚಾರಣೆ

ಧರ್ಮಸ್ಥಳ: ಅನ್ಯ ಕೋಮಿನ ಜೋಡಿಯೊಂದು ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರು ಮೂಲದ ಅನ್ಯಕೋಮಿನ ಯುವಕ ಹಾಗೂ ಹಿಂದೂ ಯುವತಿ ಎಂದು ಗೊತ್ತಾಗಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಯುವಕ-ಯುವತಿಯನ್ನು ಠಾಣೆಗೆ ಕರೆದೊಯ್ದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದ ಅನ್ಯಕೋಮಿನ ಜೋಡಿ | ಪೊಲೀಸರಿಂದ ವಿಚಾರಣೆ Read More »

ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ !

ಬೆಳ್ತಂಗಡಿ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣು ಬಿಗಿದು ಆತ್ಚಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಪೆರ್ಲದಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೋಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು. ಯೋಗೀಶ್ ಪೂಜಾರಿ ಅವರ ಮಗ ಯಶ್ಚಿತ್ (14) ಕ್ಷುಲ್ಲಕ ವಿಚಾರದಲ್ಲಿ 13 ದಿನಗಳ ಹಿಂದೆ ತಾಯಿಯ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜ.14 ರಂದು ಆತನ ಉತ್ತರಕ್ರಿಯೆ ನಡೆದಿತ್ತು. ಇದೀಗ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮಗನ ಆತ್ಮಹತ್ಯೆಯಿಂದ ನೊಂದು ತಂದೆಯೂ

ಮಗ ಆತ್ಮಹತ್ಯೆ ಮಾಡಿಕೊಂಡ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ ! Read More »

ಕಟ್ಟೆ ಇಲ್ಲದ ಬಾವಿಗೆ ಬಿದ್ದು ಬಾಲಕ ಮೃತ್ಯು ! | ಪಕ್ಕದ ಮನೆಗೆ ಆಡಲು ಹೊದಾಗ ನಡೆಯಿತು ಘಟನೆ

ಬೆಳ್ತಂಗಡಿ: ಪಕ್ಕದ ಮನೆಗೆ ಹೋದ ಬಾಲಕ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಮೊಹಮ್ಮದ್ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾಸ್‍ (7) ಮೃತಪಟ್ಟ ಬಾಲಕ. ಎರಡನೇ ತರಗತಿ ವಿದ್ಯಾರ್ಥಿಯಾಗಿರುವ ಅನಾಸ್ ಇಂದು ಪಕ್ಕದ ಮನೆಗೆ ಆಟವಾಡಲು ತೆರಳಿದ್ದ, ಅಲ್ಲಿರುವ ಕಟ್ಟೆ ಇಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ. ಮನೆಯವರು ತಕ್ಷಣ ಮಗುವನ್ನು ಬಾವಿಯಿಂದ ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದಾಗಲೇ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕಟ್ಟೆ ಇಲ್ಲದ ಬಾವಿಗೆ ಬಿದ್ದು ಬಾಲಕ ಮೃತ್ಯು ! | ಪಕ್ಕದ ಮನೆಗೆ ಆಡಲು ಹೊದಾಗ ನಡೆಯಿತು ಘಟನೆ Read More »

error: Content is protected !!
Scroll to Top