ಸುದ್ದಿ

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ

ಸುಳ್ಯ: ಸುಳ್ಯ ವಿಧಾಸಭಾ ಕ್ಷೇತ್ರದ ಬೆಳ್ಳಾರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ನೇಮಕದ ಜತೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿಕೊಡಬೇಕೆಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಪಡೆಯಲು ತೊಂದರೆ ಪಡುವಂತಾಗಿದೆ. ಅಲ್ಲದೆ ಕಡಬ ಸಮುದಾಯ ಆರೋಗ್ಯ […]

ವೈದ್ಯಾಧಿಕಾರಿ ಹಾಗೂ ಡಯಾಲಿಸಿಸ್ ಟೆಕ್ನಿಷಿಯನ್ ನೇಮಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಮನವಿ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದು ಮಹಿಳೆಯೋರ್ವರು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿಯಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬೆಂಗಳೂರು- ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ | ಮಹಿಳೆ ಮೃತ್ಯು Read More »

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ

ನೇಪಾಳ: ನೇಪಾಳದ ಕಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 128 ಮಂದಿ ಸಾವನ್ನಪ್ಪಿದ್ದು, 140 ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪವು ನ.3ರ ರಾತ್ರಿ 11:32 ಕ್ಕೆ ಸಂಭವಿಸಿದೆ. ಪರ್ವತ ಶ್ರೇಣಿಗಳಿಂದ ಕೂಡಿದ ಈ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ನಿಂತಿದ್ದ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಂಚಿನಡ್ಕ ನಿವಾಸಿ ಪ್ರಜ್ವಲ್ ಮೃತಪಟ್ಟು ಯುವಕ ಎಂದು ಗುರುತಿಸಲಾಗಿದೆ. ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್‌ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ

ಮಂಗಳೂರು: ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ ಎಂಬುವುದಕ್ಕೆ ಇಲ್ಲಿದೆ ಒಂದು ವಿಶೇಷತೆ. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು ದೈವದ ಮಂಚದಲ್ಲಿ ವಿರಾಜಮಾನರಾಗುವರು. ಅಲ್ಲದೇ ಆ ಸಂಧರ್ಭದಲ್ಲಿ ಸ್ವಾಮೀಜಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅದರಂತೆ ಈ ಬಾರಿಯೂ ಮಹಾನವಮಿಯಂದು ಜೋಗಿ ಮಠ ನಾಥ ಪಂಥದ ಸ್ವಾಮೀಜಿಗಳಾದ ರಾಜಾ

ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿ | ಮಂಗಳೂರಿನ ಜೋಗಿ ಮಠದ ವಿಶೇಷತೆ Read More »

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು

ದೆಹಲಿ: ದೆಹಲಿ ಪ್ರವಾಸದಲ್ಲಿರುವ ಪೇಜಾವರ ಮಠದ ಶ್ರೀ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಗಳು ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಕೆಳಗೆ ಬಿದ್ದ ಘಟನೆ ನಡೆದಿದೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ ತುಲಾಭಾರ ಸೇವೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿ ಬಿದ್ದಿದ್ದು, ತಲೆಗೆ ತರಚಿದ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಗಾಯಗಳಾಗಿಲ್ಲ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

ತುಲಾಭಾರ ವೇಳೆ ತಕ್ಕಡಿ ಹಗ್ಗ ಕಳಚಿ ಕೆಳಗೆ ಬಿದ್ದ ಪೇಜಾವರ ಶ್ರೀಗಳು Read More »

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ

ಉಜಿರೆ: ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಜಿರೆ ಗ್ರಾಮದ ಗಡಿ ಪ್ರದೇಶವಾದ ಮಾಚಾರು ಸಮೀಪದ ಕೆಂಪನೊಟ್ಟುವಿನಲ್ಲಿ ಶುಕ್ರವಾರ ನಡೆದಿದೆ. ಮಾಚಾರು ನಿವಾಸಿ ಶಶಿಕಲಾ ಎಂಬವರ ಶವವೇ ಬಾವಿಯಲ್ಲಿ ಅನುಮಾನಾಸ್ಪದವಾಗಿ  ಪತ್ತೆಯಾಗಿರುವುದು. ಹತ್ಯೆ ಮಾಡಿ ಬಾವಿಗೆ ಹಾಕಿರುವ ಕುರಿತು ಆರೋಪಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಇದು ಆಕಸ್ಮಿಕ ಘಟನೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಧರ್ಮಸ್ಥಳ ಠಾಣಾ ಪೊಲೀಸರು, ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಉಜಿರೆಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆ Read More »

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಮುಂಬರುವ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ  ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮಾರ್ಗಸೂಚಿಯನ್ನು ಇದೀಗ  ಹೊರಡಿಸಿದೆ. ಮುಖ್ಯವಾಗಿ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ಸರಕಾರ ಈ ಮಾರ್ಗಸೂಚಿ ಹೊರಡಿಸಿದೆ. ಮಾರ್ಗಸೂಚಿ ಹೇಗಿವೆ ? 1.ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ಆರೋಗ್ಯಧಿಕಾರಿ, ತಹಶೀಲ್ದಾರ್, ಜಿಲ್ಲಾ ಪರಿಸರ

ದೀಪಾವಳಿ: ಪಟಾಕಿ ಬಳಕೆಗೆ ರಾಜ್ಯ ಸರಕಾರ ಹೊರಡಿಸಿದೆ ಮಾರ್ಗಸೂಚಿ | ಮಾರ್ಗಸೂಚಿ ಹೇಗಿವೆ ? ಇಲ್ಲಿದೆ ಡಿಟೈಲ್ಸ್ Read More »

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ

ಸುಳ್ಯ :ಸುಳ್ಯದ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ ಎಂಬಿಎ ಮಾಡಿದ್ದರು. ಪತಿ ರಾಜೇಶ್, ಡೈರಿ ರಿಚ್ ಐಸ್ ಕ್ರೀಮ್ ಕಂಪನಿ ಮಾಲೀಕರಾಗಿದ್ದಾರೆ. ಇದೇ ಕಂಪನಿಯಲ್ಲಿ ಐಶ್ವರ್ಯ ತಂದೆ ಸುಬ್ರಮಣ್ಯ ಅವರ ತಂಗಿ ಗಂಡ ರವೀಂದ್ರ ಆಡಿಟರ್

ಉದ್ಯಮಿ ಸೊಸೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | ವರದಕ್ಷಿಣ ಕಿರುಕುಳ ಆರೋಪದಲ್ಲಿ ಐವರ ಬಂಧನ Read More »

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು

ಮಂಗಳೂರು: ಸುಳ್ಯದ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. 2022 ರ ಜುಲೈಯಲ್ಲಿ ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ,

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ | ಜೈಲಿನಲ್ಲಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‍ ನಿಂದ ಜಾಮೀನು Read More »

error: Content is protected !!
Scroll to Top