ನಾಡು ನುಡಿಯ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಲಿ | ಎಸ್‌ಎಸ್‌ಪಿಯು ಕಾಲೇಜಿನ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಸೋಮಶೇಖರ್ ನಾಯಕ್
ಸುಬ್ರಹ್ಮಣ್ಯ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಹು ಭಾಷೆಗಳಲ್ಲಿ ಪರಿಣಿತರಾದರೆ ಮಾತ್ರ ಯಶ ಗಳಿಸಲು ಸಾಧ್ಯ. ನಾವು ನಮ್ಮ ನಾಡಭಾಷೆಯ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರೀತಿಸುತ್ತಾ ಇತರ ಭಾಷೆಗಳ ಮೇಲೆ ಅಭಿಮಾನ ಹೊಂದಬೇಕು. ನಾಡು ನುಡಿಯ ಮೇಲೆ ಅಭಿಮಾನ ಹೊಂದುವುದು ಮನದಾಳದ ಸಂಕಲ್ಪವಾಗಬೇಕು ಎಂದು ಎಸ್ ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು […]