ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ | ರಾತ್ರಿ ಚಂದ್ರಮಂಡಲ ಉತ್ಸವ, ವೈಭವದ ತೆಪ್ಪೋತ್ಸವ | ಕಿಕ್ಕಿರಿದು ತುಂಬಿದ ಜನಸಾಗರ
ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಬೆಳಿಗ್ಗೆ ಮಹಾರುದ್ರಯಾಗ ಸಹಿತ ವಿವಿಧ ವೈದಿಕ ಕಾರ್ಯಕ್ರಮಗಳು ಜರಗಿತು. ಮಹಾಶಿವರಾತ್ರಿ ಉತ್ಸವದ ವಿಶೇಷವಾಗಿ ಬೆಳಗ್ಗೆ 7:30ರಿಂದ ಶ್ರೀ ದೇವರಿಗೆ ಮಹಾರುದ್ರಯಾಗ, 9 ಗಂಟೆಗೆ ಶತರುದ್ರಾಭಿಷೇಕ ನಡೆಯಿತು. ವಿಶೇಷವಾಗಿ ದೇವಸ್ಥಾನದ ಒಳಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಮೂರ್ತಿಗೆ ಭಕ್ತಾದಿಗಳಿಂದ ಬಿಲ್ವಾರ್ಚನೆ ಸೇವೆ ತಡ ರಾತ್ರಿ ವರೆಗೂ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ ಶ್ರೀ ದೇವಸ್ಥಾನಕ್ಕೆ ಭಕ್ತಾದಿಗಳ […]