ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಆರಂಭ
ನಿತ್ಯ ಓಡಾಡುವವರಿಗೆ ಅನುಕೂಲವಾಗುವ ವೇಳಾಪಟ್ಟಿ ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಸುಬ್ರಹ್ಮಣ್ಯ ರೋಡ್ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಏಪ್ರಿಲ್ 12ರಿಂದ ಪ್ರಾರಂಭವಾಗಲಿದೆ. ಏ.12ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ.ಈ ಹಿಂದೆ ಕಬಕ ಪುತ್ತೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಗೆ ವಿಸ್ತರಿಸುವುದು ಬಹಳ ಹಿಂದಿನ ಬೇಡಿಕೆಯಾಗಿತ್ತು. ಈ ರೈಲು ನಿತ್ಯ ಕೆಲಸಕ್ಕಾಗಿ ಮಂಗಳೂರಿಗೆ ಬಂದು ಹೋಗುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ. […]
ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಆರಂಭ Read More »