ಸುದ್ದಿ

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು

ಮಂಗಳೂರು : ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಏ. 24 ರಂದು ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಎ. 20ರಂದು ಅಪರಾಹ್ನ 3:28 ಸುಮಾರಿಗೆ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವೀಕ್ಷಕರೊಂದಿಗೆ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ತನ್ನ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ […]

ಮಂಗಳೂರು : ಜಿಲ್ಲಾಧಿಕಾರಿ ರವಿಕುಮಾರ್‌ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ, ದೂರು ದಾಖಲು Read More »

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ

ಪ್ರಸ್ತುತ ಕಣದಲ್ಲಿ ಒಟ್ಟು 3130 ಸ್ಪರ್ಧಿಗಳು ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್​ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಎಎಪಿ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರವಾಗಿ ಸರ್ಧಿಸಿರುವ ಅಭ್ಯರ್ಥಿಗಳ

ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ Read More »

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ

ಲೋಕಾಯುಕ್ತ ದಾಳಿ : ಬೆಳ್ತಂಗಡಿಯ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆ Read More »

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು

ಕೊಂಚ ಸಮಯದ ಬಿಡುವಿನ ಬಳಿಕ ಸಕ್ರಿಯ ರಾಜಕಾರಣಕ್ಕೆ ಬಂದ ಕನ್ನಡ ನಟಿ ಬೆಂಗಳೂರು : ಕನ್ನಡ ನಟಿ, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ಸಕ್ರಿಯ ರಾಜಕೀಯಕ್ಕೆ ಬಂದಿದ್ದಾರೆ. ಇಂದು ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇತ್ತೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ರಮ್ಯಾ ಮುಂದಿನ ಕೆಲ ದಿನಗಳ ಕಾಲ ಮಂಡ್ಯದಲ್ಲಿ ಬಿರುಸಿನಿಂದ ಕೈ ಅಭ್ಯರ್ಥಿಗಳ ಪರವಾಗಿ ಪುಚಾರ ನಡೆಸಲಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್

ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಪ್ರಚಾರ ಶುರು Read More »

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಸಂಪತ್ತಿನ ದಾಖಲೆ ಶೋಧ ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿ ಅಕ್ರಮ ಆಸ್ತಿ ಗಳಿಸಿರುವ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಯುತ್ತಿದೆ. ಯಲಹಂಕದಲ್ಲಿರುವ ಗಂಗಧರಯ್ಯ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ‌

ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಲಿಂಗಾಯತರು ಭ್ರಷ್ಟರು ಹೇಳಿಕೆ ವಿರುದ್ಧ ಸಮುದಾಯದವರ ಆಕ್ರೋಶ ಬೆಂಗಳೂರು : ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಹೇಳಿರುವ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕ ವಿಭಾಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಸಿದ್ದರಾಮಯ್ಯನವರ ಲಿಂಗಾಯತ ಸಿಎಂ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ, ಬಿಜೆಪಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.ಲಿಂಗಾಯತ ಯುವ ವೇದಿಕೆ ಮುಖಂಡ ಬಸವರಾಜ್ ಎನ್ನುವವರು ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿ ಸಿದ್ದರಾಮಯ್ಯ ವಿರುದ್ಧ

ಲಿಂಗಾಯತ ಯುವ ವೇದಿಕೆಯಿಂದ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು Read More »

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು

ಬ್ರಹ್ಮಾವರ ಸಮೀಪ ಕುದ್ರು ಬಳಿ ನಡೆದ ಘಟನೆ ಉಡುಪಿ : ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವ ಘಟನೆ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಬಾಜ್, ಫಜಾನ್, ಸೂಫಾನ್, ಫರಾನ್​ ಮೃತರು. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ. ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ದೋಣಿ ಮೂಲಕ ಮೀನು ಹಿಡಿಯಲು ಏಳು ಯುವಕರು ತೆರಳಿದ್ದರು. ನದಿಯಲ್ಲಿ ನೀರಿನ ಮಟ್ಟ

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು Read More »

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯ ಬಂಧನ

ತಿರುವನಂತಪುರಂ : ಏಪ್ರಿಲ್ 24ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಏ. 23 ರಂದು ಕೇರಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ. ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಪತ್ರ ಬಂದಿತ್ತು ಎಂದು ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ನಿನ್ನೆ ಹೇಳಿದ್ದರು. ಈ ಕುರಿತು ಮಾತನಾಡಿರುವ ಕೊಚ್ಚಿ

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯ ಬಂಧನ Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ Read More »

error: Content is protected !!
Scroll to Top