ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬ: ಶೀಘ್ರ ಪರಿಹಾರಕ್ಕೆ ಕ್ಯಾ. ಚೌಟ ಸೂಚನೆ
ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ವಿಮಾ ಪರಿಹಾರ ಪಾವತಿ ವಿಳಂಬವಾಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಿ ಶೀಘ್ರ ವಿಮಾ ಮೊತ್ತ ಪಾವತಿಗೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ. ಕಳೆದ ವಾರ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು, ಕೃಷಿ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ವಿಳಂಬಕ್ಕೆ ಕಾರಣ ಏನು ಎಂಬುದರ ಬಗ್ಗೆ ಪರಾಮರ್ಶಿಸಿದ್ದರು. ಹಾಗೆಯೇ ತುರ್ತಾಗಿ ವಿಮಾ […]










