ಸ್ಥಳೀಯ ಸುದ್ದಿ

ಸುಳ್ಯ : ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಸುಳ್ಯ : ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅರಂತೋಡು ಗ್ರಾಮ ಉಳುವಾರು ಎಂಬಲ್ಲಿ ಏ. 18 ರಂದು ಸಂಭವಿಸಿದೆ. ಚಂದ್ರಕಾಂತ್‌ (34) ಎಂಬವರೇ ಮೃತ ವ್ಯಕ್ತಿ. ಇವರು ಸುಮಾರು 25 ವರ್ಷಗಳಿಂದ ಫಿಡ್ಸ್‌ ಖಾಯಿಲೆಯಿಂದ ಬಳಲುತ್ತಿದ್ದು, ಮರ್ಕಂಜ ಗ್ರಾಮದ ನಿವಾಸಿಯಾಗಿದ್ದ ಇವರು ಕೆಲವು ದಿನಗಳಿಂದ ಸುಳ್ಯ ತಾಲೂಕು ಅಂರತೋಡು ಗ್ರಾಮದ ಉಳುವಾರು ಹೆಂಡತಿ ಮನೆಯಲ್ಲಿ ವಾಸವಾಗಿದ್ದರು. ಏ. 18 ರಂದು ಖಾಯಿಲೆ ಉಲ್ಬಣಗೊಂಡ ಪರಿಣಾಮ, ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ವೈದ್ಯರು […]

ಸುಳ್ಯ : ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು Read More »

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ

ಮಾಜಿ ಶಾಸಕ ಬಾವಾಗೆ ಕೊನೆಗೂ ಸಿಗಲಿಲ್ಲ ಟಿಕೆಟ್‌-ಬಂಡಾಯದ ಸುಳಿವು ಕಾರ್ಕಳ : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟನ್ನು ಕಾಂಗ್ರೆಸ್‌ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಯಮಿ ಇನಾಯತ್‌ ಅಲಿಗೆ ನೀಡಿದೆ. ಕೊನೆಯ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಹೆಸರನ್ನು ಕಾಂಗ್ರೆಸ್‌ ವರಿಷ್ಠರು ನಿನ್ನೆ ರಾತ್ರೋರಾತ್ರಿ ಘೋಷಿಸಿದ ಪಟ್ಟಿಯಲ್ಲಿ ಪ್ರಕಟಿಸಿದ್ದಾರೆ.ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಮತ್ತು ಇನಾಯತ್‌ ಅಲಿ ನಡುವೆ ತೀವ್ರ ಪೈಪೋಟಿಯಿದ್ದ ಕಾರಣ ಕೊನೆಯವರೆಗೂ ಕಾಂಗ್ರೆಸ್‌ ವರಿಷ್ಠರಿಗೆ ಅಭ್ಯರ್ಥಿ ಆಯ್ಕೆ

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಏ. 16 ರಂದು ಕೌಳಿಗೆ ಮನೆ ಸಜಿಪ ಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಪರಮೇಶ್ವರ ಎನ್ ಕೆ(75) ಎಂಬವರೇ ಮೃತ ವ್ಯಕ್ತಿ. ಏ. 14 ರಂದು ರಾತ್ರಿ 10.00 ಗಂಟೆಗೆ ಟಾರ್ಚ ಹಿಡಿದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ಇದ್ದಾಗ ಮನೆಯ ಸುತ್ತ ಮುತ್ತ ಪರಿಸರದಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಯಾವುದೇ ಮಾಹಿತಿ ಸಿಗದ ಕಾರಣ ಮಗನಾದ ಶಿವಾನಂದ ರ ಹೇಳಿಕೆಯಂತೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

error: Content is protected !!
Scroll to Top