ಸ್ಥಳೀಯ ಸುದ್ದಿ

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ

ಉಪ್ಪಿನಂಗಡಿ : ಏ. 22 ರಂದು ಕಲ್ಲೇರಿ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು, […]

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ Read More »

ಇಂದು ಶೂನ್ಯ ನೆರಳಿನ ದಿನ

ನಿಮ್ಮ ನೆರಳು ನಿಮಗೇ ಕಾಣಿಸದ ಪ್ರಾಕೃತಿಕ ಚಮತ್ಕಾರ ಪುತ್ತೂರು : ಪುತ್ತೂರಿನಲ್ಲಿ ಇಂದು(ಎ. 23) ಮುಂಬರುವ ದಿನಗಳಲ್ಲಿ ಸೂರ್ಯನು ಆಕಾಶದಲ್ಲಿ ಉತ್ತರ ದಿಕ್ಕಿನತ್ತ ಚಲಿಸುವಾಗ, ನೀವು ಇರುವ ಸ್ಥಳಕ್ಕೆ ಅವಲಂಬಿತವಾಗಿ ಸೂರ್ಯನು ಖಮಧ್ಯದ ಮೂಲಕ ಅಂದರೆ ನೆತ್ತಿಯ ನೇರದಲ್ಲಿ ಹಾದು ಹೋಗುತ್ತಾನೆ. ನೀವು ನಿಂತಿರುವ ಸ್ಥಳದಿಂದ ನೆತ್ತಿಯ ಮೇಲಿರುವ ಬಿಂದು ವನ್ನು ಖಮಧ್ಯ(ನಿತ್) ಎನ್ನುತ್ತಾರೆ. ಭೂಮಿಯು ಗೋಳಾಕಾರದಲ್ಲಿ ರುವುದರಿಂದ ಈ ಬಿಂದುವು ಆಕಾಶಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಬೇರೆ ಯಾವುದೇ ಸಮಯದಲ್ಲಿ, ಸೂರ್ಯನು ನಿಮ್ಮನ್ನು ಒಂದು

ಇಂದು ಶೂನ್ಯ ನೆರಳಿನ ದಿನ Read More »

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಏ. 19 ರಂದು ಸಂಭವಿಸಿದೆ. ರಹಿಮಾನ್ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನೆಟ್ಟಣಿಗೆಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ಸುಮಾರು 15 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಕಂಕನಾಡಿ ಮತ್ತು ಶಿವಮೊಗ್ಗ ಆಸ್ಪತ್ರೆಯಿಂದ ಚಿಕಿತ್ಸೆಯನ್ನು ಮಾಡಿದ್ದು, ಸರಿಯಾಗಿ ಗುಣಮುಖಗೊಂಡಿರದ ಕಾರಣ ಇವರ ಯೋಗಕ್ಷೇಮವನ್ನು ಇವರ ಚಿಕ್ಕಮ್ಮನ ಮಗ ಮಹಮ್ಮದ್ ಹಾರಿಸ್ ನೋಡಿಕೊಳ್ಳುತ್ತಿದ್ದರು. ಏ. 19 ರಂದು ಸಂಜೆ 6.45

ಪುತ್ತೂರು : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್‌ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದು, ಬೆಂಗಳೂರಿನ ಜಯನಗರದ ಎನ್ಎಂಕೆಆರ್‌ವಿ ಕಾಲೇಜು ಕಲಾ ವಿಭಾಗದ ವಿದ್ಯಾರ್ಥಿನಿ ತಬಸ್ಸುಮ್ 600ಕ್ಕೆ 593 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂತೆಯೇ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596

ಅನನ್ಯಾ, ಕೌಶಿಕ್, ತಬಸ್ಸುಮ್ ಉತ್ತಮ ಸಾಧನೆ ಮೂಲಕ ಮೊದಲನೆ ಸ್ಥಾನ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ(95%) ಜಿಲ್ಲೆ ಪ್ರಥಮ ಮತ್ತು ಉಡುಪಿ (95%) ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಕೊಡಗು(91%) ತೃತೀಯ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಪತ್ರಿಕಾಗೋಷ್ಠಿಯಿಂದ ಹೊರಗುಳಿಯಲಿದ್ದಾರೆ. ಫಲಿತಾಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್ ಆರ್ ಮಾಧ್ಯಮಗಳನ್ನುದ್ದೇಶಿಸಿ ಫಲಿತಾಂಶ ಪ್ರಕಟಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಒದಗಿಸಿದ ಅಂಕಿಅಂಶಗಳ ಪ್ರಕಾರ,

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »

ಸುಳ್ಯ : ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಸುಳ್ಯ : ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅರಂತೋಡು ಗ್ರಾಮ ಉಳುವಾರು ಎಂಬಲ್ಲಿ ಏ. 18 ರಂದು ಸಂಭವಿಸಿದೆ. ಚಂದ್ರಕಾಂತ್‌ (34) ಎಂಬವರೇ ಮೃತ ವ್ಯಕ್ತಿ. ಇವರು ಸುಮಾರು 25 ವರ್ಷಗಳಿಂದ ಫಿಡ್ಸ್‌ ಖಾಯಿಲೆಯಿಂದ ಬಳಲುತ್ತಿದ್ದು, ಮರ್ಕಂಜ ಗ್ರಾಮದ ನಿವಾಸಿಯಾಗಿದ್ದ ಇವರು ಕೆಲವು ದಿನಗಳಿಂದ ಸುಳ್ಯ ತಾಲೂಕು ಅಂರತೋಡು ಗ್ರಾಮದ ಉಳುವಾರು ಹೆಂಡತಿ ಮನೆಯಲ್ಲಿ ವಾಸವಾಗಿದ್ದರು. ಏ. 18 ರಂದು ಖಾಯಿಲೆ ಉಲ್ಬಣಗೊಂಡ ಪರಿಣಾಮ, ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ವೈದ್ಯರು

ಸುಳ್ಯ : ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು Read More »

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ

ಮಾಜಿ ಶಾಸಕ ಬಾವಾಗೆ ಕೊನೆಗೂ ಸಿಗಲಿಲ್ಲ ಟಿಕೆಟ್‌-ಬಂಡಾಯದ ಸುಳಿವು ಕಾರ್ಕಳ : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟನ್ನು ಕಾಂಗ್ರೆಸ್‌ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಯಮಿ ಇನಾಯತ್‌ ಅಲಿಗೆ ನೀಡಿದೆ. ಕೊನೆಯ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಹೆಸರನ್ನು ಕಾಂಗ್ರೆಸ್‌ ವರಿಷ್ಠರು ನಿನ್ನೆ ರಾತ್ರೋರಾತ್ರಿ ಘೋಷಿಸಿದ ಪಟ್ಟಿಯಲ್ಲಿ ಪ್ರಕಟಿಸಿದ್ದಾರೆ.ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಮತ್ತು ಇನಾಯತ್‌ ಅಲಿ ನಡುವೆ ತೀವ್ರ ಪೈಪೋಟಿಯಿದ್ದ ಕಾರಣ ಕೊನೆಯವರೆಗೂ ಕಾಂಗ್ರೆಸ್‌ ವರಿಷ್ಠರಿಗೆ ಅಭ್ಯರ್ಥಿ ಆಯ್ಕೆ

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಏ. 16 ರಂದು ಕೌಳಿಗೆ ಮನೆ ಸಜಿಪ ಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಪರಮೇಶ್ವರ ಎನ್ ಕೆ(75) ಎಂಬವರೇ ಮೃತ ವ್ಯಕ್ತಿ. ಏ. 14 ರಂದು ರಾತ್ರಿ 10.00 ಗಂಟೆಗೆ ಟಾರ್ಚ ಹಿಡಿದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ಇದ್ದಾಗ ಮನೆಯ ಸುತ್ತ ಮುತ್ತ ಪರಿಸರದಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಯಾವುದೇ ಮಾಹಿತಿ ಸಿಗದ ಕಾರಣ ಮಗನಾದ ಶಿವಾನಂದ ರ ಹೇಳಿಕೆಯಂತೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

error: Content is protected !!
Scroll to Top