ಸ್ಥಳೀಯ ಸುದ್ದಿ

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಪದವಿ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 ಸಂಪನ್ನಗೊಂಡಿತು. ಅಕ್ಷಯ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಭೆಗಳ ಅನಾವರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳೇ ಆಯೋಜಿಸಿದ ಸ್ಪರ್ಧೆಯ ಸದುಪಯೋಗ ಪಡೆದುಕೊಂಡು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭಹಾರೈಸಿದರು. ಕೃತ್ವ 2K26 ಇದರ ಸಂಯೋಜಕ ಗಂಧರ್ವ ಅವರು ಪ್ರಸ್ತಾವನೆಗೈದು ಕಾರ್ಯಕ್ರಮ ಕುರಿತಾಗಿ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಮರ್ಪಿಸುತ್ತಾ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ್ ನಡುಬೈಲು […]

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 Read More »

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ

ಪುತ್ತೂರು: ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000/-ರವರೆಗೆ ರಿಯಾಯಿತಿ ಹಾಗೂ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ

ಅಲುಂಬುಂಡ: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ನಡೆಯಲಿರುವ ಸಾಪ್ತಾಹಿಕ ಬೇಸಿಗೆ ಶಿಬಿರವನ್ನು ಖ್ಯಾತ ಚಿತ್ರಕಲಾ ಶಿಕ್ಷಕ, ಸಾಹಿತಿ ಮತ್ತು ಕವಿಯೂ ಆಗಿರುವ ಭಾಸ್ಕರ್ ನೆಲ್ಯಾಡಿಯವರು ದೀಪ ಪ್ರಜ್ವಲಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈದು ಉದ್ಘಾಟಿಸಿದರು. ಬೇಸಿಗೆ ಶಿಬಿರವು ಬೀಜವನ್ನು ಮೊಳಕೆಯೊಡೆಯಲು ಸಹಕರಿಸುವ ಸಸಿ ಮಾಡಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಅವರು ಪ್ರತಿಪಾದಿಸಿದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಅವರು ವಿಶ್ಲೇಷಿಸಿದರು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಶೈಕ್ಷಣಿಕ ಸೇವೆಯ ಜೊತೆಗೆ ವ್ಯಕ್ತಿತ್ವ ವಿಕಸನದ ಪುಣ್ಯಕಾರ್ಯವೂ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ Read More »

ಎ. 9 – 12: ಹನುಮಗಿರಿಯಲ್ಲಿ ನಡೆಯಲಿದೆ ಅದ್ಧೂರಿ ಬ್ರಹ್ಮಕಲಶ

ಪುತ್ತೂರು: ಈಶ್ವರಮಂಗಲದ ಹನುಮಗಿರಿಯಲ್ಲಿರುವ ತೋದಂಡರಾಮ, ಪಂಚಮುಖಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಎ. 9-12 ರ ವರೆಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ಅಂತಿಮ ಘಟ್ಟಕ್ಕೆ ತಲುಪಿರುವುದಾಗಿ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ಎ. 10 ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಮಿಸಲಿದ್ದಾರೆ. ನೂತನ ಗೋಪುರ ಅವರಿಂದ ಲೋಕಾರ್ಪಣೆಯಾಗಲಿದೆ ಎಂದು ಹೇಳಿದ್ದಾರೆ. ಆಯೋಧ್ಯೆಯಿಂದ ತಂದ

ಎ. 9 – 12: ಹನುಮಗಿರಿಯಲ್ಲಿ ನಡೆಯಲಿದೆ ಅದ್ಧೂರಿ ಬ್ರಹ್ಮಕಲಶ Read More »

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಅಹಿತಕರ ಘಟನೆಗಳು ಸಂಭವಿಸದ ಹಾಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆರ್. ಕೆ. ಪಾಂಗಣ್ಣಾಯ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಂಟು ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ. ಪುತ್ತೂರಿನ ಪಿ. ಜಿ. ಜಗನ್ನಿವಾಸ ರಾವ್ ಅವರ ಪುತ್ರ ಯುವತಿಯೊಬ್ಬಳಿಗೆ ಮದುವೆಯಾಗುವ ಭರವಸೆ ನೀಡಿ ಮಗು ಕರುಣಿಸಿ ಕೈಕೊಟ್ಟ ಘಟನೆಗೆ ಸಂಬಂಧಿಸಿದ ಹಾಗೆ ಸಂತ್ರಸ್ತ ಯುವತಿಯ ತಾಯಿ ಜಾತ್ರೆಯ ಧ್ವಜಾರೋಹಣದ ದಿನ ಧ್ವಜ

ಪುತ್ತೂರು ಜಾತ್ರೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಲು ಸರ್ಕಾರದ ಎಂಟು ಇಲಾಖೆಗಳಿಗೆ ಪತ್ರ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯರಾಗಿ ಅರ್ಥಧಾರಿಯಾಗಿ ಭಾಗವಹಿಸುತ್ತಿದ್ದ ಶ್ರೀ ಕುಶಾಲಪ್ಪ ಗೌಡ (78) ಇವರು ಅಲ್ಪಕಾಲದ ಅಸೌಖ್ಯದಿಂದ ದಿನಾಂಕ 31.03.2026ರಂದು ಉಪ್ಪಿನಂಗಡಿ ಕಟ್ಟೆಚಾರು  ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು  ಉಪ್ಪಿನಂಗಡಿಯ ಶ್ರೀ ಗಣೇಶ ಸ್ಟೋರ್ ಜವಳಿ ಮಳಿಗೆಯಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸುತ್ತಿದ್ದು, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಹಿರಿಯ ಸದಸ್ಯರಾಗಿದ್ದ ಇವರು ಸುಮಾರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಸಂಘದೊಂದಿಗೆ ಸಕ್ರಿಯರಾಗಿದ್ದರು. ರಾವಣ, ಇಂದ್ರಜಿತು, ವಾಲಿ,ಸುಗ್ರೀವ,ಮಾಗಧ ,ಕೌರವ ಮುಂತಾದ ಪಾತ್ರಗಳನ್ನು ನಿರ್ವಹಿಸುತ್ತಿದ್ದರಲ್ಲದೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯ ಕುಶಾಲಪ್ಪ ಗೌಡ ನಿಧನ Read More »

ಮಾ.30: ಮುಳಿಯ ಡೈಮಂಡ್ ಫೆಸ್ಟ್ ಉದ್ಘಾಟನೆ

ಪುತ್ತೂರು, ಮಾ. 30: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್ -ಡೈಮಂಡ್ಸ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಲಾದ ‘ಡೈಮಂಡ್ ಫೆಸ್ಟ್’ ವಿಶೇಷ ಉತ್ಸವ ಮಾ.30ರಂದು ಉದ್ಘಾಟನೆಯಾಯಿತು. ಸುಬ್ರಹ್ಮಣ್ಯ ಶ್ರೀಕೃಷ್ಣ ರೆಸಿಡೆನ್ಸಿ ಮಾಲಕಿ ಪ್ರಜ್ಞಾ ಶೆಣೈ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗುಣಮಟ್ಟ ಮತ್ತು ನಂಬಿಕೆಯಿಂದ ಜನರ ವಿಶ್ವಾಸಗಳಿಸಿರುವ ಮುಳಿಯ ಜ್ಯುವೆಲ್ಸ್ ಹತ್ತೂರಿನಲ್ಲಿ ಮನೆ ಮಾತಾಗಿದೆ ಎಂದರು. ಗ್ರಾಹಕರ ಆಯ್ಕೆಗೆ ತಕ್ಕಂತೆ ವಿಶಾಲ ಸಂಗ್ರಹ ಹಾಗೂ ಸಿಬಂದಿ ಆತ್ಮೀಯ ಸೇವೆ ಸಂಸ್ಥೆಯ ವಿಶೇಷತೆ ಎಂದರು. ಉತ್ಸವ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮಾ.30: ಮುಳಿಯ ಡೈಮಂಡ್ ಫೆಸ್ಟ್ ಉದ್ಘಾಟನೆ Read More »

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ  ಕುಸುಮಾ ಮತ್ತು ಶ್ರೀ ಕೃಷ್ಣ ಇವರ ಪುತ್ರಿ ಯಜ್ಞ ಇವಳಿಗೆ  ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಮತ್ತು ನಂದಕುಮಾರ್ ಎಸೋಸಿಯೇಟ್ಸ್ ನ ವರಿಷ್ಠರಾದ  ಎಂ. ಗಂಗಾಧರ ರಾವ್  ಪ್ರಾಯೋಜಕತ್ವದಲ್ಲಿ  ನಿರ್ಮಿಸಿದ ನೂತನ ಮನೆ ‘ನಂದಾದೀಪ’ವನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಸ್ವಾಮೀಜಿಯವರು ಅನುಗ್ರಹ ಸಂದೇಶದಲ್ಲಿ ಎಂ.ಗಂಗಾಧರ ರಾವ್ ಅವರುತಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ಅರ್ಪಿಸಿ ಸಂತೋಷವನ್ನು ಹೊಂದುವ ವಿರಳರಲ್ಲಿ ಒಬ್ಬರು. 

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ Read More »

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷ ಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ ಮಹೇಶ್ ಕನ್ಯಾಡಿ ಇವರನ್ನು ಗೌರವಿಸಲಾಯಿತು. ದೇವಳದ ಅರ್ಚಕರಾದ ಸುರೇಶ ಪುತ್ತೂರಾಯ,  ಹಿಮ್ಮೇಳ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಇಳoತಿಲ , ನಿವೃತ ಉಪನ್ಯಾಸಕ-ಅರ್ಥಧಾರಿ ಗಣರಾಜ ಕುಂಬ್ಳೆ, ಯಕ್ಷ ಭಾರತಿ ಖಜಾಂಜಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಅಧ್ಯಕ್ಷ

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ Read More »

ಅಸೌಖ್ಯದಿಂದ ಮಹಿಳೆ ಸಾವು

ಪುತ್ತೂರು: ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ದೇವಚಳ್ಳ ಗ್ರಾಮದ ಕಲ್ಲುಪಣೆ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರಿ ಉಷಾಲತಾ(31) ಎಂದು ಗುರುತಿಸಲಾಗಿದೆ. ಉಷಾ ಅವರು ಮಾವಿನಕಟ್ಟೆಯ ಅರ್ಣ ಗ್ಯಾಸ್‌ನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಎರಡು ವರ್ಷದ ಹಿಂದಷ್ಟೇ ಅಲೆಟ್ಟಿಯ ಸೂರಜ್ ಎಂಬವರ ಜೊತೆ ಇವರ ವಿವಾಹ ನಡೆದಿತ್ತು. ಮೃತರು ಪತಿ, ತಂದೆ, ತಾಯಿ, ಸಹೋದರಿಯರನ್ನು ಅಗಲಿದ್ದಾರೆ.

ಅಸೌಖ್ಯದಿಂದ ಮಹಿಳೆ ಸಾವು Read More »

error: Content is protected !!
Scroll to Top