ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸುಳ್ಯ ತಾಲೂಕಿನ ಧರ್ಮಜಾಗೃತಿ ಹಾಗೂ ಸಮುದಾಯ ಸಮ್ಮಿಲನ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಹಗಲಿರುಳು ಸೇವೆ ಸಲ್ಲಿಸಿದ ಎಲ್ಲರಿಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಶುಭ ಅನುಗ್ರಹ ಸಂದೇಶವನ್ನು ರವಾನಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಅನುಗ್ರಹ ಸಂದೇಶದಲ್ಲಿ, ಮಹಾಸ್ವಾಮೀಜಿ ಅವರು ಸಮುದಾಯದ ಸರ್ವಜನರಲ್ಲಿ ಧರ್ಮಜಾಗೃತಿಯ ಸಂಚಲನವನ್ನುಂಟು ಮಾಡಿರುವುದು ಸೌಭಾಗ್ಯವೇ ಸರಿ. ಈ ಕಾರ್ಯಕ್ರಮ […]

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ Read More »

ಮೇ 7 ರಿಂದ 12 ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ! ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಮೇ7 ರಿಂದ 12 ತನಕ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದ‌ರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದ‌ರ್, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 7 ರಿಂದ 12 ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ! ಹವಾಮಾನ ಇಲಾಖೆ ಮುನ್ಸೂಚನೆ Read More »

ವಿದ್ಯುತ್ ತಂತಿಗೆ ತಗುಲಿ ನವಿಲು ಸಾವು

ವಿಟ್ಲ: ವಿದ್ಯುತ್‌ ತಂತಿಗೆ ಸಿಲುಕಿ ನವಿಲೊಂದು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ನವಿಲು ಮೃತಪಟ್ಟ ಬಗ್ಗೆ ಅಲ್ಲಿನ ಆಟೋ ರಿಕ್ಷಾ ಚಾಲಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.

ವಿದ್ಯುತ್ ತಂತಿಗೆ ತಗುಲಿ ನವಿಲು ಸಾವು Read More »

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ

ಆಯೋಧ್ಯೆ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಾನು ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ. ಪ್ರತಿಯೊಬ್ಬ ಹಿಂದೂವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ Read More »

ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಬಾರದ ವೇತನ | ಇಂದಿನಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್

ಬೆಂಗಳೂರು: ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಹಿನ್ನಲೆಯಲ್ಲಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದು ,ಇಂದು ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್ ಆಗಲಿದೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಸಿಬ್ಬಂದಿಗಳು ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಒಂದೆಡೆ ಮೂರು ತಿಂಗಳಿಂದ ಸಂಬಳವಿಲ್ಲ, ಮತ್ತೊಂದೆಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ. ಈ ಎಲ್ಲ ಕಾರಣಗಳಿಗೆ ಸೋಮವಾರ

ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಬಾರದ ವೇತನ | ಇಂದಿನಿಂದ ರಾಜ್ಯವ್ಯಾಪಿ ಆ್ಯಂಬುಲೆನ್ಸ್ ಸೇವೆ ಬಂದ್ Read More »

ಕೆದಿಲ ಶೌರ್ಯ ಸದಸ್ಯರಿಂದ ಚೆಯರ್ ಹಸ್ತಾಂತರ

ಕೆದಿಲ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆದಿಲ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸೇವಾ ಕೇಂದ್ರಕ್ಕೆ ಚೆಯರ್ ಕೊಡುಗೆಯಾಗಿ ನೀಡಿದರು. ಸೇವಾ ಕೇಂದ್ರಕ್ಕೆ 16 ಚೆಯರ್ ಗಳನ್ನು ಹಸ್ತಾಂತರಿಸಲಾಯಿತು. ಘಟಕದ ಸದಸ್ಯರಾದ ಗಿರೀಶ, ಜಗದೀಶ, ಶೀನಪ್ಪ, ವೆಂಕಪ್ಪ, ಪುರಂದರ ಸೇರಿ ತಮ್ಮ ಸ್ವಂತ ಖರ್ಚಿನಲ್ಲಿ ಖರೀದಿ ಮಾಡಿ ಸಿಎಸ್‍ ಸಿ ಸೇವಾದಾರೆ ಶ್ರೇಯಾ, ಸೇವಾಪ್ರತಿನಿಧಿ ಜಯಂತಿ ಅವರಿಗೆ ಹಸ್ತಾಂತರಿಸಿದರು

ಕೆದಿಲ ಶೌರ್ಯ ಸದಸ್ಯರಿಂದ ಚೆಯರ್ ಹಸ್ತಾಂತರ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ | ಅಗಲಿದ ಕಲಾವಿದರಿಗೆ ನುಡಿನಮನ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದ್ಯೂತ  ಪ್ರಕರಣ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಬಿ. ಸುರೇಶ್ ರಾವ್, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಜಯರಾಮ ಬಲ್ಯ ( ಕೌರವ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಕರ್ಣ )ಸತೀಶ್ ಆಚಾರ್ಯ ಮಾಣಿ (ಶಕುನಿ) ಶ್ರೀಮತಿ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ | ಅಗಲಿದ ಕಲಾವಿದರಿಗೆ ನುಡಿನಮನ Read More »

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ದುರಂತ ಘಟನೆ ಭಾನುವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾನ್ ಅವರ ಪುತ್ರಿ ಮರಿಯಂ ನಾಶಿಯಾ (14) ಮೃತ ಬಾಲಕಿಯರು. ಬಂಟ್ವಾಳ ತಾಲೂಕಿನ ನಾವೂರು ಸಮೀಪದ ಮೈಂದಾಳದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಮನೆಯವರೊಂದಿಗೆ ಸಂಜೆ ಮಕ್ಕಳು ಸ್ಥಳೀಯ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತರಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಮಕ್ಕಳು ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು Read More »

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಲಕ್ಷ ಮಂಜೂರು | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ,ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿಎಂ ಸಿದ್ದರಾಮಯ್ಯ ತುರ್ತು ವ್ಯವಸ್ಥೆಗಾಗಿ 50 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದ್ದಾರೆ. ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಕುಡಿಯುವ ನೀರಿಗೆ ತೊಂದರೆಯಾಗಿರುವ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕರು

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ 50 ಲಕ್ಷ ಮಂಜೂರು | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ Read More »

ಆತ್ಮಹತ್ಯೆಗೆ ಶರಣಾದ ಅರ್ಚಕ

ಬೆಳ್ತಂಗಡಿ : ಬೆಳ್ತಂಗಡಿ ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸವಣಾಲು ಗ್ರಾಮದಲ್ಲಿ ಮೇ 4 ರಂದು ನಡೆದಿದೆ. ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ (33) ಆತ್ಮಹತ್ಯೆಗೆ ಶರಣಾದವರು. ವಿಜಯ್‌ ಹೆಗಡೆ ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು

ಆತ್ಮಹತ್ಯೆಗೆ ಶರಣಾದ ಅರ್ಚಕ Read More »

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ಹೆಲಿಕಾಪ್ಟ‌ರ್ ಮೂಲಕ ರವಾನೆ ಮಾಡಲಾಗಿದೆ. ಉಗ್ರರು ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ Read More »

error: Content is protected !!
Scroll to Top