ಏ.4-5 : ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಮಹಾಪೂಜೆ, ನೇಮೋತ್ಸವ | ಗೊನೆ ಮುಹೂರ್ತ
ಪುತ್ತೂರು: ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ, ಕೆಮ್ಮಲೆ ಬ್ರಹ್ಮರ ಮೂಲಸ್ಥಾನ ಹಾಗೂ ಉಳ್ಳಾಕುಲು ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಕುಲು ನೇಮೋತ್ಸವ, ಸಾಮೂಹಿಕ ನಾಗತಂಬಿಲ ಏ.4 ಹಾಗೂ 5 ರಂದು ನಡೆಯಲಿದ್ದು, ಪೂರ್ವಭಾವಿಯಾಗಿ ಗೊನೆ ಮುಹೂರ್ತ ಕಾರ್ಯಕ್ರಮ ಮಂಗಳವಾರ ನಡೆಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ, ಮುಖ್ಯ ಪರಿಚಾರಕ ಬಾಲಕೃಷ್ಣ ಕೆ. ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜನಾರ್ದನ ಎ.ಹೇಮಳ, ಟ್ರಸ್ಟ್ ಅಧ್ಯಕ್ಷ ನಾರಾಯಣ ಕೋರ್ಜೆ, ಆಡಳಿತ ಮಂಡಳಿ ಸದಸ್ಯರಾದ ಜಯಾನಂದ […]