ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಮಂಗಳವಾರದ ಕಾರ್ಯಕ್ರಮ ಈ ಕೆಳಗಿನಂತಿದೆ. ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ತ್ರಿಕಾಲ ಪೂಜೆ, ಅನುಜ್ಞಾ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ತ್ರಿಕಾಲ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5 ರಿಂದ ದೀಪಾರಾಧನೆ, ತ್ರಿಕಾಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ರಿಂದ ಉಪ್ಪಿನಂಗಡಿ ರಾಮನಗರ ಶಾರದ ವನಿತಾ […]

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ : ಇಂದಿನ ಕಾರ್ಯಕ್ರಮ Read More »

ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರಿಂದ ಪ್ರತಿಭಟನೆ

ವಾಷಿಂಗ್ ಟನ್: ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ್ನು ಬೆಂಬಲಿಸಿ ಐತಿಹಾಸಿಕ ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರು ಇಂದು ಪ್ರತಿಭಟನೆ ನಡೆಸಿದರು.ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಪ್ರತಿಭಟನಾಕಾರರು, ರಿಚ್ಮಂಡ್ ಹಿಲ್ ನಲ್ಲಿರುವ ಬಾಬಾ ಮಖನ್ ಶಾ ಲುಬಾನ ಸಿಕ್ ಕೇಂದ್ರದಿಂದ ಕಾರ್ ರ್ಯಾಲಿ ಪ್ರಾರಂಭಿಸಿ ಟೈಮ್ಸ್ ಸ್ಕ್ವೇರ್ ಬಳಿ ಪೂರ್ಣಗೊಳಿಸಿದರು.ಖಲಿಸ್ತಾನ ಧ್ವಜ ಹಾಗೂ ಎಲ್ ಇಡಿ ಮೊಬೈಲ್ ಬಿಲ್ ಬೋರ್ಡ್ ಗಳನ್ನು ಹೊಂದಿದ ಟ್ರಕ್ ಗಳಲ್ಲಿ ಅಮೃತ್ ಪಾಲ್ ಸಿಂಗ್ ಅವರ ಫೋಟೊಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಟೈಮ್ಸ್ ಸ್ಕ್ವೇರ್ ಎದುರು ಖಲೀಸ್ತಾನ ಬೆಂಬಲಿಗರಿಂದ ಪ್ರತಿಭಟನೆ Read More »

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್

ಪುತ್ತೂರು: ಪಿ.ಡಿ. ಹಾಗೂ ಗ್ರಂಥಪಾಲಕ ಹುದ್ದೆ ರದ್ದುಗೊಳಿಸಿರುವ ಕ್ರಮದ ವಿರುದ್ಧ ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಶಾಸಕ ಸಂಜೀವ ಮಠಂದೂರು ಭರವಸೆ ಬಳಿಕ ವಾಪಾಸ್ ಪಡೆಯಲಾಗಿದೆ. ವಿದ್ಯಾರ್ಥಿಗಳಿಂದ ಮನವಿ ಪಡೆದುಕೊಂಡು ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕ ಹುದ್ದೆಯನ್ನು ನೀಡಲಾಗುತ್ತದೆ. ಜಿಡೆಕಲ್ಲು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದು, ಆದ್ದರಿಂದ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಗ್ರಂಥಪಾಲಕ ಹುದ್ದೆಯನ್ನು ಸರಕಾರ ತೆರವು ಮಾಡಿದೆ. ಇದರ ಬಗ್ಗೆ ಈಗಾಗಲೇ ಉನ್ನತ ಶಿಕ್ಷಣ ಸಚಿವರಲ್ಲಿ

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ

ಸುಳ್ಯ : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮಾ.27 ರಂದು ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿಯನ್ನು ಜಪ್ತಿ ಮಾಡಿದೆ. ಸುಳ್ಯ ತಾಲೂಕು ಗಾಂಧಿನಗರ ಅಲೆಟ್ಟಿ ರಸ್ತೆ, ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿ ಪಿಎಫ್‌ಐ ಕಚೇರಿ ಇದ್ದು ಇದನ್ನು ವಶಕ್ಕೆ ಪಡೆದಿದೆ.ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಯಿಂದ ಸುಳ್ಯ ಪಿಎಫ್ ಐ ಕಚೇರಿ ಜಪ್ತಿ Read More »

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

ಸುಳ್ಯ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಸುಳ್ಯದ ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ವಶಪಡಿಸಿಕೊಂಡಿದೆ. ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸಿನಲ್ಲಿ ಮೊದಲ ಮಹಡಿಯಲ್ಲಿ ಕಚೇರಿ ಇದೆ ಎಂದು ಹೇಳಲಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎ. ಚುರುಕುಗೊಳಿಸಿದೆ. ಸುಳ್ಯದಲ್ಲಿರುವ ಪಿಎಫ್ಐ ಕಚೇರಿಯನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕಚೇರಿಯಲ್ಲೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮೂಲಗಳು

ಪಿಎಫ್ಐ ಸುಳ್ಯ ಕಚೇರಿ ಎನ್ಐಎ ವಶ | ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ Read More »

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಪುತ್ತೂರು:  ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನ ಸೇವಾ ಸಂಘದ ವತಿಯಿಂದ ನಡೆಯುತ್ತಿರುವ ಮುರ ಒಕ್ಕಲಿಗ ಸಮುದಾಯ ಭವನದ ಮೇಲೆಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಆದಿ ಚುಂಚನಗಿರಿ ಸಂಸ್ಥಾನಮ್ ನ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಮುದಾಯ ಭವನಗಳ ಮೂಲಕ ನಮ್ಮ ಸಮಾಜದ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಆಗಿದೆ. ವಿಶೇಷ ಸ್ಥಾನಮಾನ, ಗೌರವ ಸಲ್ಲಿಸುವ ಮೂಲಕ

ಮುರ ಗ್ರಾಮೀಣ ಒಕ್ಕಲಿಗ ಗೌಡ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಉದ್ಘಾಟನೆ Read More »

8 ವರ್ಷದ ಮಂಗೋಲಿಯನ್ ಬಾಲಕ : ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಆಧ್ಯಾತ್ಮಿಕ ನಾಯಕ

ದೆಹಲಿ : ಬೌದ್ಧ ಧರ್ಮದ ಸರ್ವೋಚ್ಛ ಧರ್ಮಗುರು ದಲೈ ಲಾಮಾ ಅವರು 8 ವರ್ಷದ ಅಮೇರಿಕನ್ ಮಂಗೋಲಿಯನ್ ಬಾಲಕನನ್ನು ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಪ್ರಮುಖ ಆಧ್ಯಾತ್ಮಿಕ ನಾಯಕ ಎಂದು ಘೋಷಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಮಂಗೋಲಿಯನ್ ಬಾಲಕನಿಗೆ ಟಿಬೆಟ್ ಧರ್ಮಗುರು ದಲೈ ಲಾಮಾ ಅವರು ಟಿಬೆಟಿಯನ್ ಬೌದ್ಧಧರ್ಮದಲ್ಲಿ ಮೂರನೇ ಅತ್ಯುನ್ನತ ಶ್ರೇಣಿಯ 10ನೇ ಲಾಮಾ ಎಂದು ಕರೆಯಲ್ಪಡುವ ಖಲ್ಖಾ ಜೆಟ್ಸನ್ ದಂಪಾ ರಿಂಪೋಚೆ ಅವರ ಹೆಸರಿಟ್ಟಿದ್ದಾರೆ ಎಂದು ಹೇಳಲಾಗಿದೆ. ಅಂತಾರಾಷ್ಟ್ರೀಯ ಸುದ್ದಿ ವೆಬ್ ಸೈಟ್ ವೊಂದು ಈ ಬಗ್ಗೆ

8 ವರ್ಷದ ಮಂಗೋಲಿಯನ್ ಬಾಲಕ : ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಆಧ್ಯಾತ್ಮಿಕ ನಾಯಕ Read More »

ಆಧಾರ್-ಪಾನ್ ಜೋಡಣೆ ಹೆಸರಿನಲ್ಲಿ ವಸೂಲಿ ಮಾಡಿದ ಹಣವನ್ನು ಸರಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಲಿ : ರವೀಂದ್ರ ನೆಕ್ಕಿಲು ಆಗ್ರಹ

ಪುತ್ತೂರು: ಜನರ ಹಣ ಲೂಟಿ ಮಾಡಲೆಂದೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಹುಟ್ಟಿದ್ದು, ಆಧಾರ್ – ಪಾನ್ ಜೋಡಣೆಯ ಹೆಸರಿನಲ್ಲಿ ಜನರಿಂದ ವಸೂಲಿ ಮಾಡಿದ ಹಣವನ್ನು ಸರ್ಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಬೇಕಾಗಿದೆ. ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲು ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ರೀತಿ ಸಾರ್ವಜನಿಕ ಹಣವನ್ನು ಲೂಟಿ ಮಾಡುವ ಪ್ರಕ್ರಿಯೆಯನ್ನು ಖಂಡಿಸುತ್ತೇವೆ ಮತ್ತು ಈಗಾಗಲೇ ಪಡೆದ ಹಣವನ್ನು ತಕ್ಷಣ ಮರುಪಾವತಿ ಮಾಡಬೇಕೆಂದು

ಆಧಾರ್-ಪಾನ್ ಜೋಡಣೆ ಹೆಸರಿನಲ್ಲಿ ವಸೂಲಿ ಮಾಡಿದ ಹಣವನ್ನು ಸರಕಾರ ಏನು ಮಾಡುತ್ತಿದೆ ಎಂದು ಬಹಿರಂಗ ಪಡಿಸಲಿ : ರವೀಂದ್ರ ನೆಕ್ಕಿಲು ಆಗ್ರಹ Read More »

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ, ಧಾರ್ಮಿಕ ಸಭೆ

ಪುತ್ತೂರು: ದೇವಸ್ಥಾನ, ದೈವಸ್ಥಾನಗಳಲ್ಲಿನ ಕಲ್ಮಶಗಳು ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದಂತಹ ಪುಣ್ಯ ಕಾರ್ಯದಿಂದ ದೂರವಾಗಿ ಭಕ್ತಿ ನೆಲೆಗೊಳ್ಳುವವ ಕಾರ್ಯವಾಗುತ್ತಿದೆ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ನುಡಿದರು. ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ಜಾತ್ರೋತ್ಸವದ ಅಂಗವಾಗಿ ಭಾನುವಾರ ನಡೆದ  ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ನಾವು ಗಳಿಸುವ ಸಂಪತ್ತು ಧರ್ಮಾಧಾರಿತವಾಗಿರಬೇಕು. ಅಧರ್ಮದಿಂದ ಸಂಪಾಧಿಸುವ ಸಂಪತ್ತು ಶಾಶ್ವತವಲ್ಲ. ದೈಹಿಕವಾಗಿ ದೊರೆಯುವ ಸುಖವೇ ಮುಖ್ಯವಲ್ಲ.

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶ, ಧಾರ್ಮಿಕ ಸಭೆ Read More »

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ

ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಇಂದು ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ ಒಳ ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ, ಕೊರಚ, ಕೊರಮ, ಭೋವಿ ಸಮುದಾಯದವರು ತೀವ್ರ ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ Read More »

error: Content is protected !!
Scroll to Top