ಭಾರೀ ಮಳೆಗೆ ಕೆರೆಯಂತಾದ ರಸ್ತೆ

ಪುತ್ತೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ನಗರದ ಖಾಸಗಿ ಬಸ್‍ ನಿಲ್ದಾಣದ ಬಳಿಯ ರಸ್ತೆಗಳಲ್ಲಿ ನೀರು ಹರಿದ ಪರಿಣಾಮ ಸಂಚಾರಕ್ಕೆ ತೊಡಕುಂಟಾಯಿತು. ನೀರು ಹರಿದ ಪರಿಣಾಮ ಪರಿಸರ ಕೆರೆಯಂತಾಗಿತ್ತು. ಈ ಪ್ರದೇಶದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇದ್ದರೂ ಚರಂಡಿ ಬ್ಲಾಕ್‍ ಆಗಿ ನೀರೆಲ್ಲಾ ರಸ್ತೆಯಲ್ಲಿ ಹರಿದಿದೆ. ವಾಹನ ಸವಾರರು, ಪಾದಚಾರಿಗಳು ನಡೆದಾಡಲು ಹರಸಾಹಸ ಪಡಬೇಕಾಯಿತು.

ಭಾರೀ ಮಳೆಗೆ ಕೆರೆಯಂತಾದ ರಸ್ತೆ Read More »

ಕೊಂಬೆಟ್ಟು ಬಳಿ ಧರೆಗುರುಳಿದ ಮರ : ವಿದ್ಯುತ್‍ ಕಂಬಗಳಿಗೆ ಹಾನಿ

ಪುತ್ತೂರು: ಇಂದು ಮುಂಜಾನೆ  ಸುರಿದ ಭಾರೀ ಗಾಳಿ ಮಳೆಯಿಂದಾಗಿ ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಬಳಿ ಭಾರೀ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್‍ ಆದ ಘಟನೆ ನಡೆದಿದೆ. ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ವಿದ್ಯುತ್‍ ಕಂಬಗಳು ಧರೆಗುರುಳಿದೆ. ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ವೀಕ್ಷಿಸಿ ವಿದ್ಯುತ್‍ ಕಂಬಗಳನ್ನು ಸರಿಪಡಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಸೂಚನೆ ನೀಡಿದರು.

ಕೊಂಬೆಟ್ಟು ಬಳಿ ಧರೆಗುರುಳಿದ ಮರ : ವಿದ್ಯುತ್‍ ಕಂಬಗಳಿಗೆ ಹಾನಿ Read More »

ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ

ಉಡುಪಿ : ಮನೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಘಟನೆ ಉಡುಪಿ ತಾಲೂಕಿನ ಅಂಬಲಪಾಡಿಯ ಗಾಂಧಿನಗರದಲ್ಲಿ ನಡೆದಿದೆ. ಬೆಂಕಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ

ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ Read More »

ಭಾರೀ ಮಳೆ : ಇಂದು ದ.ಕ.ಜಿಲ್ಲಾದ್ಯಂತ ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ಇಂದು ದ.ಕ.ಜಿಲ್ಲಾದ್ಯಂತ ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಮಂಗಳೂರಿನ ಫಿಶ್‍ ಮಿಲ್‍ ನಲ್ಲಿ ಬೆಂಕಿ ಅವಘಡ | ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಮಂಗಳೂರು: ಅಥೆಂಟಿಕ್ ಓಪನ್ ಟ್ರೆಷರ್ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ. ಸುರತ್ಕಲ್ ನ ಎಸ್‍ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಿಶ ಮಿಲ್‍ ನಲ್ಲಿ ವಿದ್ಯುತ್ ಶಾರ್ಟ್‍ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮಂಗಳೂರಿನ ಫಿಶ್‍ ಮಿಲ್‍ ನಲ್ಲಿ ಬೆಂಕಿ ಅವಘಡ | ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ Read More »

ಬಸ್ಸಿನಲ್ಲಿ ಅಪ್ರಾಪ್ತ ಯುವತಿಗೆ ಕಿರುಕುಳ | ಆರೋಪಿಗೆ ಮಹಿಳೆಯರಿಂದ ಗೂಸಾ

ಮಂಗಳೂರು: ಮೌಲ್ವಿಯೊಬ್ಬ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತಗೆ ಕಿರುಕುಳ ನೀಡಿದ ಸಂದರ್ಭ ಬಾಲಕಿಯ ತಾಯಿ ಹಾಗೂ ಇತರ ಮಹಿಳಾ ಪ್ರಯಾಣಿಕರೇ ಸೇರಿ ಯದ್ವಾತದ್ವಾ ಗೂಸಾ ನೀಡಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಆರೋಪಿ ಪ್ರಯಾಣಿಸುತ್ತಿದ್ದ. ಈತನ ಪಕ್ಕದ ಸೀಟ್‌ನಲ್ಲಿ ಅಪ್ರಾಪ್ತಯೊಬ್ಬಳು ಕುಳಿತಿದ್ದಳು. ಬಸ್ ಸಕಲೇಶಪುರ ತಳುಪುತ್ತಿದ್ದ ವೇಳೆ ಬಾಲಕಿಯನ್ನು ಆರೋಪಿ ಮೆತ್ತಗೆ ಸ್ಪರ್ಶಿಸುತ್ತಿರುವುದನ್ನು ಗಮನಿಸಿ ಮತ್ತೊಂದು ಸೀಟ್‌ನಲ್ಲಿದ್ದ ಪ್ರಯಾಣಿಕ ವೀಡಿಯೋ ಮಾಡಿದ್ದಾನೆ. ಬಳಿಕ

ಬಸ್ಸಿನಲ್ಲಿ ಅಪ್ರಾಪ್ತ ಯುವತಿಗೆ ಕಿರುಕುಳ | ಆರೋಪಿಗೆ ಮಹಿಳೆಯರಿಂದ ಗೂಸಾ Read More »

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದ ಘಟನೆ ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದಾಗಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ. ಟ್ರಂಪ್‌ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ಶೂಟರ್ ಸೇರಿದಂತೆ ಇಬ್ಬರನ್ನು ಗುಂಡಿಕ್ಕಿ ಸಾಯಿಸಿದ್ದಾರೆ. ಗುಂಡಿನ ದಾಳಿಯ ಬಳಿಕ ಟ್ರಂಪ್ ಮುಖ ರಕ್ತಸಿಕ್ತವಾಗಿತ್ತು. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್‌ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿದೆ.

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ Read More »

ಕೆಎಸ್‍ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆ | ಶಕ್ತಿ ಯೋಜನೆ ನಷ್ಟವೇ ಕಾರಣ ?

ಬೆಂಗಳೂರು: ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಆರಂಭಿಸಿ ಒಂದು ವರ್ಷವಾಗಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಷ್ಟದಲ್ಲಿದೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಹೆಚ್ಚಿಸಲು ಚಿಂತನೆ ನಡೆಸಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ. ಕಾಗವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಸಂಸ್ಥೆ ನಷ್ಟ ಅನುಭವಿಸಿದೆ. ಡೀಸೆಲ್ ಮತ್ತು ಬಸ್ ಬಿಡಿ ಭಾಗಗಳ ಬೆಲೆಯೂ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಬಸ್

ಕೆಎಸ್‍ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆ | ಶಕ್ತಿ ಯೋಜನೆ ನಷ್ಟವೇ ಕಾರಣ ? Read More »

ಡೆಂಗ್ಯೂ ಜ್ವರಕ್ಕೆ ವ್ಯಕ್ತಿ ಬಲಿ !

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ (52) ಎಂಬವರು ಡೆಂಗ್ಯೂ ಜ್ವರಕ್ಕೆ ಬಲಿಯಾದವರು. ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಅವರು ಚಿಕಿತ್ಸೆಗೆ ಸ್ಪಂದಿಸದಿರುವ ಹಿನ್ನಲೆಯಲ್ಲಿ ಅವರನ್ನು

ಡೆಂಗ್ಯೂ ಜ್ವರಕ್ಕೆ ವ್ಯಕ್ತಿ ಬಲಿ ! Read More »

ನಾಳೆ (ಜು.15) : ‘ವಿವೇಕ ಸಂಜೀವಿನಿ’ ಹಸಿರು ಆವರಣ ಅಭಿಯಾನಕ್ಕೆ ಚಾಲನೆ

ಪುತ್ತೂರು: ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಶ್ರಯದಲ್ಲಿ ವಿಶೇಷ ಮೌಲ್ಯಗಳುಳ್ಳ ಔಷಧೀಯ ಸಸ್ಯಗಳು, ಹಣ್ಣು-ಹಂಪಲುಗಳ ಗಿಡಗಳು ಹಾಗೂ ಇತರ ಗಿಡ-ಮರಗಳನ್ನು ನೆಟ್ಟು ಇಳೆಯನ್ನು ಸಸ್ಯ ಶ್ಯಾಮಲೆಯಾಗಿಸುವ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನವನ್ನು ನಡೆಸಲಾಗುತ್ತಿದ್ದು, ಜು.15 ರಂದು ವಿವೇಕಾನಂದ ಪ್ರವೇಶ ದ್ವಾರದ ಬಳಿ ಚಾಲನೆ ನೀಡಲಾಗುವುದು. ಕಳೆದ ವರ್ಷ ವಿವೇಕ ಸಂಜೀವಿನಿ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಔಷಧೀಯ ಸಸ್ಯಗಳ ಪರಿಚಯ ಪ್ರಾತ್ಯಕ್ಷಿಯನ್ನು ನಡೆಸಲಾಗಿದ್ದು ವಿದ್ಯಾರ್ಥಿಗಳ ಮೂಲಕ ಸಹಸ್ರಾರು ಔಷಧೀಯ ಗುಣಗಳುಳ್ಳ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರ ಮುಂದುವರಿದ ಭಾಗವಾಗಿ

ನಾಳೆ (ಜು.15) : ‘ವಿವೇಕ ಸಂಜೀವಿನಿ’ ಹಸಿರು ಆವರಣ ಅಭಿಯಾನಕ್ಕೆ ಚಾಲನೆ Read More »

error: Content is protected !!
Scroll to Top