ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ ನಾಳೆ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್ […]

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ Read More »

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ ಎಂದಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಅಲೋಕ್ ಕುಮಾರ್, ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್‌ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಮೋದಿ ಅವರ ವಾಹನದಿಂದ

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್ Read More »

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ. 26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದ್ದು, ರೂ. 8 ಕೋಟಿ ವೆಚ್ಚದಲ್ಲಿ

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ Read More »

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ 99ನೇ ಆವೃತ್ತಿಯ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಮಾಸಿಕ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಅವರು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತದ ಯಶಸ್ಸು, ಮಹಿಳಾ ಸಬಲೀಕರಣ, ಅಂಗದಾನ ಜಾಗೃತಿ, ಕೋವಿಡ್ -19 ಸಾಂಕ್ರಾಮಿಕ ಮತ್ತು ಇತರ ಹಲವು ಪ್ರಮುಖ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮ ಮೊದಲ ಶೋ 3ನೇ ಅಕ್ಟೋಬರ್ 2014 ರಂದು ಪ್ರಸಾರವಾಗಿ ಇಂದು

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್ Read More »

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಬಿ ಸಿ ಚಂದ್ರಶೇಖರ್‌ ಅವರು ಐಪಿಸಿ ಸೆಕ್ಷನ್‌ 500ರ ಅಡಿ ಕ್ರಿಮಿನಲ್‌

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮರ್ಪಣೆಯಾಯಿತು. ಬೆಳಗ್ಗೆ ಶ್ರೀ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ ನಡೆದ ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆಗೆ ಚಾಲನೆ ನೀಡಲಾಯಿತು. ಬಳಿಕ ಮೆರವಣಿಗೆ ಮುಖ್ಯರಸ್ತೆಯಿಂದ ಹೊರಟು ದರ್ಬೆ, ಬೆದ್ರಾಳ ಮೂಲಕ ದೇವಸ್ಥಾನವನ್ನು ತಲುಪಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಯಿತು. ಸಂಜೆ

ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಹೊರೆಕಾಣಿಕೆ ಮೆರವಣಿಗೆ Read More »

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ

ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ದೆಹಲಿ : ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ ಇಂದು ದಿಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸತ್ಯಾಗ್ರಹ ನಡೆಸಲಿದೆ.ಜಾತಿ ನಿಂದನೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾದ ಬಳಿಕ ರಾಹುಲ್‌ ಗಾಂಧಿಯನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದು ಸರಕಾರದ ನಿರಂಕುಶ ನಡೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಡ್ರಾ ರಾಜ್‌ ಘಾಟ್‌ನಲ್ಲಿ ಸತ್ಯಾಗ್ರಹ

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ Read More »

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ

ಮಗನಿಂದ ಕ್ಷೇತ್ರ ಕಸಿದುಕೊಂಡ ಅಪವಾದದಿಂದ ಪಾರಾಗಲು ತಂತ್ರ ಬೆಂಗಳೂರು : ಈಗಾಗಲೇ ಪುತ್ರ ಡಾ.ಯತೀಂದ್ರ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಪಡೆದುಕೊಂಡಿರುವ ಸಿದ್ದರಾಮಯ್ಯ ಇದೀಗ ಇನ್ನೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಅವರು ಈ ಹಿಂದೆ 2008 ಮತ್ತು 2013ರಲ್ಲಿ ವರುಣಾದಿಂದ ಎರಡು ಬಾರಿ ಗೆದ್ದಿದ್ದರು ಮತ್ತು 2013ರಲ್ಲಿ ಇಲ್ಲಿಂದ ಗೆದ್ದು ಮುಖ್ಯಮಂತ್ರಿಯಾಗಿ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದು ತನ್ನ ಪಾಲಿಗೆ ಲಕ್ಕಿ ಕ್ಷೇತ್ರ ಎಂದು ಸಿದ್ದರಾಮಯ್ಯ ಪರಿಗಣಿಸಿದ್ದಾರೆ. ಅದರೆ ಮಗನ

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ Read More »

ಅಮೆರಿಕದಲ್ಲಿ ಸುಂಟರಗಾಳಿಗೆ 26 ಜನರ ಬಲಿ

ಗಿರಗಿರ ತಿರುಗಿದ ಕಾರುಗಳು; ಮನೆ, ಕಟ್ಟಡ ನೆಲಸಮ ವಾಷಿಂಗ್ಟನ್‌ : ಅಮೆರಿಕದ ಮಿಸ್ಸಿಸ್ಸಿಪ್ಪಿಯಲ್ಲಿ ಶುಕ್ರವಾರ ರಾತ್ರಿ ಬೀಸಿದ ಅತ್ಯಂತ ಪ್ರಬಲ ಸುಂಟರಗಾಳಿಗೆ ಕನಿಷ್ಠ 26 ಜನರು ಬಲಿಯಾಗಿದ್ದಾರೆ. ಕೆಲವೆಡೆ ಗಾಳಿ ಕಾರುಗಳನ್ನೆ ಗಿರಗಿರ ತಿರುಗಿಸಿ ಒಗೆದಿದೆ. ಗಾಳಿಯ ರುದ್ರನರ್ತನಕ್ಕೆ ಜನರು ಕಂಗಲಾಗಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಜೀಸಸ್‌ ನಮ್ಮನ್ನು ರಕ್ಷಿಸು ಎಂಬ ಕರೆಗಳು ಸಹಾಯವಾಣಿಗೆ ಬರುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಂಟರಗಾಳಿಗೆ ಮನೆ, ಕಟ್ಟಡಗಳು ಉರುಳಿವೆ. ನೂರಾರು ಜನರು ಗಾಯಗೊಂಡಿರುವ ಶಂಕೆಯಿದೆ. ಅಲಬಾಮಾದಲ್ಲಿಯೂ ಒಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.ಪ್ರಬಲ

ಅಮೆರಿಕದಲ್ಲಿ ಸುಂಟರಗಾಳಿಗೆ 26 ಜನರ ಬಲಿ Read More »

error: Content is protected !!
Scroll to Top